ಚಿತ್ರದುರ್ಗ : ಒಳ ಮೀಸಲಾತಿ ಜಾರಿಗೊಳಿಸದೆ ಸುಪ್ರಿಂಕೋರ್ಟ್ ಆದೇಶವನ್ನು ಧಿಕ್ಕರಿಸಿರುವ ರಾಜ್ಯ ಸರ್ಕಾರದ ವಿರುದ್ದ ಆ.1
ರಂದು ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ಪ್ರತಿಮೆ
ಮುಂಭಾಗ ಸರ್ಕಾರದ ಶವಯಾತ್ರೆ ನಡೆಸಿ ಸಾಮೂಹಿಕವಾಗಿ ಕೇಶಮುಂಡನ ಮಾಡಿಕೊಳ್ಳಲಾಗುವುದೆಂದು ಒಳ ಮೀಸಲಾತಿ
ಹೋರಾಟ ಸಮಿತಿ ರಾಜ್ಯ ಸಂಚ ಭಾಸ್ಕರ್‍ಪ್ರಸಾದ್ಎಚ್ಚರಿಕೆನೀಡಿದ್ದಾರೆ.ಪ್ರವಾಸಿಮಂದಿರದಲ್ಲಿಗುರುವಾರಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಒಳ ಮೀಸಲಾತಿ ಜಾರಿಗೊಳಿಸುವಂತೆಸುಪ್ರೀಂಕೋರ್ಟ್ ತೀರ್ಪು ನೀಡಿ ಆ.1 ಕ್ಕೆ ಒಂದು ವರ್ಷವಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪರಿಶಿಷ್ಟಜಾತಿಯ ನೂರ ಒಂದು ಜಾತಿಗಳಿಗೆ ವಂಚನೆ ಮಾಡಿಕೊಂಡು ಬರುತ್ತಿದ್ದಾರೆ. ಅನಗತ್ಯ ಆಯೋಗ ರಚಿಸಿ ಸಂಕಷ್ಟಕ್ಕೆ ಸಿಲುಕಿಸುತ್ತಿದೆ.
ಹಾಗಾಗಿ ಆ.1 ರಿಂದ 30 ರೊಳಗೆ ಯಾವುದಾದರೂ ಒಂದು ದಿನಾಂಕ ನಿಗಧಿಪಡಿಸಿಕೊಂಡು ದೆಹಲಿ ಚಲೋ ಹಮ್ಮಿಕೊಂಡು
ರಾಹುಲ್‍ಗಾಂಧಿ ನಿವಾಸಕ್ಕೆ ಮುತ್ತಿಗೆ ಹಾಕಿ ರಾಜ್ಯದಲ್ಲಿರುವ ನಿಮ್ಮ ಪಕ್ಷದ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ಅರ್ಥ ಗೊತ್ತಿದೆಯೇಎಂದು ಪ್ರಶ್ನಿಸಲಾಗುವುದು. ಇದಲ್ಲದೆ ಪ್ರಧಾನಿ ಹಾಗೂ ರಾಷ್ಟ್ರಪತಿಗೆ ಮನವಿ ಸಲ್ಲಿಸಲಾಗುವುದೆಂದು ಹೇಳಿದರು.ನೂರ ಒಂದು ಜಾತಿಗಳಿಗೂ ಸಂಜೀವಿನಿಯಾಗಿರುವ ಒಳ ಮೀಸಲಾತಿ ಜಾರಿಯಾಗಬೇಕು. ಅದಕ್ಕಾಗಿ ಎಲ್ಲಾ ಪಕ್ಷಗಳ ರಾಜಕೀಯನಾಯಕರುಗಳನ್ನು ಭೇಟಿ ಮಾಡುತ್ತೇವೆ. ವಿವಿಧ ಹೋರಾಟಗಾರರು, ಜನಪರ ಸಂಘಟನೆಗಳು, ಮಠಾಧೀಶರುಗಳು, ವಿವಿಧಜಾತಿಯ ಮುಖಂಡರುಗಳನ್ನು ಭೇಟಿಯಾಗಿ ಬೆಂಬಲ ಕೋರುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಯವಂಚಕತನ,ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪನವರ ಕುತಂತ್ರದ ವಿರುದ್ದ ನಮ್ಮ ಹೋರಾಟ ನಿರಂತರವಾಗಿರುತ್ತದೆಂದರು.
ಕರ್ನಾಟಕ ಸಾಮಾಜಿಕ ನ್ಯಾಯ ಪರ ವಕೀಲರ ವೇದಿಕೆಯ ಎಸ್.ಅರುಣ್‍ಕುಮಾರ್ ಮಾತನಾಡಿ ಒಳ ಮೀಸಲಾತಿ
ಜಾರಿಗೊಳಿಸುವಂತೆ ಸುಪ್ರಿಂಕೋರ್ಟ್ ತೀರ್ಪು ನೀಡಿ ಆ.1 ಕ್ಕೆ ಒಂದು ವರ್ಷ ಪೂರ್ಣಗೊಳ್ಳಲಿದೆ. ಸದಾಶಿವ ಆಯೋಗ,
ಮಾಧುಸ್ವಾಮಿ ಆಯೋಗದಲ್ಲಿ ದತ್ತಾಂಶ ಕುರಿತು ಸಮಗ್ರ ಮಾಹಿತಿಯಿದೆ. ಕಾಂತರಾಜ್ ಆಯೋಗದಲ್ಲಿ ಮಾದಿಗರು, ಒಲೆಯರುಎಂಬ ಪ್ರತ್ಯೇಕ ದತ್ತಾಂಶವಿದೆ. ಇಷ್ಟೆಲ್ಲಾ ಇದ್ದರು ಮಧ್ಯಂತರ ವರದಿ ಜಾರಿಗೊಳಿಸದೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರುಮಾದಿಗರ ವಿರೋಧಿ ಸರ್ಕಾರ ಎನ್ನುವುದನ್ನು ಸಾಬೀತು ಪಡಿಸಿದ್ದಾರೆಂದು ಆಪಾದಿಸಿದರು.
ತೆಲಂಗಾಣ, ಆಂಧ್ರ, ಹರಿಯಾಣ, ತಮಿಳುನಾಡಿನಲ್ಲಿ ಒಳ ಮೀಸಲಾತಿ ಜಾರಿಯಾಗಿದೆ. ಕರ್ನಾಟಕದಲ್ಲಿ ಇನ್ನು ಆಗಿಲ್ಲ.
ನಾಗಮೋಹನ್‍ದಾಸ್ ಆಯೋಗ ಕಳೆದ ತಿಂಗಳ 5 ರಂದು ಮನೆ ಮನೆ ಸಮೀಕ್ಷೆ ಆರಂಭಿಸಿದೆ. ಒಳ ಮೀಸಲಾತಿ
ಜಾರಿಯಾಗಬಾರದೆಂಬುದು ಹೊಸ ಷಡ್ಯಂತ್ರ. ಜಾರಿಯಾದರೂ ಗೊಂದಲವಿರಬೇಕೆಂಬುದು ಸರ್ಕಾರದ ಉದ್ದೇಶ. ಅದಕ್ಕಾಗಿ ಉಗ್ರಹೋರಾಟ ನಮ್ಮದು ಎಂದು ಹೇಳಿದರು.
ಕರ್ನಾಟಕ ಸಾಮಾಜಿಕ ನ್ಯಾಯ ಪರ ವಕೀಲರ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಬೂದಿತಿಟ್ಟ ರಾಜೇಂದ್ರ ಎಲ್. ಮಾಳಪ್ಪ,ಶಿವಕುಮಾರ್ ಬೆಳ್ತೂರ್, ರಘುರಾಜ್‍ಕೊಳ್ಳಿ, ಎಂ.ಆರ್.ಸುಧೀಂದ್ರಕುಮಾರ್, ಸುರೇಶ್, ಸಿ.ಬಸವರಾಜ್, ರಘು, ಫಕೀರಪ್ಪ, ದಲಿತಮುಖಂಡ ಶಿವಣ್ಣ ಇನ್ನು ಅನೇಕರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



