ಹಿರಿಯೂರು: ದ್ವಿತೀಯ ಪಿಯುಸಿ ವಾರ್ಷಿಕ ಫಲಿತಾಂಶದಲ್ಲಿ ಸುಧಾರಣೆ ತರುವುದಕ್ಕಾಗಿ ಎಲ್ಲಾ ಉಪನ್ಯಾಸಕರು ಚಿಂತನ -ಮಂಥನ ನಡೆಸಬೇಕಿದೆ ಎಂದು ಶಾಲಾ ಶಿಕ್ಷಣ ಉಪ ನಿರ್ದೇಶಕ ಕೆ ತಿಮ್ಮಯ್ಯ ಉಪನ್ಯಾಸಕರುಗಳಿಗೆ ಸಲಹೆ ನೀಡಿದರು. ಹಿರಿಯೂರಿನ ವಾಗ್ದೇವಿ ವಿದ್ಯಾ ಸಂಸ್ಥೆಯಲ್ಲಿ ನಡೆದ ಚಿಂತನ ಮಂಥನ ಕಾರ್ಯಕ್ರಮವನ್ನು ಉದ್ಘಾಟಿಸಿ ತಾಲೂಕಿನ ಎಲ್ಲಾ ಪದವಿಪೂರ್ವ ಕಾಲೇಜಿನ ಉಪನ್ಯಾಸಕರು ಹೆಚ್ಚಿನ ಪ್ರಮಾಣದಲ್ಲಿ ಫಲಿತಾಂಶ ತರಬೇಕಿದೆ ಹಾಗೂ ಇಲ್ಲಿ ಸೇರಿರುವ ಎಲ್ಲಾ ಹಿರಿಯ ಮತ್ತು ಕಿರಿಯ ಉಪನ್ಯಾಸಕರು ತಮ್ಮ ಪಾಠ ಪ್ರವಚನದಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಅದಕ್ಕೆ ಬೇಕಾದ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು. ತಮ್ಮ ಅಧ್ಯಯನ ಮತ್ತು ಅನುಭವದಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದು ಸಲಹೆ ನೀಡಿದರು
ಜಿಲ್ಲಾ ಪ್ರಾಚಾರ್ಯರ ಸಂಘದ ಅಧ್ಯಕ್ಷರಾದ ದೇವೇಂದ್ರಪ್ಪನವರು ಫಲಿತಾಂಶ ಸುಧಾರಣೆಯಲ್ಲಿ ಉಪನ್ಯಾಸಕರು,ಪ್ರಾಚಾರ್ಯರು, ಪೋಷಕರು ಮತ್ತು ವಿದ್ಯಾರ್ಥಿಗಳ ಪಾತ್ರ ಮುಖ್ಯವಾದದ್ದು ಎಲ್ಲರೂ ಸೇರಿ ಚಿಂತನ ಮಂಥನ ನಡೆಸಿ ಸುಧಾರಣೆಗೆ ತರಬೇಕಿದೆ ಎಂದು ಹೇಳಿದರು
ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಮಲ್ಲೇಶ್ ಮಾತನಾಡಿದರು. ಅಧ್ಯಕ್ಷತೆಯನ್ನು ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀ ನಾಗರಾಜ್ ವಹಿಸಿದ್ದರು, ವಾಗ್ದೇವಿ ವಿದ್ಯಾ ಸಂಸ್ಥೆಯ ಕೆ. ವಿ. ಅಮರೇಶ್ ವೇದಿಕೆಯಲ್ಲಿದ್ದರು, ಕಾಂತರಾಜ್ ಜೆ.ಲೋಕೇಶ್, ಡಾ.ಮಾರುತಿ ಉಪಸ್ಥಿತರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



