ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನೂರು ಶಾಸಕರು ಸಿಎಂ ಬದಲಾವಣೆ ಬಯಸಿದ್ದಾರೆ. ಸಿಎಂ ಸಿದ್ದರಾಮಯ್ಯರನ್ನು ಕೆಳಗಿಳಿಸಿ ಡಿ.ಕೆ ಶಿವಕುಮಾರ್ ಸಿಎಂ ಮಾಡಬೇಕು ಎಂದು ರಾಮನಗರ ಶಾಸಕರ ಹೆಚ್. ಎ ಇಕ್ಬಾಲ್ ಹುಸೇನ್ ನೀಡಿದ್ದ ಹೇಳಿಕೆಗೆ ಸಮಜಾಯಿಸಿ ನೀಡುವಂತೆ ಈಗ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೋಟಿಸ್ ನೀಡಿದ್ದಾರೆ.
ಕಳೆದ ಮೂರು ದಿನಗಳಿಂದ ಸಿಎಂ ಬದಲಾಗಬೇಕು. ಸಿದ್ದರಾಮಯ್ಯ ಇಳಿಸಿ ಡಿಕೆಶಿಯನ್ನ ಸಿಎಂ ಮಾಡಬೇಕು ಎನ್ನುವುದು 100 ಶಾಸಕರ ಆಸೆ. ಈಗ ಸಿಎಂ ಬದಲಾವಣೆ ಮಾಡದಿದ್ದರೆ 2028ಕ್ಕೆ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಪದೇ ಪದೇ ಸಿಎಂ ಬದಲಾವಣೆ ಹೇಳಿಕೆ ನೀಡಿ ಪಕ್ಷದಲ್ಲಿ ಗೊಂದಲ ಉಂಟು ಮಾಡಿದ್ರೂ. ಹೇಳಿಕೆ ನೀಡಿದ ಬಳಿಕ ಡಿಕೆಶಿ ಇಕ್ಬಾಲ್ ಹುಸೇನ್ ಗೆ ನೋಟಿಸ್ ನೀಡುವುದಾಗಿ ಇಂದು ಹೇಳಿದ್ದರು.
ಹೇಳಿದಂತೆಯೇ ಇಂದು ಶಾಸಕ ಇಕ್ಬಾಲ್ ಹುಸೇನ್ ಗೆ ನೋಟಿಸ್ ನೀಡಿದ್ದು, ತಮ್ಮ ಬಹಿರಂಗ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟು ಮಾಡುವುದಲ್ಲದೇ, ಪಕ್ಷದ ಶಿಸ್ತು ಉಲ್ಲಂಘನೆ ಆಗಿರುವುದಕ್ಕೆ ಕಾರಣ ಕೇಳಿ ನೋಟಿಸ್ ನೀಡಿದ್ದು ಒಂದು ವಾರದ ಒಳಗೆ ಉತ್ತರ ನೀಡುವಂತೆ ನೋಟಿಸ್ ನಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



