Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಅಮ್ಮನೆಂಬ ಆರಾಧನೆ ಮತ್ತು ಆಕೆಯ ಒಳಗಿನ ಮನುಷ್ಯತ್ವ: ಒಂದು ಆತ್ಮಾವಲೋಕನ

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಚಿತ್ರದುರ್ಗ ನೂತನ ಡಿಸಿ ಆಫೀಸ್ ಕಟ್ಟಡಕ್ಕೆ ಭೂಮಿ ನೀಡಲು ತೋಟಗಾರಿಕೆ ಇಲಾಖೆ ಸಚಿವರ ಸಮ್ಮತಿ
ಚಿತ್ರದುರ್ಗ

ಚಿತ್ರದುರ್ಗ ನೂತನ ಡಿಸಿ ಆಫೀಸ್ ಕಟ್ಟಡಕ್ಕೆ ಭೂಮಿ ನೀಡಲು ತೋಟಗಾರಿಕೆ ಇಲಾಖೆ ಸಚಿವರ ಸಮ್ಮತಿ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿFebruary 27, 2026No Comments2 Mins Read
Share WhatsApp Facebook Twitter Threads Telegram
Follow Us
Facebook Instagram
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1},"is_sticker":false,"edited_since_last_sticker_save":true,"containsFTESticker":false}
Share
WhatsApp Twitter Facebook Telegram

 ಚಿತ್ರದುರ್ಗ ನೂತನ ಡಿಸಿ ಆಫೀಸ್ ಕಟ್ಟಡಕ್ಕೆ ಭೂಮಿ ನೀಡಲು ತೋಟಗಾರಿಕೆ ಇಲಾಖೆ ಸಚಿವರ ಸಮ್ಮತಿ

ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡ ನಿರ್ಮಾಣಕ್ಕೆ ತೋಟಗಾರಿಕೆ ಇಲಾಖೆಯ 6.30 ಎಕರೆ ಭೂಮಿಯನ್ನು ನೀಡಲು ತೋಟಗಾರಿಕೆ ಇಲಾಖೆ ಸಚಿವರು ಸಮ್ಮತಿ ಸೂಚಿಸಿದ್ದು, ಚಿತ್ರದುರ್ಗ ನಗರ ಸಮೀಪದ ಕುಂಚಿಗನಾಳು ಹತ್ತಿರ ನಿರ್ಮಾಣ ಮಾಡಲಾಗಿರುವ ಜಿಲ್ಲಾಧಿಕಾರಿಗಳ ನೂತನ ಕಚೇರಿ ಕಟ್ಟಡವನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸಲು ಗುರುವಾರದಂದು ಬೆಂಗಳೂರಿನಲ್ಲಿ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಜಂಟಿಯಾಗಿ ನಡೆಸಿದ ಮಹತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

ಚಿತ್ರದುರ್ಗ ಜಿಲ್ಲೆಯ ಕುಂಚಿಗನಾಳು ಹತ್ತಿರ ನಿರ್ಮಾಣ ಮಾಡಲಾಗಿರುವ ನೂತನ ಜಿಲ್ಲಾಧಿಕಾರಿಗಳ ಕಚೇರಿಯು ಚಿತ್ರದುರ್ಗ ನಗರದಿಂದ ದೂರವಿದ್ದು, ಕಚೇರಿ ಕಾರ್ಯಗಳಿಗೆ ಬರುವ ಜಿಲ್ಲೆಯ ಸಾರ್ವಜನಿಕರಿಗೆ ಓಡಾಡಲು ತುಂಬಾ ತೊಂದರೆಯಾಗುವ ಕಾರಣದಿಂದ, ಈ ನೂತನ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡವನ್ನು ಚಿತ್ರದುರ್ಗ ವೈದ್ಯಕೀಯ ಕಾಲೇಜಿಗೆ ಹಸ್ತಾಂತರಿಸಿ, ಸಾರ್ವಜನಿಕ ಹಿತದೃಷ್ಟಿಯಿಂದ ಚಿತ್ರದುರ್ಗ ನಗರದಲ್ಲಿಯೇ ನೂತನವಾಗಿ ಜಿಲ್ಲಾಧಿಕಾರಿಗಳ ಕಚೇರಿ ನಿರ್ಮಾಣ ಮಾಡುವ ಸಂಬಂಧ ಕಳೆದ ಒಂದು ವರ್ಷದಿಂದ ಕಂದಾಯ ಇಲಾಖೆ ಸಚಿವರು, ವೈದ್ಯಕೀಯ ಇಲಾಖೆ ಸಚಿವರು ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ಜೊತೆ ಚಿತ್ರದುರ್ಗ ಜಿಲ್ಲೆಯ ಎಲ್ಲಾ ಶಾಸಕರು ಬೆಂಗಳೂರಿನ ವಿಧಾನಸೌಧ ಹಾಗೂ ಬೆಳಗಾವಿಯ ಅಧಿವೇಶನದ ಸಂದರ್ಭದಲ್ಲಿಯೂ ಸಹ ನಿರಂತರವಾಗಿ ಸಭೆ ನಡೆಸಲಾಗಿತ್ತು.

ಈ ಸಂಬಂಧ ಗುರುವಾರದಂದು ವಿಕಾಸಸೌಧದ ಕೊಠಡಿ ಸಂಖ್ಯೆ 342 ರಲ್ಲಿ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ.ಸುಧಾಕರ್ ಹಾಗೂ ತೋಟಗಾರಿಕೆ ಇಲಾಖೆ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ ಇವರುಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.

ಸಭೆಯಲ್ಲಿ ಪ್ರಸ್ತುತ ಇರುವ ತೋಟಗಾರಿಕೆ ಇಲಾಖೆಯ 6.10 ಎಕರೆ ಮತ್ತು ಹಾಪ್‍ಕಾಮ್ಸ್ ವ್ಯಾಪ್ತಿಯ 0.20 ಎಕರೆ ಸೇರಿ ಒಟ್ಟು 6.30 ಎಕರೆ ಜಮೀನನ್ನು ನೂತನ ಜಿಲ್ಲಾಧಿಕಾರಿಗಳ ನಿರ್ಮಾಣಕ್ಕೆ ನೀಡಲು ತೀರ್ಮಾನಿಸಲಾಗಿರುತ್ತದೆ. ತೋಟಗಾರಿಕೆ ಇಲಾಖೆಗೆ ಈ ಜಮೀನಿನ ಬದಲಾಗಿ ಚಿತ್ರದುರ್ಗ ತಾಲ್ಲೂಕು ಹಿರೇಗುಂಟನೂರು ಹೋಬಳಿ ಚಿಕ್ಕಪುರ ಗ್ರಾಮದ ರಿ.ಸ.ನಂ.96 ಮತ್ತು ರಿ.ಸ.ನಂ.101 ರಲ್ಲಿ 20.00 ಎಕರೆ ಜಮೀನನ್ನು ಸರ್ಕಾರದಿಂದ ನೀಡಲು ತೀರ್ಮಾನ ಕೈಗೊಳ್ಳಲಾಗಿರುತ್ತದೆ. ಈಗ ಇರುವ ತೋಟಗಾರಿಕೆ ಇಲಾಖೆ ಕಚೇರಿಗೆ, ಇದೇ ಜಾಗದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗುವ ಜಿಲ್ಲಾಧಿಕಾರಿಗಳ ಕಚೇರಿ ಕಟ್ಟಡದಲ್ಲಿಯೇ ಸ್ಥಳಾವಕಾಶ ಕಲ್ಪಿಸಿಕೊಡಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ, ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ, ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ರವರು, ತೋಟಗಾರಿಕೆ ಇಲಾಖೆ ಕಾರ್ಯದರ್ಶಿಗಳು, ತೋಟಗಾರಿಕೆ ಇಲಾಖೆ ನಿರ್ದೇಶಕರು, ಚಿತ್ರದುರ್ಗ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಚಿತ್ರದುರ್ಗ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕಿ ಸವಿತ ಮತ್ತಿತರ ಉನ್ನತ ಅಧಿಕಾರಿಗಳು ಹಾಜರಿದ್ದರು.

chitradurga Dcoffice karnataka ಕರ್ನಾಟಕ ಚಿತ್ರದುರ್ಗ
Follow on Facebook Follow on Instagram
Share. Facebook Twitter WhatsApp Telegram
Previous Articleದಿನಾಂಕ 19-02-2026ರ ಗುರುವಾರ ಸಂಜೆ 3:40ಕ್ಕೆ ಯೋಗ ಗುರುಗಳಾದ ಎಲ್.ಎಸ್ .ಚಿನ್ಮಯಾನಂದ ಇವರ ತಾಯಿ ಜಯಮ್ಮನವರು(80 ವರ್ಷ) ದೈವಾಧೀನರಾಗಿರುತ್ತಾರೆ
Next Article WhatsApp New Rules : ಮಾರ್ಚ್ 1 ರಿಂದ ವಾಟ್ಸಾಪ್, ಟೆಲಿಗ್ರಾಮ್ ಬಳಕೆಯಲ್ಲಿ ಭಾರಿ ಬದಲಾವಣೆ! ನಿಮ್ಮ ಫೋನ್‌ನಲ್ಲಿ ಸಿಮ್ ಇಲ್ಲದಿದ್ದರೆ ಅಪ್ಲಿಕೇಶನ್ ಬಂದ್?
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

11/05/2026 ರ ನಿತ್ಯ ಭವಿಷ್ಯ

May 11, 2026

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

May 10, 2026

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

May 10, 2026
Add A Comment
Leave A Reply Cancel Reply

Advertisement
Latest Posts

ಅಮ್ಮನೆಂಬ ಆರಾಧನೆ ಮತ್ತು ಆಕೆಯ ಒಳಗಿನ ಮನುಷ್ಯತ್ವ: ಒಂದು ಆತ್ಮಾವಲೋಕನ

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.