Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಸಂವಿಧಾನದ ಆಶಯಗಳನ್ನು ಪಾಲಿಸುವುದು ನಮ್ಮೆಲ್ಲರ ಹೊಣೆ
ಚಿತ್ರದುರ್ಗ

ಸಂವಿಧಾನದ ಆಶಯಗಳನ್ನು ಪಾಲಿಸುವುದು ನಮ್ಮೆಲ್ಲರ ಹೊಣೆ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿJanuary 27, 2026Updated:January 27, 2026No Comments2 Mins Read
Share WhatsApp Facebook Twitter Threads Telegram
Follow Us
Facebook Instagram
goverment hospital chitardurga
Share
WhatsApp Twitter Facebook Telegram

ಚಿತ್ರದುರ್ಗ, ಡಾ. ಬಿ.ವೈ. ಯುವರಾಜ್

ಭಾರತದ ಇತಿಹಾಸದಲ್ಲಿ ಜನವರಿ 26 ಒಂದು ಸುವರ್ಣ ದಿನ. ಈ ದಿನದಂದು ನಮ್ಮ ದೇಶವು ತನ್ನದೇ ಆದ ಸಂವಿಧಾನವನ್ನು ಅಳವಡಿಸಿಕೊಂಡು ಸಂಪೂರ್ಣ ಗಣರಾಜ್ಯವಾಯಿತು. ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ‍್ಯ ಮತ್ತು ನ್ಯಾಯವನ್ನು ಒದಗಿಸಿದೆ. ಇಂತಹ ಸಂವಿಧಾನ ಆಶಯಗಳನ್ನು ಪಾಲಿಸುವುದು ನಮ್ಮಲ್ಲರ ಹೊಣೆ ಎಂದು ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ. ಬಿ.ವೈ. ಯುವರಾಜ್ ಹೇಳಿದರು.

ನಗರದ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಡೆದ 77ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

1947ರಲ್ಲಿ ನಮಗೆ ಸ್ವಾತಂತ್ರ‍್ಯ ಸಿಕ್ಕಿದ್ದರೂ, ಜನವರಿ 26, 1950ರಂದು ಸಂವಿಧಾನ ಜಾರಿಗೆ ಬಂದಾಗ ಮಾತ್ರ ನೈಜ ಅರ್ಥದಲ್ಲಿ ‘ಪ್ರಜಾಪ್ರಭುತ್ವ’ ಆರಂಭವಾಯಿತು. ಡಾ. ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ನಮ್ಮ ಸಂವಿಧಾನವು ವಿಶ್ವದಲ್ಲೇ ಅತ್ಯಂತ ಶ್ರೇಷ್ಠವಾದುದು. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹಾತ್ಮ ಗಾಂಧೀಜಿ, ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಅಂತಹ ಮಹನೀಯರನ್ನು ಹಾಗೂ ಗಡಿಯಲ್ಲಿ ನಮ್ಮನ್ನು ಕಾಯುತ್ತಿರುವ ವೀರ ಯೋಧರನ್ನು ಸ್ಮರಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಡಾ. ಬಿ.ವೈ. ಯುವರಾಜ್

ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು ಅತ್ಯಲ್ಪ ಅವಧಿಯಲ್ಲಿ ಗಮನಾರ್ಹ ಸಾಧನೆ ಮಾಡಿದೆ. ಕರ್ನಾಟಕದ ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಎರಡನೇ ಅತಿ ಹೆಚ್ಚು ಅಂಕ ಗಳಿಸಿದ್ದು, ರಾಜ್ಯ ಮಟ್ಟದಲ್ಲಿ ಕಾಲೇಜು 7ನೇ ಸ್ಥಾನ ಪಡೆದಿದೆ. ಮುಂಬರುವ ವರ್ಷಗಳಲ್ಲಿ ಎಂಡಿ (MD) ಮತ್ತು ಎಂಎಸ್ (MS) ಸ್ನಾತಕೋತ್ತರ ಕೋರ್ಸ್ಗಳನ್ನು ಆರಂಭಿಸುವ ಗುರಿ ಹೊಂದಲಾಗಿದೆ. ಅಲ್ಲದೆ, ನೂತನ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿ ನರ್ಸಿಂಗ್ ಹಾಗೂ ಫಿಸಿಯೋಥೆರಪಿ ಕೋರ್ಸ್ಗಳ ವಿಸ್ತರಣೆಗೆ ಸಿದ್ಧತೆ ನಡೆಸಲಾಗಿದೆ ಎಂದು ಡಾ. ಬಿ.ವೈ. ಯುವರಾಜ್ ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ರವೀಂದ್ರ ಎಸ್.ಪಿ. ಮಾತನಾಡಿ, ಆಸ್ಪತ್ರೆಯ ಸಿಬ್ಬಂದಿಗಳು ಸಾರ್ವಜನಿಕ ಸೇವೆಯಲ್ಲಿ ತಮ್ಮನ್ನು ಪೂರ್ಣವಾಗಿ ತೊಡಗಿಸಿಕೊಳ್ಳಬೇಕೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಆರ್.ಎಂ.ಓ ಡಾ. ಆನಂದ್ ಪ್ರಕಾಶ್, ಸಹಾಯಕ ಆಡಳಿತಾಧಿಕಾರಿ ಶಿವುಗಾನಾಯ್ಕ್, ಪ್ರಾಂಶುಪಾಲರಾದ ರಾಜಯ್ಯ ಹಾಗೂ ವೈದ್ಯಕೀಯ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶುಶ್ರೂಷಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆಗಳ ಗಾಯನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಗಮನ ಸೆಳೆದವು.

chitradurga karanataka republic day ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ವೈದ್ಯಕೀಯ ಕಾಲೇಜು
Follow on Facebook Follow on Instagram
Share. Facebook Twitter WhatsApp Telegram
Previous Articleವಾರ್ತಾ ಇಲಾಖೆಯಲ್ಲಿ ಗಣರಾಜ್ಯೋತ್ಸವ ಆಚರಣೆ
Next Article ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ಜಾತ್ರೆ ರಥೋತ್ಸವ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

February 4, 2026

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

February 3, 2026

ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ, ಸಚಿವ ತಿಮ್ಮಾಪುರ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

February 3, 2026
Add A Comment
Leave A Reply Cancel Reply

Advertisement
Demo
Latest Posts

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ, ಸಚಿವ ತಿಮ್ಮಾಪುರ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.