Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಕುತೂಹಲಕ್ಕೆ ಬಿತ್ತು ತೆರೆ ; ಪ್ರಕಟವಾಯ್ತು ವಾರ್ಷಿಕ ಪ್ರಶಸ್ತಿಗಳ ಪ್ರಕಟ

ನೌಕರರೇ ಎಚ್ಚರ…ಸರ್ಕಾರದ ಹೆಸರಲ್ಲಿ ನಕಲಿ ಆದೇಶ !

ಇಂದಿರಾ ಶಾಪಿಂಗ್ ಕಾಂಪ್ಲೆಕ್ಸ್ ತೆರವು ಸುಗಮ: ಪೂಜೆ ಬಳಿಕ ಕಾರ್ಯಾಚರಣೆ ಆರಂಭ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಒಳ ಮೀಸಲಾತಿ ಜಾರಿಗೆ ಸರ್ಕಾರ ಬದ್ಧ: ನೇಮಕಾತಿಯಲ್ಲೇ ಅನುಷ್ಠಾನ – ಮುನಿಯಪ್ಪ
ರಾಜ್ಯ

ಒಳ ಮೀಸಲಾತಿ ಜಾರಿಗೆ ಸರ್ಕಾರ ಬದ್ಧ: ನೇಮಕಾತಿಯಲ್ಲೇ ಅನುಷ್ಠಾನ – ಮುನಿಯಪ್ಪ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿMarch 31, 2026No Comments2 Mins Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಒಳ ಮೀಸಲಾತಿ ಜಾರಿಗೆ ಸರ್ಕಾರ ಬದ್ಧ: ನೇಮಕಾತಿಯಲ್ಲೇ ಅನುಷ್ಠಾನ – ಮುನಿಯಪ್ಪ

ಚಿತ್ರದುರ್ಗ, ಮಾ.31: ರಾಜ್ಯ ಸರ್ಕಾರ ನೇಮಕಾತಿಗೆ ಮುಂದಾಗಿರುವ ಹುದ್ದೆಗಳಲ್ಲಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡೇ ಪ್ರಕ್ರಿಯೆ ನಡೆಸಲಾಗುವುದು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಕೆ.ಹೆಚ್. ಮುನಿಯಪ್ಪ ಹೇಳಿದರು.
ನಗರದ ಶಿವ ಶರಣ ಮಾದಾರ ಚನ್ನಯ್ಯ ಗುರುಪೀಠದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ನಡೆಯುತ್ತಿರುವ ನೇಮಕಾತಿ ಪ್ರಕ್ರಿಯೆ ಅಂತಿಮಗೊಳ್ಳುವೊಳಗೆ ಒಳ ಮೀಸಲಾತಿ ಜಾರಿಯಾಗಲಿದ್ದು, ಅದರಂತೆಯೇ ಎಲ್ಲ ಸಮುದಾಯಗಳ ನಿರುದ್ಯೋಗಿ ಅಭ್ಯರ್ಥಿಗಳಿಗೆ ನ್ಯಾಯ ದೊರೆಯಲಿದೆ. ಈ ಕುರಿತು ಯಾವುದೇ ಆತಂಕ ಬೇಡ ಎಂದು ಭರವಸೆ ನೀಡಿದರು.
ಹಿಂದಿನ ಬಿಜೆಪಿ ಸರ್ಕಾರ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಏರಿಸಿದ್ದರೂ, ನ್ಯಾಯಾಲಯದ ನಿರ್ದೇಶನದಂತೆ ಅದನ್ನು ಶೇ.50ರೊಳಗೆ ತರಬೇಕಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಸಮುದಾಯಗಳ ಮುಖಂಡರೊಂದಿಗೆ ಚರ್ಚಿಸಿ, ಸ್ವಲ್ಪ ಪ್ರಮಾಣದಲ್ಲಿ ಕಡಿತಗೊಳಿಸಿ ಜಾರಿಗೆ ತರಲು ಒಪ್ಪಿಗೆ ವ್ಯಕ್ತವಾಗಿದೆ. ಅಂತಿಮ ತೀರ್ಮಾನವನ್ನು ಸಚಿವ ಸಂಪುಟದಲ್ಲಿ ಕೈಗೊಂಡು, ಉಪಚುನಾವಣೆಯ ಬಳಿಕ ಜಾರಿ ಮಾಡಲಾಗುವುದು ಎಂದರು.
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಕುರಿತು ಕಳೆದ 35 ವರ್ಷಗಳಿಂದ ಹೋರಾಟ ನಡೆಯುತ್ತಿದ್ದು, ಈ ಸಂಬಂಧ ಹಲವು ಆಯೋಗಗಳು ವರದಿ ಸಲ್ಲಿಸಿವೆ. ಸಚಿವ ಸಂಪುಟದಲ್ಲೂ ಹಲವು ಬಾರಿ ಚರ್ಚೆ ನಡೆದಿದ್ದು, ಮಾರ್ಚ್ 27ರಂದು ವಿಶೇಷ ಅಧಿವೇಶನದಲ್ಲಿ ಜಾರಿಗೆ ತರುವ ಯತ್ನ ನಡೆದರೂ, ಉಪಚುನಾವಣೆ ನೀತಿ ಸಂಹಿತೆಯ ಹಿನ್ನೆಲೆ ಮುಂದೂಡಲಾಗಿದೆ ಎಂದು ವಿವರಿಸಿದರು.
ಉಪಚುನಾವಣೆ ನೀತಿ ಸಂಹಿತೆ ಮುಗಿದ ಬಳಿಕ ಒಳ ಮೀಸಲಾತಿ ಜಾರಿಯಾಗಲಿದೆ. ನೆರೆ ರಾಜ್ಯಗಳ ಮಾದರಿಯಲ್ಲಿ ಕರ್ನಾಟಕದಲ್ಲೂ ಜಾರಿ ಮಾಡಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಪೆಟ್ರೋಲ್ ಮತ್ತು ಗ್ಯಾಸ್ ಕೊರತೆ ಇಲ್ಲ. ಸರಿಯಾದ ವಿತರಣೆ ನಡೆಯುತ್ತಿದ್ದು, ಕಾಳಸಂತೆ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಕೇಂದ್ರ ಸರ್ಕಾರದಿಂದ ಹೆಚ್ಚಿನ ಪೂರೈಕೆಗೆ ಮನವಿ ಮಾಡಲಾಗಿದೆ ಎಂದರು.
ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಅವರು, ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳಿಗೆ ಜನರ ಬೆಂಬಲ ದೊರೆಯಲಿದೆ ಎಂದರು.
ಗೋಷ್ಠಿಯಲ್ಲಿ ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ಡಿಸಿಸಿ ಕಾರ್ಯಾಧ್ಯಕ್ಷ ಹಾಲಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Bangalore chitradurga goverment karanataka ಒಳ ಮೀಸಲಾತಿ ಕರ್ನಾಟಕ ಚಿತ್ರದುರ್ಗ ಬೆಂಗಳೂರು
Follow on Facebook Follow on Instagram
Share. Facebook Twitter WhatsApp Telegram
Previous Articleಚನ್ನಗಾನಹಳ್ಳಿ: ಕೃಷಿಹೊಂಡದಲ್ಲಿ ಮುಳುಗಿ 6ನೇ ತರಗತಿ ವಿದ್ಯಾರ್ಥಿ ಸಾವು
Next Article ಅಂಗನವಾಡಿ ನೇಮಕಾತಿ: ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ, ಏ.10ರವರೆಗೆ ಆಕ್ಷೇಪಣೆ ಅವಕಾಶ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ಕುತೂಹಲಕ್ಕೆ ಬಿತ್ತು ತೆರೆ ; ಪ್ರಕಟವಾಯ್ತು ವಾರ್ಷಿಕ ಪ್ರಶಸ್ತಿಗಳ ಪ್ರಕಟ

March 31, 2026

ನೌಕರರೇ ಎಚ್ಚರ…ಸರ್ಕಾರದ ಹೆಸರಲ್ಲಿ ನಕಲಿ ಆದೇಶ !

March 31, 2026

ಇಂದಿರಾ ಶಾಪಿಂಗ್ ಕಾಂಪ್ಲೆಕ್ಸ್ ತೆರವು ಸುಗಮ: ಪೂಜೆ ಬಳಿಕ ಕಾರ್ಯಾಚರಣೆ ಆರಂಭ

March 31, 2026
Add A Comment
Leave A Reply Cancel Reply

Advertisement
Latest Posts

ಕುತೂಹಲಕ್ಕೆ ಬಿತ್ತು ತೆರೆ ; ಪ್ರಕಟವಾಯ್ತು ವಾರ್ಷಿಕ ಪ್ರಶಸ್ತಿಗಳ ಪ್ರಕಟ

ನೌಕರರೇ ಎಚ್ಚರ…ಸರ್ಕಾರದ ಹೆಸರಲ್ಲಿ ನಕಲಿ ಆದೇಶ !

ಇಂದಿರಾ ಶಾಪಿಂಗ್ ಕಾಂಪ್ಲೆಕ್ಸ್ ತೆರವು ಸುಗಮ: ಪೂಜೆ ಬಳಿಕ ಕಾರ್ಯಾಚರಣೆ ಆರಂಭ

ಮಹಿಳಾ ಸಮುದಾಯ ಸದಾ ಕ್ರಿಯಾಶೀಲತೆಗೆ ಮುನ್ನಡೆಯಲಿ: ಗದ್ದಿಗೆತಿಪ್ಪೇಸ್ವಾಮಿ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.