Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

28/05/2026 ರ ನಿತ್ಯ ಭವಿಷ್ಯ

27/05/2026 ರ ನಿತ್ಯ ಭವಿಷ್ಯ – ಬುಧವಾರ

26/05/2026 ರ ನಿತ್ಯ ಭವಿಷ್ಯ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಮುಖಪುಟ»ಅಹಿಂಸಾ ತತ್ವದಿಂದ ಮಾತ್ರ ಜಗತ್ತಿನಲ್ಲಿ ಶಾಂತಿ ಸಾಧ್ಯ; ಭಗವಾನ್ ಮಹಾವೀರ ಜಯಂತಿ
ಮುಖಪುಟ

ಅಹಿಂಸಾ ತತ್ವದಿಂದ ಮಾತ್ರ ಜಗತ್ತಿನಲ್ಲಿ ಶಾಂತಿ ಸಾಧ್ಯ; ಭಗವಾನ್ ಮಹಾವೀರ ಜಯಂತಿ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 30, 2026Updated:March 30, 2026No Comments2 Mins Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಅಹಿಂಸಾ ತತ್ವದಿಂದ ಮಾತ್ರ ಜಗತ್ತಿನಲ್ಲಿ ಶಾಂತಿ ಸಾಧ್ಯ; ಭಗವಾನ್ ಮಹಾವೀರ ಜಯಂತಿ

ಟಿಒಬಿ ನ್ಯೂಸ್ ಚಿತ್ರದುರ್ಗ

ಭಗವಾನ್ ಮಹಾವೀರರು ಸಾರಿದ ಅಹಿಂಸೆ ಮತ್ತು ಶಾಂತಿಯ ತತ್ವಗಳನ್ನು ಪಾಲಿಸುವುದರಿಂದ ಮಾತ್ರ ಇಂದಿನ ಯುದ್ಧದ ಭೀತಿಯ ನಡುವೆ ಜಗತ್ತಿನಲ್ಲಿ ನೆಮ್ಮದಿ ಕಾಣಲು ಸಾಧ್ಯ ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ಹಮ್ಮಿಕೊಂಡಿದ್ದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮದಲ್ಲಿ ಭಗವಾನ್ ಮಹಾವೀರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಪ್ರಸ್ತುತ ದಿನಗಳಲ್ಲಿ ಜಗತ್ತಿನಾದ್ಯಂತ ಯುದ್ಧದ ವಾತಾವರಣ ಮತ್ತು ಅದರ ಭೀಕರ ಪರಿಣಾಮಗಳನ್ನು ನಾವು ಕಾಣುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಮಹಾವೀರರು ಬೋಧಿಸಿದ ನೀನು ಬದುಕು, ಇತರರನ್ನೂ ಬದುಕಲು ಬಿಡು ಎಂಬ ತತ್ವ ಜಗತ್ತಿಗೆ ಅತ್ಯಗತ್ಯವಾಗಿದೆ ಎಂದು ತಿಳಿಸಿದ ಅವರು, ಸ್ವಾರ್ಥಕ್ಕಾಗಿ ಪರಸ್ಪರ ಹಿಂಸೆಯಲ್ಲಿ ತೊಡಗಿರುವ ಇಂದಿನ ಕಾಲಘಟ್ಟದಲ್ಲಿ ಸಹಬಾಳ್ವೆಯ ಅಗತ್ಯವಿದೆ ಎಂದರು.

ಮಹಾವೀರರ ತತ್ವಗಳು ಮಹಾತ್ಮ ಗಾಂಧೀಜಿ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅವರ ಮೇಲೆ ಅಪಾರ ಪ್ರಭಾವ ಬೀರಿದ್ದವು. ಭಾರತದ ಸ್ವಾತಂತ್ರ್ಯವು ಸತ್ಯ ಮತ್ತು ಅಹಿಂಸೆಯ ಹೋರಾಟದ ಫಲವಾಗಿದೆ ಎಂಬುದು ಸ್ಮರಣೀಯ ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಪಂಪ, ಪೊನ್ನ, ರನ್ನ, ನಾಗಚಂದ್ರ ಮತ್ತು ನಾಗವರ್ಮರಂತಹ ಜೈನ ಕವಿಗಳ ಪರಂಪರೆ ಅತ್ಯಂತ ದೊಡ್ಡದು. ಅವರು ತಮ್ಮ ಕಾವ್ಯಗಳ ಮೂಲಕ ಧರ್ಮ ಮತ್ತು ಲೌಕಿಕ ಬದುಕಿನ ಸಾರವನ್ನು ಜನರಿಗೆ ತಲುಪಿಸಿದ್ದಾರೆ. ಜೈನ ಸಮಾಜವು ಶಾಂತಿ ಮತ್ತು ಅಹಿಂಸೆಗೆ ಹೆಸರಾಗಿದೆ. ಲೌಕಿಕ ಬದುಕನ್ನು ತ್ಯಜಿಸಿ ಜ್ಞಾನದ ಹಾದಿಯಲ್ಲಿ ಸಾಗಿದ ಮಹಾವೀರರು ವಿಶ್ವಕ್ಕೆ ಶಾಂತಿ ಮಂತ್ರ ನೀಡಿದ್ದಾರೆ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‍ಪೀರ್ ಮಾತನಾಡಿ, ಜಗತ್ತಿನ ಎಲ್ಲಾ ಶಸ್ತ್ರಾಸ್ತ್ರಗಳಿಗಿಂತ ಭಗವಾನ್ ಮಹಾವೀರರು ಬೋಧಿಸಿದ ಅಹಿಂಸಾ ತತ್ವವೇ ಅತ್ಯಂತ ಪ್ರಬಲವಾದುದು. ಇಂದಿನ ಯುದ್ಧೋನ್ಮಾದದ ಜಗತ್ತಿಗೆ ಶಾಂತಿ ನೆಲೆಸಲು ಮಹಾವೀರರ ಮಾರ್ಗವೊಂದೇ ಪರಿಹಾರ. ಪ್ರತಿಯೊಬ್ಬರೂ ಮಹಾವೀರರ ತತ್ವಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡರೆ ಮಾತ್ರ ಜಗತ್ತು ಶಾಂತಿಯ ತೋಟವಾಗಿರಲು ಸಾಧ್ಯ ಎಂದು ಹೇಳಿದರು.

ಭಗವಾನ್ ಮಹಾವೀರರ ಕುರಿತು ಚಿತ್ರದುರ್ಗ ಆಕಾಶವಾಣಿಯ ಡಾ.ನವೀನ್ ಮಸ್ಕಲ್ ಉಪನ್ಯಾಸ ನೀಡಿ, ಜಗತ್ತಿನ ಶ್ರೇಷ್ಠ ಮಾನವೀಯ ಮೌಲ್ಯಗಳನ್ನು ಸಾರುವ ಜೈನ ಧರ್ಮದ ತತ್ವಗಳು ಮತ್ತು ಭಗವಾನ್ ಮಹಾವೀರರ ಅಹಿಂಸೆಯ ಸಂದೇಶಗಳು ಇಂದಿನ ಸಂಘರ್ಷಮಯ ಜಗತ್ತಿಗೆ ಅತ್ಯಂತ ಪ್ರಸ್ತುತವಾಗಿವೆ ಎಂದರು.

 

ಆದಿಕವಿ ಪಂಪ ಹೇಳಿದಂತೆ ಮನುಷ್ಯ ಕುಲಂ ತಾನೊಂದೇ ವಲಂ ಎಂಬುದು ಜೈನ ಧರ್ಮದ ಮೂಲ ಆಶಯ. ಮಹಾವೀರರು ಅಂದಿನ ಕಾಲದ ಸಾಮಾಜಿಕ ಅಸಮಾನತೆ, ಶೋಷಣೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಮೇಲಿನ ತಾರತಮ್ಯದ ವಿರುದ್ಧ ಧ್ವನಿ ಎತ್ತಿದ್ದರು. ಸಕಲ ಜೀವರಾಶಿಗಳಿಗೂ ಲೇಸನ್ನು ಬಯಸುವ ಈ ಧರ್ಮವು ವಿಶ್ವಮಾನವ ಪರಿಕಲ್ಪನೆಯನ್ನು ಅಂದೇ ಸಾರಿತ್ತು ಎಂದು ಹೇಳಿದರು.

ಧಾರವಾಡ ಜಿಲ್ಲೆಯ ಅಣ್ಣಿಗೇರಿಯಲ್ಲಿ ಪಂಪ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸುವ ಮೂಲಕ ರಾಜ್ಯ ಸರ್ಕಾರವು ಜೈನ ಧರ್ಮ ಮತ್ತು ಪಂಪನ ಕೊಡುಗೆಯನ್ನು ಗೌರವಿಸಿದೆ ಎಂದು ಸ್ಮರಿಸಿದರು.

 

ನಗರಸಭೆ ಪೌರಾಯುಕ್ತೆ ಎಸ್.ಲಕ್ಷ್ಮೀ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ, ಜಿಲ್ಲಾ ಜೈನ್ ಸಂಘದ ಟ್ರಸ್ಟಿಗಳಾದ ಪೃಥ್ವಿರಾಜ್, ಪಿ.ರಮೇಶ್ ಕುಮಾರ್, ಶಾಂತಿಲಾಲ್‍ಜೀ, ಪ್ರೇಮಚಂದ್ ಜೈನ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು. ಹೊಸದುರ್ಗದ ಬಿ.ಸರಸ್ವತಿ ಮತ್ತು ತಂಡದವರು ಗೀತಗಾಯನ ನಡೆಸಿಕೊಟ್ಟರು.

Follow on Facebook Follow on Instagram
Share. Facebook Twitter WhatsApp Telegram
Previous Articleಜನಗಣತಿ: ಏಪ್ರಿಲ್ 1 ರಿಂದ ಸ್ವಯಂ ಮಾಹಿತಿ ಸಲ್ಲಿಸಿ
Next Article ದಾವಣಗೆರೆಯಲ್ಲಿ ಮಾ‌ದಿಗ ಮುಖಂಡರ ಮಹತ್ವದ ಸಭೆ ; ಸಚಿವರು, ಮಾಜಿ ಸಚಿವರು ಭಾಗಿ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಬಳ್ಳಾರಿ ವಾಹನ ಸವಾರರ ಗಮನಕ್ಕೆ: 60 ದಿನಗಳ ಕಾಲ ರಾಷ್ಟ್ರೀಯ ಹೆದ್ದಾರಿ 150-ಎ ಮಾರ್ಗ ಬದಲಾವಣೆ, ಇಲ್ಲಿದೆ ಪರ್ಯಾಯ ದಾರಿ

May 25, 2026

SBI Apprentice Recruitment 2026: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 7,150 ಹುದ್ದೆಗಳ ನೇಮಕಾತಿ, ಜೂನ್ 8 ಕೊನೆ ದಿನ!

May 24, 2026

ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ: ದಿಢೀರ್ ಸಾವುಗಳ ಸುತ್ತ ಒಂದು ಚಿಂತನೆ

May 21, 2026
Add A Comment
Leave A Reply Cancel Reply

Advertisement
Latest Posts

28/05/2026 ರ ನಿತ್ಯ ಭವಿಷ್ಯ

27/05/2026 ರ ನಿತ್ಯ ಭವಿಷ್ಯ – ಬುಧವಾರ

26/05/2026 ರ ನಿತ್ಯ ಭವಿಷ್ಯ

ಬಳ್ಳಾರಿ ಜನರೇ ಗಮನಿಸಿ: ಮೇ 26 ರಂದು ನಗರದ ಈ ಭಾಗಗಳಲ್ಲಿ 7 ಗಂಟೆ ವಿದ್ಯುತ್ ಕಡಿತ!

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.