ಚಿತ್ರದುರ್ಗ ಜು.05 ದಂಡಿನ ಕುರುಬರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು ನಾಲ್ಕು ವರ್ಷಗಳಿಂದ ಅರ್ಧಕ್ಕೆ ನಿಂತಿರುವಶೌಚಾಲಯದ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಪಪ್ಪಿ ಸ್ಟೂಡೆಂಟ್ ವಿಂಗ್ ಸದಸ್ಯರು ತಾಲೂಕು ಪಂಚಾಯಿತಿಕಾರ್ಯನಿರ್ವಹಣಾಧಿಕಾರಿ ಮನವಿ ಮಾಡಿದ್ದಾರೆ.ಮನವಿ ಸ್ವೀಕರಿಸಿ ಮಾತನಾಡಿದ ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಅರ್ಧಕ್ಕೆ ನಿಂತಿರುವ ಕಾಮಗಾರಿವಿಚಾರವನ್ನು ಸಂಬಂಧಪಟ್ಟ ಪಿಡಿಒ ಅವರ ಗಮನಕ್ಕೆ ತಂದು ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕಾಮಗಾರಿಯನ್ನುಮಾಡಿಸಲಾಗುವುದು, ನಾನು ಕೂಡ ಸ್ಥಳಕ್ಕೆ ವೀಕ್ಷಣೆ ಮಾಡಿ ಅತಿ ಶೀಘ್ರದಲ್ಲೇ ಕೆಲಸ ಮುಗಿಸುವಂತೆ ಅಧಿಕಾರಿಗಳು ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.ಈ ಸಂದರ್ಭದಲ್ಲಿ ಪಪ್ಪಿ ಸ್ಟೂಡೆಂಟ್ ವಿಂಗ್ ಸದಸ್ಯರಾದ ರವಿ, ಸಲೀಂ, ಗೌತಮ್ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



