ಚಿತ್ರದುರ್ಗ: ಚಿತ್ರದುರ್ಗ ನಗರದಲ್ಲಿ ಹಲವಾರು ವರ್ಷಗಳಿಂದ ಕೆಲ ಟ್ರಾಪಿಕ್ ಸಿಗ್ನಲ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳ ಕೊರತೆ ಎದ್ದು ಕಾಣುತ್ತಿದೆ. ಈಗಾಗಲೇ ನಗರದಲ್ಲಿ ವಾಹನ ಸಂಚಾರದ ಜೊತೆ ಜೊತೆಗೆ ದಿನನಿತ್ಯದ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯು ಹೆಚ್ಚಾಗಿದ್ದು, ಇವರ ಮೇಲೆ ಕಣ್ಗಾವಲು ಇಡಲು ಪೊಲೀಸರಿಗೆ ಕೊಂಚ ತೊಂದರೆಯಾಗುವ ಸಾಧ್ಯತೆ ಇದೆ. ಇನ್ನು ನಗರದ ಹಲವೆಡೆ ನಾಮಕಾವಸ್ಥೆಗೆ ಕ್ಯಾಮರಾ ಅಳವಡಿಕೆ ಮಾಡಿದ್ದು, ಅವುಗಳು ಕಣ್ಣಿಗೆ ಮಾತ್ರ ಕಾಣಿಸುತ್ತವೆ ಕಾರ್ಯನಿರ್ವಹಣೆ ಇಲ್ಲದೆ ಸಮಸ್ಯೆ ಎದುರಾಗಿದೆ. ಇದರಿಂದಾಗಿ ಪೊಲೀಸರು ಸಂಚಾರ ನಿರ್ವಹಣೆಗೆ ತೊಡಕು ಉಂಟಾಗುವ ಸಾಧ್ಯತೆ ಇದೆ. ಸ್ಥಳೀಯ ಅಧಿಕಾರಿಗಳು, ನಗರದ ಹಲವಾರು ಸೂಕ್ಷ್ಮ ಸ್ಥಳಗಳಲ್ಲಿ ಸಂಚಾರ ನಿರ್ವಹಣೆ ಮತ್ತು ಅನಿರೀಕ್ಷಿತ ಘಟನೆಗಳನ್ನು ತಡೆಗಟ್ಟಲು ಸಿಸಿಟಿವಿ ಕ್ಯಾಮೆರಾಗಳ ಅಗತ್ಯವಿದ್ದು ಕೂಡಲೇ ಕೆಟ್ಟು ಹೋದಂತ ಕ್ಯಾಮೆರಾಗಳನ್ನು ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸ್ಥಳೀಯರು ಮನವಿ ಮಾಡಿದ್ದಾರೆ.
ಇನ್ನು ಚಿತ್ರದುರ್ಗ ನಗರದಾದ್ಯಂತ ಸ್ಥಾಪಿಸಿದ 32 ಸಿಸಿಟಿವಿ ಕ್ಯಾಮೆರಾಗಳಲ್ಲಿ 20ಕ್ಕೂ ಹೆಚ್ಚು ಕ್ಯಾಮೆರಾಗಳು ಒಂದು ವರ್ಷದಿಂದ ಕಾರ್ಯನಿರ್ವಹಿಸದೆ ಇರುವುದಾಗಿ ನಗರಸಭೆ ಅಧಿಕಾರಿಗಳು ತಿಳಿಸಿದ್ದಾರೆ. ಕ್ಯಾಮರಾ ಕಾರ್ಯನಿರ್ವಹಿಸದ ಹಿನ್ನಲೆ ಕಳ್ಳನ ಸೇರಿದಂತೆ ವಿವಿಧ ಅಪರಾಧಗಳ ಪತ್ತೆ ಮಾಡುವಲ್ಲಿ ಪೊಲೀಸರಿಗೆ ಸಮಸ್ಯೆಯಾಗುತ್ತದ್ದು, ಇನ್ನು ಮುಂದೆ ಆದ್ರೂ 32 ಕಡೆ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಸರಿಪಡಿಸಿದರೆ ಸಂಚಾರ ನಿರ್ವಹಣೆ ಜೊತೆಗೆ ಅಪರಾಧಿಕ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಕ್ಯಾಮೆರಾಗಳು ಸಹಾಯವಾಗುತ್ತದೆ ಅನ್ನೋದು ನಮ್ಮ ಆಶಯ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



