ದಾವಣಗೆರೆಯಲ್ಲಿ ಮಾದಿಗ ಮುಖಂಡರ ಮಹತ್ವದ ಸಭೆ ; ಸಚಿವರು, ಮಾಜಿ ಸಚಿವರು ಭಾಗಿ
ಟಿಒಬಿ ನ್ಯೂಸ್ ದಾವಣಗೆರೆ
ಮಾದಿಗ ಸಮುದಾಯದ ಮುಖಂಡರ ಮಹತ್ವದ ಸಭೆಯನ್ನು ಮಾರ್ಚ್ 31ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ದಾವಣಗೆರೆ ನಗರದ ಅಕ್ಕಮಹಾದೇವಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದೆ.
ಮಾಜಿ ಸಚಿವ ಹೆಚ್.ಆಂಜನೇಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಗೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಸಚಿವರು ಹಾಗೂ ಸಮುದಾಯದ ಹಿರಿಯ ಮುಖಂಡರಾದ ಕೆ.ಹೆಚ್. ಮುನಿಯಪ್ಪ, ಮಾಜಿ ಸಂಸದ ಬಿ.ಎನ್. ಚಂದ್ರಪ್ಪ ಆಗಮಿಸಲಿದ್ದಾರೆ.
ಸಮುದಾಯದ ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲು ಕರೆಯಲಾಗಿರುವ ಈ ಸಭೆಯಲ್ಲಿ ಮಾದಿಗ ಸಮುದಾಯದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಭೆಯನ್ನು ಯಶಸ್ವಿಗೊಳಿಸಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ತಿಳಿಸಿದ್ದಾರೆ.
