ಚಿತ್ರದುರ್ಗ, ಮೇ.20: ಜಿಲ್ಲೆಯಲ್ಲಿ ಅಧಿಕೃತ ಪರವಾನಿಗೆ ಪಡೆದಿರುವ ರಸಗೊಬ್ಬರ ಮಾರಾಟಗಾರರು ಯಾವುದೇ ಸಂದರ್ಭದಲ್ಲಿ ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಠ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಬಾರದು ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ಸೂಚನೆ ನೀಡಿದ್ದಾರೆ.
ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಉತ್ತಮವಾದ ಮಳೆಯಾಗುತ್ತಿದ್ದು, ರೈತರು ಬಿತ್ತನೆ ಬೀಜ ಮತ್ತು ವಿವಿಧ ರಸಗೊಬ್ಬರಗಳನ್ನು ಕೊಂಡು ಬಿತ್ತನೆ ಕಾರ್ಯದಲ್ಲಿ ತೊಡಗಿಕೊಳ್ಳುತ್ತೀದ್ದಾರೆ. ಆದರೆ ಜಿಲ್ಲೆಯಲ್ಲಿ ಅಲ್ಲಲ್ಲಿ ರಸಗಗೊಬ್ಬರಗಳನ್ನು ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಠ ಬೆಲೆಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ರೈತರಿಂದ ಹಾಗೂ ವಿವಿಧ ರೈತ ಸಂಘಟನೆಗಳ ಮುಖಂಡರಿಂದ ದೂರುಗಳು ಸ್ವೀಕೃತವಾಗುತ್ತಿವೆ.
ಆದುದರಿಂದ ಜಿಲ್ಲೆಯಲ್ಲಿ ಅಧಿಕೃತ ಪರವಾನಿಗೆ ಪಡೆದಿರುವ ರಸಗೊಬ್ಬರ ಮಾರಾಟಗಾರರು ಯಾವುದೇ ಸಂದರ್ಭದಲ್ಲಿ ರಸಗೊಬ್ಬರಗಳ ಚೀಲದ ಮೇಲೆ ಮುದ್ರಿತವಾದ ಗರಿಷ್ಠ ಬೆಲೆಗಿಂತ ಹೆಚ್ಚಿನ ಬೆಲೆಗೆ ರಸಗೊಬ್ಬರಗಳನ್ನು ಮಾರಾಟ ಮಾಡಬಾರದು. ಕಡ್ಡಾಯವಾಗಿ ರಸಗೊಬ್ಬರಗಳ ದರ ಪಟ್ಟಿ ಮತ್ತು ದೈನಂದಿನ ದಾಸ್ತಾನನ್ನು ತಮ್ಮ ಮಾರಾಟ ಮಳಿಗೆಗಳ ಮುಂದೆ ಸಾರ್ವಜನಿಕವಾಗಿ ಕಾಣುವಂತೆ ನಾಮಫಲಕ ಪ್ರದರ್ಶಿಸಬೇಕು. ತಪ್ಪಿದಲ್ಲಿ ರಸಗೊಬ್ಬರ (ನಿರವಯವ, ಸಾವಯವ ಅಥವಾ ಮಿಶ್ರಿತ) (ನಿಯಂತ್ರಣ) ಆದೇಶ, 1985ರ ನಿಯಮಾವಳಿಗಳ ಅನ್ವಯ ಕಾನೂನು ಕ್ರಮ ಜರುಗಿಸಲಾಗುವುದು.
ಕೃತಕ ರಸಗೊಬ್ಬರ ಅಭಾವ ಸೃಷ್ಟಿಸಿದ್ದು ಕಂಡುಬಂದಲ್ಲಿ ರಸಗೊಬ್ಬರ ಮಾರಾಟ ಪರವಾನಗಿಯನ್ನು ಅಮಾನತ್ತು/ರದ್ದುಪಡಿಸಲು ಕ್ರಮವಹಿಸಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕ ಬಿ.ಮಂಜುನಾಥ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



