ಚಿತ್ರದುರ್ಗ: ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯಕ್ಕೆ ನೂತನ ಪ್ರಾಚಾರ್ಯರ ನೇಮಕ
ಚಿತ್ರದುರ್ಗ, ಮಾ. 31: ನಗರದ ಬಸವೇಶ್ವರ ವೈದ್ಯಕೀಯ ಮಹಾವಿದ್ಯಾಲಯಕ್ಕೆ ನೂತನ ಪ್ರಾಚಾರ್ಯರಾಗಿ ಡಾ. ರಾಜೇಶ್ ಎಂ.ಎಸ್. ಅಧಿಕಾರ ವಹಿಸಿಕೊಂಡಿದ್ದಾರೆ.
ಇದೇ ಸಂದರ್ಭದಲ್ಲಿ ಬಸವೇಶ್ವರ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾಗಿ ಡಾ. ಎಲ್. ಪಾಲಾಕ್ಷಯ್ಯ ನೇಮಕಗೊಂಡಿದ್ದು, ಎಸ್.ಜೆ.ಎಂ. ಫಾರ್ಮಸಿ ಮಹಾವಿದ್ಯಾಲಯದ ವಯೋನಿವೃತ್ತಿ ಹೊಂದಿದ ಪ್ರಾಚಾರ್ಯ ಡಾ. ಟಿ.ಎಸ್. ನಾಗರಾಜ್ ಅವರ ಸ್ಥಾನಕ್ಕೆ ಡಾ. ಮಾರುತಿ ಟಿ. ಏಕಬೋಟೆ ಹೊಸ ಪ್ರಾಚಾರ್ಯರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ನೂತನ ಪ್ರಾಚಾರ್ಯರು ಹಾಗೂ ವೈದ್ಯಕೀಯ ಅಧೀಕ್ಷಕರನ್ನು ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿಯ ಅಧ್ಯಕ್ಷ ಶಿವಯೋಗಿ ಸಿ. ಕಳಸದ, ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಡಾ. ಪಿ.ಎಸ್. ಶಂಕರ್, ಎಸ್.ಎನ್. ಚಂದ್ರಶೇಖರ್, ಎಸ್.ಜೆ.ಎಂ. ವಿಶ್ವವಿದ್ಯಾಲಯದ ಕುಲಪತಿ ಡಾ. ಕೆ.ಬಿ. ಗುಡಸಿ, ಕುಲಸಚಿವ ಡಾ. ಎಂ.ಎಸ್. ಗಣಾಚಾರಿ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದರು.
ಈ ನೇಮಕಾತಿಗಳ ಮೂಲಕ ಸಂಸ್ಥೆಯ ಶೈಕ್ಷಣಿಕ ಹಾಗೂ ವೈದ್ಯಕೀಯ ಸೇವೆಗಳ ಗುಣಮಟ್ಟ ಮತ್ತಷ್ಟು ಬಲಪಡ ಲಿದೆ ಎಂಬ ವಿಶ್ವಾಸ ವ್ಯಕ್ತವಾಗಿದೆ.
