ಚಿತ್ರದುರ್ಗ: ಚಿತ್ರದುರ್ಗದ ಮಾದಾರ ಚನ್ನಯ್ಯ ಗುರುಪೀಠದ ಡಾ. ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಈ ಬಾರಿ ಉಡುಪಿಯ ಅಮೋಘ ಸಾಂಸ್ಕತಿಕ- ಸಾಮಾಜಿಕ-ಸಾಹಿತ್ಯಿಕ ಸಂಸ್ಥೆ ಕೊಡ ಮಾಡುವ ಪ್ರತಿಷ್ಟಿತ ‘‘ಸಾಮರಸ್ಯ’’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಉಡುಪಿಯ ಎಂ.ಜಿ.ಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಮೇ 24ರ ಶನಿವಾರ ಸಂಜೆ 4 ಗಂಟೆಗೆ ನೆರವೇರಲಿದೆ.
ಚಿತ್ರದುರ್ಗದ ಶ್ರೀಶಿವಶರಣ ಮಾದಾರ ಚನ್ನಯ್ಯ ಗುರುಪೀಠವು ಹೆಸರಿನಿಂದ ಜಾತಿ ಸೂಚಕವಾಗಿದ್ದರೂ ಪೀಠಧ್ಯಕ್ಷರಾದ ಸ್ವಾಮೀಜಿಯವರು ಸಮಾಜದ ಎಲ್ಲ ಜಾತಿ ವರ್ಗಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಸಮಾಜದಲ್ಲಿ ನೆಲೆಯೂರಿರುವ ಮೇಲು-ಕೀಳು ಭಾವನೆಗಳು ಮೂಢನಂಬಿಕೆ ಕಂದಾಚಾರ ಜಾತೀಯತೆ ನಿರ್ಮೂಲನೆಗೆ ಸದಾ ಶ್ರಮಿಸುತ್ತಿದ್ದಾರೆ.
ಮಾನವ ಸಂಘ ಜೀವಿ ಸಮಾಜದಲ್ಲಿ ಸಹಬಾಳ್ವೆ ನಡೆಸುವಾಗ ಎಲ್ಲ ಜಾತಿ ವರ್ಗಗಳ ಜನರು ಪರಸ್ಪರ ಹೊಂದಿಕೊಂಡು ಬಾಳಿದಾಗ ಮಾತ್ರ ಮಾನವನ ಅಭ್ಯುದಯ ಸಾಧ್ಯ ಎಂದು ಬಲವಾಗಿ ಪ್ರತಿಪಾದಿಸಿಕೊಂಡು ಬರುತ್ತಿದ್ದಾರೆ. ಶ್ರೀಗಳ ಈ ಸಾಮಾಜಿಕ ಸಾಮರಸ್ಯದ ನಿರಂತರ ಬದ್ಧತೆಯನ್ನು ಗುರುತಿಸಿ ಪ್ರಶಸ್ತಿಗೆ ಪರಿಗಣಿಸಲಾಗಿದೆ ಎಂದು ಅಮೋಘ ಸಂಸ್ಥೆ ತಿಳಿಸಿದೆ.
ಸಮಾರಂಭದಲ್ಲಿ ಖ್ಯಾತ ಸಂಶೋಧಕರಾದ ಡಾ.ಪಾದೇಕಲ್ಲು ವಿಷ್ಣು ಭಟ್, ಮಣಿಪಾಲ ಮಾಹೆ ಉಪ ಕುಲಾಪತಿಗಳಾದ ಡಾ.ಎಚ್.ಎಸ್. ಬಲ್ಲಾಳ್, ಸಾಮಾಜಿಕ ಕಾರ್ಯಕರ್ತ ವಾದಿರಾಜ್, ಉಡುಪಿ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಎಂಜಿಎಂ ಕಾಲೇಜಿನ ಪ್ರಾಚಾರ್ಯರಾದ ಪ್ರೊ.ಲಕ್ಷ್ಮಿ ನಾರಾಯಣ ಕಾರಂತ, ಲೇಖಕಿ ಪಾರ್ವತಿ ಬಿ.ಐತಾಳ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



