Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ನಗರ ದೇವತೆ ಬರಗೇರಮ್ಮ ಜಾತ್ರೆಗೆ ದಿನಗಣನೆ ಶುರು ; ಭಕ್ತರಲ್ಲಿ ಮನೆ ಮಾಡಿದ ಸಂಭ್ರಮ
ಚಿತ್ರದುರ್ಗ

ನಗರ ದೇವತೆ ಬರಗೇರಮ್ಮ ಜಾತ್ರೆಗೆ ದಿನಗಣನೆ ಶುರು ; ಭಕ್ತರಲ್ಲಿ ಮನೆ ಮಾಡಿದ ಸಂಭ್ರಮ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 24, 2026No Comments2 Mins Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ನಗರ ದೇವತೆ ಬರಗೇರಮ್ಮ ಜಾತ್ರೆಗೆ ದಿನಗಣನೆ ಶುರು ; ಭಕ್ತರಲ್ಲಿ ಮನೆ ಮಾಡಿದ ಸಂಭ್ರಮ

ಚಿತ್ರದುರ್ಗ: ನಗರದೇವತೆ ಬರಗೇರಮ್ಮ ಜಾತ್ರಾ ಮಹೋತ್ಸವ ಮಾ. 27ರಂದು ರಾತ್ರಿ 8ಕ್ಕೆ
ಕಂಕಣಧಾರಣೆ, ಮಧುವಣಗಿತ್ತಿ ಪೂಜಾ ಕೈಂಕರ್ಯದೊಂದಿಗೆ ಆರಂಭವಾಗಲಿದೆ.

ದೇವಿಯ ಜಾತ್ರೆಯೂ 15 ದಿನ ಜರುಗಲಿದೆ. 31ರಂದು ರಾತ್ರಿ 8ಕ್ಕೆ ದೇವಿಯ ಉತ್ಸವ ಮೂರ್ತಿಯನ್ನು ಬುರುಜನಹಟ್ಟಿಯ ದೇಗುಲದಿಂದ ಊರ ಹೊರಗಿನ ದೇಗುಲಕ್ಕೆ ಕರೆ
ತರುವುದು. ನಂತರ ಕರಿಯಟ್ಟಿಯಲ್ಲಿನ ಭಕ್ತರಿಂದ ಪೂಜೆ ಸ್ವೀಕಾರ.

ಏ.1ರಂದು ಬೆಳಗ್ಗೆ 9ಕ್ಕೆ ಚಂದ್ರವಳ್ಳಿಯಲ್ಲಿ ದೇವಿಗೆ ಗಂಗಾಪೂಜೆ, ಕುಂಭಾಭಿಷೇಕ
ನಂತರ ದೇಗುಲಕ್ಕೆ ಆಗಮನ. ಅನ್ನಸಂತರ್ಪಣೆ ನಂತರ ರಾತ್ರಿ ಈರಜ್ಜನಹಟ್ಟಿ ಹಾಗೂ ನಾಯಕರ
ಸೊಲ್ಲಾಪುರ, ಐಯುಡಿಪಿ ಲೇಔಟ್, ಸರಸ್ವತಿಪುರದಲ್ಲಿ ಭಕ್ತರಿಂದ ಪೂಜೆ ಸ್ವೀಕಾರ.

2ರಂದು ದೇವಿಯು ಕೆಳಗಿನ ಸೊಲ್ಲಾಪುರ, ಗೊಲ್ಲರಹಟ್ಟಿ, ಟಗರನಹಟ್ಟಿ, ದೇವರಹಟ್ಟಿ,
ಜಾಲಿಕಟ್ಟೆ ಮತ್ತು ಮಾಳಪ್ಪನಹಟ್ಟಿ ಭಕ್ತರ ಮನೆಗಳಲ್ಲಿ ಪೂಜೆ ಸ್ವೀಕರಿಸಿ ದೇಗುಲಕ್ಕೆ ಮರಳುವುದು. ಅಂದು ಬೆಳಗ್ಗೆ 7ಕ್ಕೆ ಪಿಳ್ಳೇಕೆರನಹಳ್ಳಿ, ಬಸವೇಶ್ವರ, ವಿದ್ಯಾ,
ಮಾರುತಿ, ನೆಹರು, ಚೌಡೇಶ್ವರಿ ನಗರ, ಮೆದೇಹಳ್ಳಿ ರಸ್ತೆ, ಬಿವಿಕೆಎಸ್ ಲೇ ಔಟ್,
ಲಕ್ಷ್ಮೀಬಜಾರ್, ಚೇಳುಗುಡ್ಡ, ಧವಳಗಿರಿ ಬಡಾವಣೆ ಭಕ್ತರ ಮನೆಗಳಲ್ಲಿ ಪೂಜೆ ಸ್ವೀಕಾರ.

3ರಂದು ದೇವಿಯನ್ನು ವಿಶೇಷವಾಗಿ ಅಲಂಕರಿಸಿದ ನಂತರ ಬೆಳಗ್ಗೆ 9.30ರಿಂದ ಸಂಜೆ 8ರವರೆಗೂ
ಸಕಲ ವಾದ್ಯಗಳೊಡನೆ ನಗರದ ರಾಜ ಬೀದಿಗಳಲ್ಲಿ ರಥೋತ್ಸವ ಮೆರವಣಿಗೆ, ಭಕ್ತರಿಂದ ಮೀಸಲು
ಸಮರ್ಪಣೆ, ಹರಕೆ ಸಲ್ಲಿಕೆಯಾಗಲಿದೆ.

ಅಂದು ಸಂಜೆ 5.30ಕ್ಕೆ ಬಾರ್‌ಲೈನ್, ತಿಪ್ಪಜ್ಜಿ ಸರ್ಕಲ್, ಮುನ್ಸಿಪಲ್ ಕಾಲನಿ, ಚರ್ಚ್ ಬಡಾವಣೆ, ಕೆಳಗೋಟೆ ಪ್ರದೇಶದ ಭಕ್ತರಿಂದ ಪೂಜೆ ಸ್ವೀಕರಿಸಿದ ನಂತರ ದೇಗುಲಕ್ಕೆ ಮರಳುವುದು.

4ರಂದು ಬೆಳಗ್ಗೆ 8ಕ್ಕೆ ದೇಗುಲದಿಂದ ಹೊರಟು ದರ್ಜಿ ಕಾಲಾನಿ, ಗೋಪಾಲಪುರ, ಜೆಸಿಆರ್
ಹಾಗೂ ವಿ.ಪಿ. ಬಡಾವಣೆ ಭಕ್ತರ ಮನೆಗಳಲ್ಲಿ ಪೂಜೆ ಸ್ವೀಕರಿಸಿ, ಸಂಜೆ 6.30ಕ್ಕೆ ದೇಗುಲ ಮುಂಭಾಗ ಸಾವಿರಾರು ಭಕ್ತರ ಸಮ್ಮುಖದಲ್ಲಿ ದೇವಿಯ ಸಿಡಿ ಮಹೋತ್ಸವ ಜರುಗಲಿದೆ. 5ರಂದು
ಅಗಸನಕಲ್ಲು, ರೈಲ್ವೆ ನಿಲ್ದಾಣ, ಗಾರೆಹಟ್ಟಿ, ಕವಾಡಿಗರಹಟ್ಟಿ, ಮಠದ ಕುರುಬರಹಟ್ಟಿ,
ಕೋಡನಹಟ್ಟಿ, ಹನುಮಂತ ನಗರ, ಕರ್ಲ್ಲಹಟ್ಟಿಯ ಭಕ್ತರ ಮನೆಗಳಲ್ಲಿ ಪೂಜೆ ಸ್ವೀಕಾರ.

6ರಂದು ದೇವಿಗೆ ಬೆಳಗ್ಗೆ 8ಕ್ಕೆ ವಿಶೇಷ ಭಂಡಾರದ ಪೂಜೆ, ರಾತ್ರಿ 8ಕ್ಕೆ ಓಕಳಿ ಸೇವೆ, ಬುರುಜನಹಟ್ಟಿ ಪ್ರವೇಶದ ನಂತರ ಅಲ್ಲಿನ ಭಕ್ತರ ಮನೆಗಳಲ್ಲಿ ಪೂಜೆ ಸ್ವೀಕಾರ.

8ರಂದು ಸುಣ್ಣಗಾರಹಟ್ಟಿ, ಅಗಳೇರಿ, ಕೋಳಿ ಬುರುಜನಹಟ್ಟಿ, ಕಾಮನಬಾವಿ ಬಡಾವಣೆ,
ಜೋಗಿಮಟ್ಟಿ ರಸ್ತೆ, ಪ್ರಶಾಂತ ನಗರ, ಜಿಲ್ಲಾ ಕ್ರೀಡಾಂಗಣ ರಸ್ತೆ, ಜಟ್‌ಪಟ್ ನಗರ, ವಿವೇಕಾನಂದ ನಗರ, ಟೀಚರ್ಸ್‌ ಕಾಲನಿ ಸೇರಿ ಸುತ್ತಮುತ್ತ ಭಕ್ತರ ಮನೆಯಲ್ಲಿ ಪೂಜೆ ಸ್ವೀಕಾರ. 9ರಂದು ಬ್ರಾಹ್ಮೀ ಮುಹೂರ್ತದ ವೇಳೆ ಸಿಹಿನೀರು ಹೊಂಡದಲ್ಲಿ ಗಂಗಾಪೂಜೆಯ
ನಂತರ ಗುಡಿತುಂಬುವ ಕಾರ್ಯಕ್ರಮದ ಮೂಲಕ ದೇವಿಯನ್ನು ಸ್ವಸ್ಥಾನಕ್ಕೆ ಕರೆತರಲಾಗುವುದು.

10ರಂದು ಕಂಕಣ ವಿಸರ್ಜನೆ, ಜೋಗೂಟದೊಂದಿಗೆ ಜಾತ್ರೆ ಮುಕ್ತಾಯವಾಗಲಿದೆ ಎಂದು ದೇಗುಲದ ಪ್ರಧಾನ ಅರ್ಚಕ ಪೂಜಾರ್ ಕಸ್ತೂರಪ್ಪ ತಿಳಿಸಿದ್ದಾರೆ.

Follow on Facebook Follow on Instagram
Share. Facebook Twitter WhatsApp Telegram
Previous Articleಹೊಸ ಪಿಂಚಣಿ ನೀತಿಗೆ ವಿರೋಧ; ಪ್ರತಿಭಟನೆಗೆ ಮುಂದಾದ ನಿವೃತ್ತ ನೌಕರರ
Next Article ಪ್ಲೆಕ್ಸ್ ಬೇಡ, ಸೇವೆ ಮಾಡಿ; ಯದುವೀರ್ ಮಾದರಿ ನಡೆ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

March 24, 2026

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ವೇಗ

March 23, 2026

ರೈಲು ನಿಲ್ದಾಣದಲ್ಲಿ ದುರಂತ ; ಹಾರಿತು ಪ್ರಾಣಪಕ್ಷಿ

March 23, 2026
Add A Comment
Leave A Reply Cancel Reply

Advertisement
Latest Posts

ಐಪಿಎಲ್ ಆರಂಭದ ಹೊಸ್ತಿಲಲ್ಲೇ ಬದಲಾಯ್ತು ನಿಯಮ

ಮದಕರಿನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಸಂದೀಪ್ ಗೆ ಮಾತೃ ವಿಯೋಗ

200 ಕೋಟಿ ರೂ. ಬಂಗಲೆ ಮಾಹಿತಿ ಮರೆಮಾಚಿದ ಆರೋಪ:

ಜೀವಂತ ವ್ಯಕ್ತಿಗೆ ಮರಣ ಪ್ರಮಾಣಪತ್ರ ; ಹೈಕೋರ್ಟ್ ತರಾಟೆ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.