ಚಿತ್ರದುರ್ಗ : ಜಿಲ್ಲಾ ವೀರಶೈವ ಲಿಂಗಾಯಿತ ಹೇಮರಡ್ಡಿ ಮಲ್ಲಮ್ಮ ಸಮಾಜದ ನೂತನ ಅಧ್ಯಕ್ಷರಾಗಿ ಬಸವೇಶ್ವರ ಆಸ್ಪತ್ರೆಯ
ಡಾ.ಪಾಲಾಕ್ಷಪ್ಪ ಇವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಇದುವರೆವಿಗೂ ಅಧ್ಯಕ್ಷರಾಗಿದ್ದ ಜಿ.ಚಿದಾನಂದಪ್ಪನವರು ವೈಯಕ್ತಿಕ ಕಾರಣಗಳಿಂದ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿರುವುದರಿಂದಡಾ.ಪಾಲಾಕ್ಷಪ್ಪನವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆಂದು ಜಿಲ್ಲಾ ವೀರಶೈವ ಲಿಂಗಾಯಿತ ಹೇಮರಡ್ಡಿ ಮಲ್ಲಮ್ಮಸಮಾಜದ ಕಾರ್ಯದರ್ಶಿ ಡಿ.ಟಿ.ಶಿವಾನಂದಪ್ಪ ತಿಳಿಸಿದ್ದಾರೆ.
ನೂತನ ಅಧ್ಯಕ್ಷ ಡಾ.ಪಾಲಾಕ್ಷಪ್ಪನವರನ್ನು ಅಭಿನಂದಿಸಿದ ಸಂದರ್ಭದಲ್ಲಿ ನ್ಯಾಯವಾದಿ ವಿಶ್ವನಾಥ್, ಖಜಾಂಚಿ ದಯಾನಂದಪಾಟೀಲ್, ನಿವೃತ್ತ ಇಂಜಿನಿಯರ್ ಬಸವರಾಜ್ ಇವರುಗಳು ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



