ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು, ʻಉದ್ಯೋಗ ಆಧರಿತ ಪ್ರೋತ್ಸಾಹಧನʼ (ಇಎಲ್ಐ) ಯೋಜನೆಗೆ ಅನುಮೋದನೆ ನೀಡಿದೆ. ಉದ್ಯೋಗ ಸೃಷ್ಟಿ, ಎಲ್ಲ ವಲಯಗಳಲ್ಲಿ ಉದ್ಯೋಗಾವಕಾಶ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ.
99,446 ಕೋಟಿ ರೂ.ಗಳ ಅನುದಾನದೊಂದಿಗೆ, ʻಇಎಲ್ಐʼ ಯೋಜನೆಯು 2 ವರ್ಷಗಳ ಅವಧಿಯಲ್ಲಿ ದೇಶದಲ್ಲಿ 3.5 ಕೋಟಿಗೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ. ಈ ಪೈಕಿ 1.92 ಕೋಟಿ ಫಲಾನುಭವಿಗಳು ಮೊದಲ ಬಾರಿಗೆ ಉದ್ಯೋಗ ಪಡೆಯಲಿದ್ದಾರೆ.ಈ ಯೋಜನೆಯು ಎರಡು ಭಾಗಗಳನ್ನು ಒಳಗೊಂಡಿದ್ದು, ʻಭಾಗ-ಎʼ ಮೊದಲ ಬಾರಿಗೆ ಕೆಲಸ ಮಾಡುವವರ ಮೇಲೆ ಗಮನ ಕೇಂದ್ರೀಕರಿಸಿದರೆ ʻಭಾಗ-ಬಿʼ ಉದ್ಯೋಗದಾತರ ಮೇಲೆ ಗಮನ ಕೇಂದ್ರೀಕರಿಸಿದೆ:
ಭಾಗ ಎ: ಮೊದಲ ಬಾರಿಯ ಉದ್ಯೋಗಿಗಳಿಗೆ ಪ್ರೋತ್ಸಾಹ:
ಈ ಭಾಗವು ʻಇಪಿಎಫ್ಒʼ ನಲ್ಲಿ ನೋಂದಾಯಿತರಾದ ಮೊದಲ ಬಾರಿಯ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡಿದೆ. ಇದರ ಅಡಿಯಲ್ಲಿ ಗರಿಷ್ಠ 15,000 ರೂ.ಗಳವರೆಗೆ ಒಂದು ತಿಂಗಳ ಇಪಿಎಫ್ ವೇತನವನ್ನು ಎರಡು ಕಂತುಗಳಲ್ಲಿ ನೀಡಲಾಗುತ್ತದೆ.ಮೊದಲ ಕಂತನ್ನು 6 ತಿಂಗಳ ಸೇವೆಯ ನಂತರ ಮತ್ತು 2ನೇ ಕಂತನ್ನು 12 ತಿಂಗಳ ಸೇವೆಯ ನಂತರ ಹಾಗೂ ಉದ್ಯೋಗಿಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪೂರ್ಣಗೊಳಿಸಿದ ನಂತರ ಪಾವತಿಸಲಾಗುತ್ತದೆ.
ಮೊದಲ ಕಂತನ್ನು 6 ತಿಂಗಳ ಸೇವೆಯ ನಂತರ ಮತ್ತು 2ನೇ ಕಂತನ್ನು 12 ತಿಂಗಳ ಸೇವೆಯ ನಂತರ ಹಾಗೂ ಉದ್ಯೋಗಿಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪೂರ್ಣಗೊಳಿಸಿದ ನಂತರ ಪಾವತಿಸಲಾಗುತ್ತದೆ.
ಭಾಗ ಬಿ: ಉದ್ಯೋಗದಾತರಿಗೆ ಬೆಂಬಲ:
ಈ ಭಾಗವು ಎಲ್ಲಾ ಕ್ಷೇತ್ರಗಳಲ್ಲಿ ಹೆಚ್ಚುವರಿ ಉದ್ಯೋಗ ಸೃಷ್ಟಿಯತ್ತ ಗಮನ ಹರಿಸುತ್ತದೆಯಾದರೂ, ಉತ್ಪಾದನಾ ವಲಯದ ಮೇಲೆ ವಿಶೇಷವಾಗಿ ಗಮನ ಕೇಂದ್ರೀಕರಿಸುತ್ತದೆ. ಗರಿಷ್ಠ 1 ಲಕ್ಷ ರೂ.ವರೆಗಿನ ವೇತನ ಹೊಂದಿರುವ ಉದ್ಯೋಗಿಗಳಿಗೆ ಸಂಬಂಧಿಸಿದಂತೆ ಉದ್ಯೋಗದಾತರು ಈ ಪ್ರೋತ್ಸಾಹಧನವನ್ನು ಪಡೆಯುತ್ತಾರೆ. ಕನಿಷ್ಠ ಆರು ತಿಂಗಳವರೆಗೆ ನಿರಂತರ ಉದ್ಯೋಗ ಹೊಂದಿರುವ ಪ್ರತಿ ಹೆಚ್ಚುವರಿ ಉದ್ಯೋಗಿಗೆ, ಸರ್ಕಾರವು ಎರಡು ವರ್ಷಗಳ ತನಕ ತಿಂಗಳಿಗೆ 3,000 ರೂಪಾಯಿಗಳವರೆಗೆ ಪ್ರೋತ್ಸಾಹಧನ ನೀಡುವ ಮೂಲಕ ಉದ್ಯೋಗದಾತರನ್ನು ಪ್ರೋತ್ಸಾಹಿಸುತ್ತದೆ. ಉತ್ಪಾದನಾ ವಲಯಕ್ಕೆ, ಪ್ರೋತ್ಸಾಹಕಗಳನ್ನು 3 ಮತ್ತು 4 ನೇ ವರ್ಷಗಳಿಗೂ ವಿಸ್ತರಿಸಲಾಗುವುದು.
ಪ್ರೋತ್ಸಾಹಕ ಪಾವತಿ ಕಾರ್ಯವಿಧಾನ:
ಯೋಜನೆಯ ʻಭಾಗ-ಎʼ ಅಡಿಯಲ್ಲಿ ಮೊದಲ ಬಾರಿಯ ಉದ್ಯೋಗಿಗಳಿಗೆ ಎಲ್ಲಾ ಪಾವತಿಗಳನ್ನು ʻಆಧಾರ್ ಬ್ರಿಡ್ಜ್ ಪೇಮೆಂಟ್ ಸಿಸ್ಟಮ್ʼ(ಎಬಿಪಿಎಸ್) ಬಳಸಿ ʻಡಿಬಿಟಿʼ (ನೇರ ಲಾಭ ವರ್ಗಾವಣೆ) ಮೂಲಕ ಮಾಡಲಾಗುತ್ತದೆ. ʻಭಾಗ-ಬಿʼ ಅಡಿಯಲ್ಲಿ ಉದ್ಯೋಗದಾತರಿಗೆ ಪಾವತಿಗಳನ್ನು ನೇರವಾಗಿ ಅವರ ಪ್ಯಾನ್-ಲಿಂಕ್ ಮಾಡಿದ ಖಾತೆಗಳಿಗೆ ಮಾಡಲಾಗುತ್ತದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



