ಬೆಂಗಳೂರು, ಜೂನ್ 07: ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಗೌರವಾನ್ವಿತ ಉಪ ರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಅವರು ಇಂದು ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಗೌರವಾನ್ವಿತ ಉಪ ರಾಷ್ಟ್ರಪತಿಗಳನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೂಗುಚ್ಚ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಈ ಸಮಯದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ. ಸುಧಾಕರ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ವೀರಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕರಾದ ಡಾ. ಎಂ.ಎ. ಸಲೀಂ, ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಸೀಮಂತ್ ಕುಮಾರ್ ಸಿಂಗ್, ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ್. ಜಿ. ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



