ಚಿತ್ರದುರ್ಗ: ನಾಯಕ ಸಮುದಾಯವನ್ನು ಅವಾಚ್ಯ ಶಬ್ದಗಳಿಂನಿಂದಿಸಿದ ರಮೇಶ್ ಕತ್ತಿಯವರನ್ನು ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿ ಅವರ ಮೇಲೆ ಸೂಕ್ತವಾದ ಕ್ರಮವನ್ನು ತೆಗೆದುಕೊಳ್ಳುವಂತೆ ಆಗ್ರಹಿಸಿ ಸೋಮವಾರ ನಗರದಲ್ಲಿ ಪ್ರತಿಭಟನೆಯನ್ನು ನಡೆಸಿ, ಡಿವೈಎಸ್ಪಿಯವರಿಗೆ ದೂರು ನೀಡಿದ ಚಿತ್ರದುರ್ಗ ನಾಯಕ ಸಮಾಜ ಸರ್ಕಾರವನ್ನು ಆಗ್ರಹಿಸಿದೆ.ಬೆಳಗಾವಿ ಬಿ.ಕೆ ಮಾಡೆಲ್ ಹೈಸ್ಕೂಲ್ ಮೈದಾನದಲ್ಲಿ ಡಿಸಿಸಿ ಬ್ಯಾಂಕಿನ ಚುನಾವಣಾ ಮತದಾನ ಪ್ರಕ್ರಿಯೆ ನಡೆಯುತ್ತಿರುವ ಸಂದರ್ಭದಲ್ಲಿ ಮಾಜಿ ಸಂಸದಬೆಲ್ಲದ ಬಾಗೇವಾಡಿಯ ರಮೇಶ ಕತ್ತಿಯವರು ವಾಲ್ಮೀಕಿ ಸಮುದಾಯದ ಕುರಿತು ”ಬ್ಯಾಡರ ಸೂಳೆ ಮಕ್ಕಳು” ಎಂಬ ಅವಾಚ್ಯ ಶಬ್ದಗಳಿಂದ ಬೈದು ಜಾತಿ ನಿಂದನೆ ಮಾಡಿ ಅವಮಾನಿಸಿದ್ದಾರೆ.
ಇದರಿಂದ ರಾಜ್ಯದಾದ್ಯಂತ 75 ಲಕ್ಷ ವಾಲ್ಮೀಕಿ ಸಮುದಾಯದ ಮನಸ್ಸಿಗೆ ತೀವ್ರಘಾಸಿ, ಭಾವನೆಗಳಿಗೆ ಧಕ್ಕೆಯಾಗಿದೆ. ಈ ವಿಡಿಯೋ ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗಿದ್ದು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುವ ಸಂಭವವಿದೆ. ಇದರಿಂದ ಜಿಲ್ಲೆಯ ಬೇರೆ ಬೇರೆ ಸಮುದಾಯಗಳ ಮಧ್ಯೆ ತೀವ್ರ ಘರ್ಷಣೆ ಉಂಟಾಗುವ ಸಂಭವವಿದೆ. ರಮೇಶ್ ಕತ್ತಿ ಸತತವಾಗಿ ವಾಲ್ಮೀಕಿ ಸಮುದಾಯಕ್ಕೆ ಅವಹೇಳನಕಾರಿಯಾಗಿ ಬಿಂಬಿಸುವ ಕೆಲಸ ಮಾಡಿರುತ್ತಾನೆ. ಮೇಲು-ಕೀಳು ಭಾವನೆಗಳಿಗೆ ಚಾಲನೆ ನೀಡುವುದರ ಮೂಲಕ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಸಂವಿಧಾನವನ್ನು ಅವಮಾನಿಸಿದ್ದಲ್ಲದೇ, ಕೆಳ ಸಮುದಾಯಗಳ ಭಾವನೆಗಳಿಗೆ ಘಾಸಿ ಉಂಟುಮಾಡಿರುತ್ತಾರೆ ಎಂದು ದೂರಿದ್ದಾರೆ.ಈಗ ಕೇವಲ ಸಾಂಕೇತಿಕವಾಗಿ ನಾಯಕ ಸಮುದಾಯ ಪ್ರತಿಭಟನೆಯನ್ನು ಮಾಡುತ್ತಿದೆ. ಒಂದು ವಾರದಲ್ಲಿ ರಮೇಶ್ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳದಿದ್ದರೆ, ರಾಜ್ಯವ್ಯಾಪಿ ಹೋರಾಟ ಕೈಗೆತ್ತಿಕೊಳ್ಳಲಾಗುವುದು. ದಲಿತ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಯಾವುದೇ ಮೇಲ್ವರ್ಗದ ಜನತೆ ತಳ ವರ್ಗದ ಜನರನ್ನು ಜಾತಿ ಹಿಡಿದು ನಿಂದಿಸಿದರೆ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ಇದನ್ನು ಉಪಯೋಗಿಸಿಕೊಂಡು ರಮೇಶ್ ಕತ್ತಿಯವರ ಮೇಲೆ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಲಾಯಿತು.
ರಮೇಶ ಕತ್ತಿಯವರು ದಲಿತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿರುತ್ತಾನೆ. ಈತನ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮ ಕೈಕೊಳ್ಳಲು ಮನವಿ ಮಾಡಲಾಯಿತು.ಇದಕ್ಕೂ ಮುನ್ನ ನಗರದ ಪ್ರವಾಸಿ ಮಂದಿರದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೂ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ, ರಮೇಶ್ ಕತ್ತಿಯವರ ವಿರುದ್ದ ಘೋಷಣೆಗಳನ್ನು ಕೂಗಲಾಯಿತು. ಇದೇ ಸಂದರ್ಭದಲ್ಲಿ ನಾಯಕ ಸಮುದಾಯದವರು ಡಿವೈಎಸ್ಪಿಯವರಿಗೆ ರಮೇಶ್ ಕತ್ತಿಯವರ ವಿರುದ್ದ ದೂರನ್ನು ನೀಡಲಾಯಿತು.ಈ ಸಂದರ್ಭದಲ್ಲಿ ಚಿತ್ರದುರ್ಗ ನಾಯಕ ಸಮಾಜ(ರಿ.)ದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ, ಮುಖಂಡರುಗಳಾದ ಗೋಪಾಲಸ್ವಾಮಿ ನಾಯಕ್, ನಗರಸಭಾ ಸದಸ್ಯರಾದ ದೀಪು, ಡಿಸಿಸಿ ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್, ಎಸ್.ಟಿ. ಸೆಲ್ ಅಧ್ಯಕ್ಷ ಮಂಜುನಾಥ್, ಅಂಜಿನಪ್ಪ, ತಿಪ್ಪೇಸ್ವಾಮಿ ಎಟಿಎಸ್, ಲಿಂಗವ್ವನಾಗ್ತಿಹಳ್ಳಿ ತಿಪ್ಪೇಸ್ವಾಮಿ, ತಿಮ್ಮರಾಜು, ಶೇಖರಪ್ಪ, ರಾಜಪ್ಪ ರಮೇಶ್, ಮಂಜಣ್ಣ, ಸಿದ್ದಪ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.







