Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ: ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
ಜಿಲ್ಲಾ ಸುದ್ದಿ

ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ: ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿJanuary 28, 2026No Comments2 Mins Read
Share WhatsApp Facebook Twitter Threads Telegram
Follow Us
Facebook Instagram
ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ: ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
Share
WhatsApp Twitter Facebook Telegram

ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ: ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಚಿತ್ರದುರ್ಗ
ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಪರಿಶಿಷ್ಟ  ವರ್ಗದ ಕಾನೂನು ಪದವೀಧರರನ್ನು ಆಯ್ಕೆ ಮಾಡಬೇಕಾಗಿರುವುದರಿಂದ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಫೆ.16 ಅರ್ಜಿ ಸಲ್ಲಿಸಲು ಕೊನೆಯ ದಿನ.
ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮದಡಿ ಮಾಸಿಕ ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕಾಲಮಿತಿಯ ಬದಲು ವರ್ಷದ ಎಲ್ಲ ದಿನಗಳಲ್ಲೂ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
2026ರ ಜನವರಿ 27 ರಿಂದ ಫೆಬ್ರವರಿ 16ರವರೆಗೆ ಆನ್‍ಲೈನ್ tw.kar.nic.in  ನಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳವರ ಕಚೇರಿ, ಚಿತ್ರದುರ್ಗ  ಇಲ್ಲಿಗೆ ಸಲ್ಲಿಸಲು 2026ರ ಫೆಬ್ರವರಿ 16 ಕೊನೆಯ ದಿನವಾಗಿದೆ.

ಷರತ್ತುಗಳು:

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪರಿಶಿಷ್ಟ  ವರ್ಗಕ್ಕೆ ಸೇರಿದವರಾಗಿರಬೇಕು. ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ದಿನಾಂಕಕ್ಕೆ ಕಾನೂನು ಪದವಿಯನ್ನು ಪಡೆದು 02 ವರ್ಷ ಮೀರಿರಬಾರದು. ಬಾರ್ ಕೌನ್ಸಿಲಿಂಗ್‍ನ ಖಾಯಂ ಸದಸ್ಯತ್ವ ಪ್ರಮಾಣ ಪತ್ರ ಸಲ್ಲಿಸಬೇಕು ಹಾಗೂ ತರಬೇತಿಯನ್ನು ಜಿಲ್ಲೆಯಲ್ಲಿಯೇ ಪಡೆಯಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದಂದು ಅಭ್ಯರ್ಥಿಯ ವಯಸ್ಸು 40 ವರ್ಷ ಮೀರಿರಬಾರದು. ಆಯ್ಕೆ ಮಾಡಲಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಸರ್ಕಾರದ ಆದೇಶದಂತೆ ಶಿಷ್ಯ ವೇತನವನ್ನು ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್, ಸರ್ಕಾರಿ ವಕೀಲರು ಅಥವಾ 20 ವರ್ಷಗಳ ಕಾಲ ಕಡಿಮೆ ಇಲ್ಲದ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸಿರುವ ನ್ಯಾಯವಾದಿಗಳ ಬಳಿ ತರಬೇತಿ ಪಡೆಯುತ್ತೀರಿ ಎಂಬ ಬಗ್ಗೆ ಲಿಖಿತ ರೂಪದಲ್ಲಿ ತಿಳಿಸಿರಬೇಕು.

ತರಬೇತಿಯ ಅವಧಿ 02 ವರ್ಷವಿದ್ದು, ಆಯ್ಕೆಯಾದ ಅಭ್ಯರ್ಥಿಗಳು ಮಧ್ಯದಲ್ಲಿ ಬಿಡುವುದಿಲ್ಲ ಎಂದು, ಒಂದು ವೇಳೆ ಬಿಟ್ಟರೆ ತರಬೇತಿ ಅವಧಿಯಲ್ಲಿ ಪಡೆದಿರುವ ಶಿಷ್ಯ ವೇತನವನ್ನು ಶೇ.10ರಷ್ಟು ರೂಗಳ ಬಡ್ಡಿಯೊಂದಿಗೆ ಸರ್ಕಾರಕ್ಕೆ ಹಿಂತಿರುಗಿಸಿ ಮರುಪಾವತಿ ಮಾಡುವುದಾಗಿ ಮುಚ್ಚಳಿಕೆ ಬರೆದು ಕೊಡಬೇಕು. ಈ ನಿಯಮ ರಾಜ್ಯ ಮತ್ತು ಕೇಂದ್ರ ಸರ್ಕಾರದಲ್ಲಿ ನೌಕರಿ ಪಡೆದರೆ ಅನ್ವಯಿಸುವುದಿಲ್ಲ. ಆಯ್ಕೆಯಾದ ಅಭ್ಯರ್ಥಿಗಳು ಸುಳ್ಳು ಮಾಹಿತಿ ಹಾಗೂ ಸುಳ್ಳು ದಾಖಲೆಗಳನ್ನು ನೀಡಿ ಆಯ್ಕೆಯಾಗಿ ಶಿಷ್ಯ ವೇತನ ಪಡೆದರೆ ಅಂತಹ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಪಡೆದ ಶಿಷ್ಯ ವೇತನವನ್ನು ಒಟ್ಟಿಗೆ ಶೇ.10ರ ಬಡ್ಡಿಯಲ್ಲಿ ಸರ್ಕಾರಕ್ಕೆ ಹಿಂತಿರುಗಿಸಿ ಕಟ್ಟಬೇಕು.ತಪ್ಪಿದರೆ ಭೂ ಕಂದಾಯ ಬಾಕಿ ವಸೂಲಿಯಂತೆ ವಸೂಲಿ  ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ನಿಗಧಿತ ದಿನಾಂಕದೊಳಗೆ ಹಾಜರಾಗದಿದ್ದರೆ ಅಂತಹವರ ಆಯ್ಕೆಯನ್ನು ರದ್ದು ಪಡಿಸಲಾಗುವುದು. ಪರಿಶಿಷ್ಠ ವರ್ಗದ ಕಾನೂನು ಪದವಿಧರರ ವಾರ್ಷಿಕ ವರಮಾನದ ಮೊತ್ತ 2,50,000/- ಒಳಗಡೆ ಇರಬೇಕು. ಅರ್ಜಿಯೊಂದಿಗೆ ಸಲ್ಲಿಸುವ ಎಲ್ಲಾ ದಾಖಲಾತಿಗಳನ್ನು ಗೆಜೆಟೆಡ್ ಅಧಿಕಾರಿಗಳಿಂದ ದೃಢೀಕರಿಸಿರಬೇಕು, ತಪ್ಪಿದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಜಿಲ್ಲಾ ಪರಿಶಿಷ್ಠ ವರ್ಗಗಳ  ಕಲ್ಯಾಣಾಧಿಕಾರಿ ಹೆಚ್. ದಿವಾಕರ್ ತಿಳಿಸಿದ್ದಾರೆ.

chitradurga karanataka ಆಡಳಿತ ನ್ಯಾಯಾಧೀಕರಣ ಚಿತ್ರದುರ್ಗ
Follow on Facebook Follow on Instagram
Share. Facebook Twitter WhatsApp Telegram
Previous Articleಆದರ್ಶ ವಿದ್ಯಾಲಯ: 6ನೇ ತರಗತಿ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನ
Next Article ಉಚಿತ ತರಬೇತಿ ಶೀಬಿರ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

February 5, 2026

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

February 4, 2026

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

February 3, 2026
Add A Comment
Leave A Reply Cancel Reply

Advertisement
Demo
Latest Posts

ಸಿದ್ದರಾಮಯ್ಯ ಸರ್ಕಾರದ ಭ್ರಷ್ಟಾಚಾರದ ಮುಖವಾಡ ಕಿತ್ತು ಹಾಕಿದ್ದೇವೆ; ಕಾಂಗ್ರೆಸ್ಸಿನ ಬಣ್ಣ ಬಯಲು ಮಾಡುವಲ್ಲಿ ಯಶಸ್ವಿ: ವಿಪಕ್ಷ ನಾಯಕ ಅಶೋಕ್‌* 

ಅಧಿಕಾರಿಗಳು ಮಂತ್ರಿಗಳ ಹೆಸರನ್ನು ದುರ್ಬಳಕೆ ಮಾಡಿಕೊಂಡರೆ ಅದಕ್ಕೆ ಮಂತ್ರಿಗಳು ಹೇಗೆ ಹೊಣೆಗಾರರಾಗುತ್ತಾರೆ-ಆರ್.ಬಿ.ತಿಮ್ಮಾಪುರ

ಚಿತ್ರದುರ್ಗ ವೈದ್ಯಕೀಯ ಕಾಲೇಜು ನೇಮಕಾತಿ: ಮಧ್ಯವರ್ತಿಗಳ ಬಗ್ಗೆ ಎಚ್ಚರ

ಅಬಕಾರಿ ಇಲಾಖೆಯಲ್ಲಿ ಲಂಚ, ವರ್ಗಾವಣೆ ದಂಧೆ, ಸಚಿವ ತಿಮ್ಮಾಪುರ ರಾಜೀನಾಮೆ ನೀಡಲಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.