ಬೆಂಗಳೂರು, ಜೂನ್ ೨೮, (ಕರ್ನಾಟಕ ವಾರ್ತೆ) ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ೩ ನೇ ಮಹಡಿಯಲ್ಲಿರುವ ಸುಲೋಚನಾ ಸಭಾಂಗಣದಲ್ಲಿ ೨೦೨೫ ನೇ ಜುಲೈ ೧ ರಂದು ಪತ್ರಿಕಾ ದಿನಾಚರಣೆ – ೨೦೨೫ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಅಂದು ಬೆಳಿಗ್ಗೆ ೧೦.೩೦ ಗಂಟೆಗೆ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿರುವರು. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಘನ ಉಪಸ್ಥಿತರಿದ್ದು, ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ವರದಿ ಬಿಡುಗಡೆ ಮಾಡಲಿರುವರು.
ಪೀಪಲ್ಸ್ ಅರ್ಥೈವ್ ಆಫ್ ರೂರಲ್ ಇಂಡಿಯಾದ ಸಂಸ್ಥಾಪಕ ಸಂಪಾದಕರು ಹಾಗೂ ಹಿರಿಯ ಪತ್ರಕರ್ತರಾದ ಪಿ. ಸಾಯಿನಾಥ್ ಅವರು The Battle for Factual Reporting ಮತ್ತು ಇನ್ನೋರ್ವ ಹಿರಿಯ ಸಾಹಿತಿ ಹಾಗೂ ಸಂಸ್ಕೃತಿ ಚಿಂತಕರಾದ ರಹಮತ್ ತರೀಕೆರೆ ಅವರು ನಿಜ ಸುದ್ದಿಗಾಗಿ ಸಮರ ವಿಷಯಗಳ ಮೇಲೆ ಪ್ರಧಾನ ಭಾಷಣ ಮಾಡಲಿದ್ದಾರೆ.ಶಿವಾಜಿ ನಗರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದರಾದ ಪಿ. ಸಿ. ಮೋಹನ್, ಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಶ್ರೀಮತಿ ಆಯೇಶಾ ಖಾನಂ ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ಮುಖ್ಯಮಂತ್ರಿಗಳ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ ಬಿ. ಬಿ. ಕಾವೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್, ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ನಿರ್ದೇಶಕರಾದ ನಾಗೇಂದ್ರ ಪ್ರಸಾದ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್. ಶ್ರೀಧರ್, ಶಿವಮೊಗ್ಗ ಕರ್ನಾಟಕ ಪತ್ರಕರ್ತೆಯರ ಸಂಘದ ಅಧ್ಯಕ್ಷರಾದ ಶ್ರೀಮತಿ ಪದ್ಮಾ ಸೇರಿದಂತೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಸರ್ವ ಸದಸ್ಯರು, ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು, ಬೆಂಗಳೂರು ಪ್ರೆಸ್ ಕ್ಲಬ್ ನ ಪದಾಧಿಕಾರಿಗಳು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಅಧಿಕಸರಿಗಳು ಮತ್ತು ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿ ಶ್ರೀಮತಿಎಂ ಸಹನಾ ಅವರು ಗೌರವ ಉಪಸ್ಥಿತಿತರಿರುವರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



