Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಅಮ್ಮನೆಂಬ ಆರಾಧನೆ ಮತ್ತು ಆಕೆಯ ಒಳಗಿನ ಮನುಷ್ಯತ್ವ: ಒಂದು ಆತ್ಮಾವಲೋಕನ

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ವಿದ್ಯಾಲಯ»ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆ; ಐತಿಹಾಸಿಕ ಮಸೂದೆಗೆ ಒಮ್ಮತದ ಅಂಗೀಕಾರ!
ವಿದ್ಯಾಲಯ

ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆ; ಐತಿಹಾಸಿಕ ಮಸೂದೆಗೆ ಒಮ್ಮತದ ಅಂಗೀಕಾರ!

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 25, 2026Updated:March 25, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆ; ಐತಿಹಾಸಿಕ ಮಸೂದೆಗೆ ಒಮ್ಮತದ ಅಂಗೀಕಾರ!

ವಿಧಾನಸಭೆಯ ಬೆನ್ನಲ್ಲೇ, ಬುಧವಾರ ವಿಧಾನ ಪರಿಷತ್ತಿನಲ್ಲಿಯೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅತ್ಯಂತ ಮಹತ್ವದ ‘ಕರ್ನಾಟಕ ಸರ್ಕಾರಿ ಶೈಕ್ಷಣಿಕ ಸಂಸ್ಥೆಗಳ ಭೂಮಿಗಳ (ರಕ್ಷಣೆ ಮತ್ತು ಸಕ್ರಮಾತಿ) ವಿಧೇಯಕ-2026’ ಅನ್ನು ಮಂಡಿಸಲಾಯಿತು. ಈ ಮಸೂದೆಗೆ ಮೇಲ್ಮನೆಯ ಎಲ್ಲಾ ಹಿರಿಯ ಸದಸ್ಯರು ಪಕ್ಷಭೇದ ಮರೆತು, ಸುದೀರ್ಘ ಚರ್ಚೆ ನಡೆಸಿ ಒಮ್ಮತದ ಬೆಂಬಲ ಸೂಚಿಸಿ ಅಂಗೀಕರಿಸಿರುವುದು ಅತ್ಯಂತ ಸಂತಸದ ಹಾಗೂ ಹೆಮ್ಮೆಯ ವಿಚಾರ.

ದಶಕಗಳ ಹಿಂದೆ ಸರ್ಕಾರಿ ಶಾಲೆಗಳ ಉಳಿವಿಗಾಗಿ ಹಾಗೂ ಮಕ್ಕಳ ಶಿಕ್ಷಣಕ್ಕಾಗಿ ತಮ್ಮ ಸ್ವಂತ ಜಮೀನುಗಳನ್ನು ನಿಸ್ವಾರ್ಥವಾಗಿ ನೀಡಿದ ದಾನಿಗಳ ಆಶಯವನ್ನು ಈ ಮಸೂದೆ ಎತ್ತಿಹಿಡಿಯಲಿದೆ. ದಾಖಲೆಗಳ ಕೊರತೆಯಿಂದ ಆಗಿದ್ದ ಸಮಸ್ಯೆಗಳನ್ನು ಸರಿಪಡಿಸಿ, ಜಮೀನುಗಳನ್ನು ಅಧಿಕೃತವಾಗಿ ಇಲಾಖೆಯ ಸುಪರ್ದಿಗೆ ತರುವ ಜೊತೆಗೆ ದಾನಿಗಳ ಹೆಸರನ್ನು ಉಳಿಸುವ ಪ್ರಾಮಾಣಿಕ ಪ್ರಯತ್ನ ಇದಾಗಿದೆ.

ಕಳೆದ 12 ವರ್ಷಗಳಿಗೂ ಹೆಚ್ಚು ಕಾಲದಿಂದ ಸರ್ಕಾರಿ ಶಾಲೆಗಳು ಕಾರ್ಯನಿರ್ವಹಿಸುತ್ತಿರುವ, ಆದರೆ ಇಲಾಖೆಯ ಹೆಸರಿಗೆ ನೋಂದಣಿಯಾಗದ ಖಾಸಗಿ ಅಥವಾ ಇತರ ಜಮೀನುಗಳನ್ನು ಕಾನೂನುಬದ್ಧವಾಗಿ ಸಕ್ರಮಗೊಳಿಸಿ ಇಲಾಖೆಯ ಸುಪರ್ದಿಗೆ ಪಡೆಯಲು ಈ ವಿಧೇಯಕ ಹಾದಿ ಸುಗಮಗೊಳಿಸಿದೆ.

ಶಾಲೆಗಳ ಜಮೀನುಗಳು ಯಾವುದೇ ಕಾರಣಕ್ಕೂ ಒತ್ತುವರಿಯಾಗದಂತೆ ತಡೆಯಲು ಮತ್ತು ಅನ್ಯ ಕಾರ್ಯಗಳಿಗೆ ಬಳಕೆಯಾಗದಂತೆ ಕಟ್ಟುನಿಟ್ಟಿನ ರಕ್ಷಣೆ ಒದಗಿಸಲು ಈ ಕಾನೂನು ಬಲ ತುಂಬಲಿದೆ.

Follow on Facebook Follow on Instagram
Share. Facebook Twitter WhatsApp Telegram
Previous Articleಮಾಜಿ ಶಾಸಕನ ಪುತ್ರನ ಕೇಸ್ ; ಅಕ್ರಮ ಸಂಬಂಧದ ನಂಟು
Next Article ಪೆಟ್ರೋಲ್ ಮತ್ತು ಡೀಸೆಲ್ ಕೊರತೆ: ಸುಳ್ಳು ವದಂತಿಗಳಿಗೆ ಕಿವಿಗೊಡದಂತೆ ಮನವಿ:
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಪಿಯು ಫಲಿತಾಂಶ ; ಇತಿಹಾಸ ಸೃಷ್ಟಿಸಿದ ವಿದ್ಯಾರ್ಥಿನಿಯರು

April 9, 2026

ದ್ವಿತೀಯ ಪಿಯುಸಿ ದಾಖಲೆ ಫಲಿತಾಂಶ; ಶೇ. 86 ವಿದ್ಯಾರ್ಥಿಗಳು ಪಾಸ್ 

April 9, 2026

ದ್ವಿತೀಯ ಪಿಯು ಫಲಿತಾಂಶ ಪ್ರಕಟಣೆಗೆ ಕೌಂಟ್ ಡೌನ್ ; ಹಲವು ವಿಶೇಷ

April 8, 2026
Add A Comment
Leave A Reply Cancel Reply

Advertisement
Latest Posts

ಅಮ್ಮನೆಂಬ ಆರಾಧನೆ ಮತ್ತು ಆಕೆಯ ಒಳಗಿನ ಮನುಷ್ಯತ್ವ: ಒಂದು ಆತ್ಮಾವಲೋಕನ

11/05/2026 ರ ನಿತ್ಯ ಭವಿಷ್ಯ

ಸೋಲಿಲ್ಲದ ಸರದಾರನ ಪಯಣ ಅಂತ್ಯ: ಸಚಿವ ಡಿ. ಸುಧಾಕರ್ ಅಕಾಲಿಕ ನಿಧನಕ್ಕೆ ರಾಜ್ಯಸ್ತಬ್ದ

ಮೈಸೂರು ಕೆಫೆ ಮಾಲೀಕ ವೇದವ್ಯಾಸ ಆಚಾರ್ಯ ( ಅಣ್ಣಾದೊರೈ) ನಿಧನ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.