ಚಿತ್ರದುರ್ಗ: ಚಿತ್ರದುರ್ಗದ ಮುರುಘಾ ಶರಣರ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಇಂದು ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಡೆಸಿತು. ಈಗಾಗಲೇ ಪ್ರಕರಣದ ವಿಚಾರಣೆ ಕೊನೆ ಹಂತಕ್ಕೆ ತಲುಪಿದ್ದು ಇಂದು ನ್ಯಾಯಾಲಯದಲ್ಲಿ ಪ್ರಕರಣದ A1 ಆರೋಪಿ ಶಿವಮೂರ್ತಿ ಮುರುಘಾ ಶರಣರ ಹೇಳಿಕೆ ದಾಖಲು ಮಾಡುವುದನ್ನು ಜುಲೈ 3ಕ್ಕೆ ನಿಗದಿ ಪಡಿಸಿದ್ದು, ಮುರುಘಾ ಶ್ರೀಗೆ ಶ್ರವಣ ದೋಷ ಹಿನ್ನಲೆ ವಿಡಿಯೋ ಕಾನ್ಫೆರೆನ್ಸ್ ಬದಲಾಗಿ ನೇರವಾಗಿ ನ್ಯಾಯಾಲಯಕ್ಕೆ ಬಂದು ಹೇಳಿಕೆ ದಾಖಲಿಸಲು ಸೂಚನೆ ನೀಡಲಾಗಿದೆ.ಇನ್ನು ಪ್ರಕರಣದ ಸಂಬಂಧ ಮುರುಘಾ ಶರಣರಿಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿತ್ತು ಜೊತೆಗೆ ಜಿಲ್ಲೆಗೆ ಪ್ರವೇಶ ನೀಡದಂತೆ ಆದೇಶಿಸಿತ್ತು. ಆದ್ರೆ ಶರಣರಿಗೆ ಶ್ರವಣ ದೋಷ ಇರುವ ಕಾರಣ ಖುದ್ದಾಗಿ ಬಂದು ಹಾಜರಾಗುವಂತೆ ಕೋರ್ಟ್ ಹೇಳಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



