ಹೊಳಲ್ಕೆರೆ : ವ್ಯರ್ಥವಾಗಿ ಹರಿದು ಹೋಗುವ ನೀರನ್ನು ತಡೆಯಲು ಚೆಕ್ಡ್ಯಾಂಗಳನ್ನು ಕಟ್ಟಿಸಿದ್ದೇನೆ. ಇದರಿಂದ ರೈತರಿಗೆ
ಅನುಕೂಲವಾಗಿದೆ ಎಂದು ಶಾಸಕಡಾ.ಎಂ.ಚಂದ್ರಪ್ಪ ತಿಳಿಸಿದರು.
ಮಲ್ಲಾಡಿಹಳ್ಳಿ ಗ್ರಾಮದಲ್ಲಿ ಐದು ಕೋಟಿ ರೂ.ವೆಚ್ಚದಲ್ಲಿ ನೂತನ ಚೆಕ್ಡ್ಯಾಂ ನಿರ್ಮಾಣ ಕಾಮಗಾರಿಗೆ ಶನಿವಾರ ಭೂಮಿ ಪೂಜೆಸಲ್ಲಿಸಿ ಮಾತನಾಡಿದರು.ಚೆಕ್ಡ್ಯಾಂಗಳನ್ನು ಕಟ್ಟಿಸಿರುವುದರಿಂದ ಅಂತರ್ಜಲ ಮಟ್ಟ ಜಾಸ್ತಿಯಾಗಿದೆ. ತಾಲ್ಲೂಕಿನಾದ್ಯಂತ ಡ್ಯಾಮ್, ಕೆರೆ, ಕಟ್ಟೆಗಳನ್ನುಕಟ್ಟಿಸಿದ್ದೇನೆ. ಹದಿನೇಳು ಕಡೆ ವಿದ್ಯುತ್ ಪವರ್ ಸ್ಟೇಷನ್ ನಿರ್ಮಾಣವಾಗಿದೆ. ಸಾರ್ವಜನಿಕರ ಬದುಕನ್ನು ಸ್ವಂತ ಬದುಕೆಂದುಅರ್ಥಮಾಡಿಕೊಂಡಿದ್ದೇನೆ. ಯಾವ ಜನಾಂಗಕ್ಕೂ ಅನ್ಯಾಯವಾಗಿಲ್ಲ. ಡಿಸೆಂಬರ್ನೊಳಗೆ ಎಲ್ಲಾ ಕೆರೆಗಳಿಗೂ ನೀರು ತುಂಬಿಸುತ್ತೇನೆ.
ಚಿಕ್ಕಜಾಜೂರಿನ ಕೋಟೆಹಾಳ್ ಬಳಿ ಹದಿಮೂರುವರೆ ಎಕರೆ ಪ್ರದೇಶದಲ್ಲಿ ಐದು ನೂರು ಕೋಟಿ ರೂ.ವೆಚ್ಚದಲ್ಲಿ ವಿದ್ಯುತ್ ಪವರ್ಸ್ಟೇಷನ್ ಕಟ್ಟಿಸುತ್ತಿದ್ದೇನೆ. ಇದರಿಂದ ಇನ್ನು ಐವತ್ತು ವರ್ಷಗಳ ಕಾಲ ರೈತರಿಗೆ ದಿನಕ್ಕೆ ಹತ್ತು ಗಂಟೆಗಳ ಕಾಲ ವಿದ್ಯುತ್
ಪೂರೈಕೆಯಾಗಲಿದೆ ಎಂದು ಹೇಳಿದರು.ಹಿರಿಯೂರಿನ ವಾಣಿವಿಲಾಸಸಾಗರದಿಂದ ನೀರು ತಂದು ಪ್ರತಿ ಮನೆ ಮನೆಗೂ ಶುದ್ದ ಕುಡಿಯುವ ನೀರು ಪೂರೈಸುವುದಕ್ಕಾಗಿ 367ಕೋಟಿ ರೂ.ಗಳನ್ನು ಖರ್ಚು ಮಾಡಿದ್ದೇನೆ. ಸ್ಕೂಲ್, ಕಾಲೇಜು, ಸ್ಟೇಡಿಯಂ, ಈಜುಕೊಳ, ಒಳಾಂಗಣ ಕ್ರೀಡಾಂಗಣ, ಹೈಟೆಕ್ಆಸ್ಪತ್ರೆ, ಮುರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರುರಾಣಿ ಚೆನ್ನಮ್ಮ ಶಾಲೆ, ಕಸ್ತೂರಬಾ ಶಾಲೆಗಳನ್ನು ಕಟ್ಟಿಸಿದ್ದೇನೆ.
ತಾಲ್ಲೂಕಿನಾದ್ಯಂತ 493 ಹಳ್ಳಿಗಳಲ್ಲಿ ಜನ ಯಾರು ಏನೆ ಕೇಳಲಿ ಬಿಡಲಿ ಎಲ್ಲಿ ಅಭಿವೃದ್ದಿ ಕೆಲಸ ಮಾಡಿದರೆ ಜನರಿಗೆ
ಅನುಕೂಲವಾಗುತ್ತದೆ ಎನ್ನುವ ಆಲೋಚನೆಯಿಟ್ಟುಕೊಂಡು ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಗೆ ಪ್ರಾಮಾಣಿಕವಾಗಿ
ಶ್ರಮಿಸುತ್ತಿದ್ದೇನೆಂದು ತಿಳಿಸಿದರು.ನ್ಯಾಯವಾದಿ ಸತ್ಯನಾರಾಯಣ ಮಾತನಾಡಿ ಶಾಸಕ ಡಾ.ಎಂ.ಚಂದ್ರಪ್ಪನವರು ಮಲ್ಲಾಡಿಹಳ್ಳಿಯಲ್ಲಿ ಸಿ.ಸಿ.ರಸ್ತೆ, ಒಳ ಚರಂಡಿಕಾಮಗಾರಿಗಳಿಗೆ ಹೆಚ್ಚಿನ ಅನುದಾನ ತಂದು ಅಭಿವೃದ್ದಿಪಡಿಸಿದ್ದಾರೆ. ಚೆಕ್ಡ್ಯಾಂ, ಕೆರೆಕಟ್ಟೆ, ಶಾಲಾ-ಕಾಲೇಜುಗಳನ್ನು ಕಟ್ಟಿಸಿದ್ದಾರೆ.ಮುಂದಿನ ದಿನಗಳಲ್ಲಿ ಸರ್ಕಾರದಿಂದ ಇನ್ನು ಹೆಚ್ಚಿನ ಅನುದಾನ ತಂದು ಮಲ್ಲಾಡಿಹಳ್ಳಿಯನ್ನು ಅಭಿವೃದ್ದಿಪಡಿಸಲಿ ಎಂದುವಿನಂತಿಸಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷ ರೇಖಾ ನಾಗಪ್ಪ, ಸದಸ್ಯರಾದ ಲತಾ, ರಮೇಶ್, ಅಜ್ಜಯ್ಯ, ಉಮೇಶ್, ನಾಗಪ್ಪ, ರೂಪ ಸುರೇಶ್,ಮರುಳುಸಿದ್ದಪ್ಪ, ಗುತ್ತಿಗೆದಾರ ಜಗದೀಶ್, ಗ್ರಾಮದ ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



