*ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ: ಡಿಸಿಎಂ ಡಿ.ಕೆ. ಶಿವಕುಮಾರ್*
*ಯಾರದ್ದೋ ಹೇಳಿಕೆ ಮೇಲೆ ಸುರೇಶ್ ಅವರನ್ನು ವಿಚಾರಣೆಗೆ ಕರೆದಿದ್ದಾರೆ, ಇದನ್ನು ವೈಭವೀಕರಿಸುವ ಅಗತ್ಯವಿಲ್ಲ*
*ಬೆಂಗಳೂರು, ಜೂ.23*
“ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ. ಯಾರದ್ದೋ ಹೇಳಿಕೆ ಮೇಲೆ ಡಿ.ಕೆ. ಸುರೇಶ್ ಅವರನ್ನು ವಿಚಾರಣೆಗೆ ಕರೆದಿದ್ದಾರೆ. ಇದನ್ನು ಮಾಧ್ಯಮಗಳು ವೈಭವೀಕರಿಸುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯಿಸಿದರು.
ಐಶ್ವರ್ಯಾ ಗೌಡ ಅವರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಸುರೇಶ್ ಅವರನ್ನು ಇಡಿ ವಿಚಾರಣೆ ಕರೆದಿರುವ ಬಗ್ಗೆ ಕೇಳಿದಾಗ, “ಈ ಹಿಂದೆ ನನ್ನ ಮೇಲೂ ಇಡಿ ಪ್ರಕರಣ ದಾಖಲಿಸಿತ್ತು. ಅದು ಏನಾಯ್ತು? ನಮ್ಮ ರಕ್ಷಣೆಗೆ ಯಾರೂ ಬರಲಿಲ್ಲ. ಕೊನೆಗೆ ನಮಗೆ ರಕ್ಷಣೆ ನೀಡಿದ್ದು ನ್ಯಾಯಾಂಗ ವ್ಯವಸ್ಥೆ. ಜನಪ್ರತಿನಿಧಿಗಳು ತಮ್ಮ ಕ್ಷೇತ್ರದ ಜನ ಬಂದಾಗ ಅವರನ್ನು ಭೇಟಿ ಮಾಡುವು ಸಹಜ. ಇಡಿ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡಲು ಸುರೇಶ್ ತಯಾರಿದ್ದಾರೆ. ಮಾಧ್ಯಮಗಳು ಹೆಚ್ಚು ಆದ್ಯತೆ ನೀಡಬೇಕಾದ ಪ್ರಕರಣಗಳನ್ನು ಬಿಟ್ಟು, ಇದನ್ನು ಹೆಚ್ಚು ಬಿಂಬಿಸಲು ಮುಂದಾಗಿದ್ದೀರಿ. ಇದರ ಅಗತ್ಯವಿಲ್ಲ” ಎಂದು ತಿಳಿಸಿದರು.
ಶಾಸಕ ಬಿ.ಆರ್ ಪಾಟೀಲ್ ಅವರು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯ್ತಿ ಸದಸ್ಯರು ಕೂಡ ಅಧಿಕಾರಿಗಳು ಹಣ ಪಡೆದಿದ್ದಾರೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಈ ವಿಚಾರವಾಗಿ ಏನು ಹೇಳಬೇಕೋ ಹೇಳಿದ್ದೇನೆ. ಉಳಿದಂತೆ ಈ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ವಸತಿ ಸಚಿವರು ಸ್ಪಷ್ಟನೆ ನೀಡುತ್ತಾರೆ” ಎಂದು ಹೇಳಿದರು.
ಶಾಸಕರ ಗಮನಕ್ಕೆ ಬಾರದೇ ಅನುದಾನ ತೆಗೆದುಕೊಂಡು ಹೋಗಲಾಗುತ್ತಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಯಾರು ಏನು ಹೇಳಿದ್ದಾರೆ ಎಂದು ನನಗೆ ಮಾಹಿತಿ ಇಲ್ಲ” ಎಂದು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



