ಚಿತ್ರದುರ್ಗ: ವಿಶ್ಚ ಪರಿಸರ ದಿನಾಚರಣೆ ಪ್ರಯುಕ್ತ ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯ ನಿಯಂತ್ರಣಗೊಳಿಸುವುದು ಎಂಬ ಘೋಷವಾಕ್ಯದಡಿ ಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು. ಮಾಲಿನ್ಯ ನಿಯಂತ್ರಣ ಮಂಡಳಿ ಪ್ರಾದೇಶಿಕ ಶಾಖೆ ಚಿತ್ರದುರ್ಗ, ಕಲಾ ಚೈತನ್ಯ ಸೇವಾ ಸಂಸ್ಥೆ ವತಿಯಿಂದ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು. ನಗರದ ಕ್ರೀಡಾ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ 25ಕ್ಕೂ ಹೆಚ್ಚು ಶಾಲೆಗಳ, ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿ, ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯ ನಿಯಂತ್ರಣ ಕುರಿತು ಸುಂದರ ರೇಖಾಚಿತ್ರ ಬಿಡಿಸಿ ಸಂಭ್ರಮಿಸಿದ್ರು. ಈ ವೇಳೆ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾತ ವಿತರಣೆ ಕೂಡ ಮಾಡಲಾಯಿತು. ಇದೆ ವೇಳೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಇಂದಿನ ಮಕ್ಕಳೆ ನಾಳಿನ ಪ್ರಜೆಗಳು. ಅವರಲ್ಲಿ ಈ ಜಾಗೃತಿ ಮೂಡಿದ್ರೆ ಮಾತ್ರ ಸಮಾಜದಲ್ಲಿ ಜಾಗೃತಿ ಮೂಡಲು ಸಾಧ್ಯ ಎಂದು ಹೇಳಿದರು. ಇನ್ನು ಮಕ್ಕಳ ಈ ಚಿತ್ರಬಿಡಿಸಿ ಸಾಮಾಜಿಕ ಪ್ರಜ್ಞೆ ಮೆರೆದ ಬಗೆಗೆ ಕಲಾ ಬಳಗದ ಸದಸ್ಯರು ಸಂತಸ ವ್ಯಕ್ತಪಡಿಸಿದ್ರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



