ಬೆಂಗಳೂರು: ವಿಧಾನಪರಿಷತ್ತಿನ ಪ್ರತಿಪಕ್ಷದ ಮುಖ್ಯ ಸಚೇತಕ ಎನ್ .ರವಿಕುಮಾರ್ ವಿರುದ್ಧ ದೂರು ನೀಡಿದ ಐಎಎಸ್ ಅಧಿಕಾರಿಗಳ ಸಂಘ ಬೆಳಗಾವಿ ಎಎಸ್‌ಪಿ ಮೇಲೆ ಕೈ ಎತ್ತಲು ಮುಂದಾಗಿದ್ದ ಹಾಗೂ ವಿಜಯನಗರ ಜಿಲ್ಲಾಧಿಕಾರಿಗಳಿಗೆ ವೇದಿಕೆ ಮೇಲೆ ಅಪಮಾನ ಮಾಡಿದ ಘಟನೆಗಳ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾಕೆ ಧ್ವನಿ ಎತ್ತಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಾರವಾಗಿ ಪ್ರಶ್ನಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ಐಎಎಸ್ ಅಧಿಕಾರಿಗಳ ವಿರುದ್ಧ ಅವಮಾನ ಆಗುವಂತೆ ನಡೆದುಕೊಂಡಾಗ ಐಎಎಸ್ ಅಧಿಕಾರಿಗಳ ಅಸೋಸಿಯೇಷನ್ ಎಲ್ಲಿ ಹೋಗಿತ್ತು? ಆಗ ಅವರು ಯಾಕೆ ಮುಖ್ಯಮಂತ್ರಿಗಳ ವಿರುದ್ದ ದೂರು ನೀಡಿಲ್ಲ ಎಂದರು.ರವಿಕುಮಾರ್ ಅವರ ಹೇಳಿಕೆ ಕುರಿತು ಮಾಧ್ಯಮಗಳನ್ನು ಗಮನಿಸಿದ್ದೇನೆ. ರವಿಕುಮಾರ್ ಅವರು ಈ ಸಂಬಂಧ ಸ್ಪಷ್ಟನೆಯನ್ನೂ ನೀಡಿದ್ದಾರೆ. ತದನಂತರ ಐಎಎಸ್ ಅಧಿಕಾರಿಗಳ ಸಂಘದವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಕೆಲ ಮುಖಂಡರು ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ದೂರು ನೀಡಿದ್ದಾರೆ ಎಂದು ಹೇಳಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



