ಬೆಂಗಳೂರು: ರಾಜ್ಯ ಆರೋಗ್ಯ ಇಲಾಖೆ ವ್ಯಾಪ್ತಿಯ ಎಲ್ಲಾ ಆಸ್ಪತ್ರೆಗಳು ತಮ್ಮ ವ್ಯಾಪ್ತಿಯಲ್ಲಿ ವರದಿಯಾದ ಎಂಎಲ್‌ಸಿ (ಅಪರಾಧಿಕ ವೈದ್ಯಕೀಯ ಪ್ರಕರಣ) ಹಾಗೂ ಮರಣೋತ್ತರ ಪರೀಕ್ಷೆ ವರದಿಗಳನ್ನು “Medleapr.nic.in’ ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ಅಪ್ ಲೋಡ್ ಮಾಡುವಂತೆ ಆರೋಗ್ಯ ಇಲಾಖೆ ಆದೇಶಿಸಿದೆ. ಈ ಸಂಬಂಧ ಆರೋಗ್ಯ ಇಲಾಖೆ ಅಡಿ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ವಿಭಾಗ ದಿಂದ ಸುತ್ತೋಲೆ ಹೊರಡಿಸಿದ್ದು, ಮರಣೋತ್ತರ ಪರೀಕ್ಷೆ ವರದಿಯನ್ನು Medleapr ಪೋರ್ಟಲ್‌ನಲ್ಲಿಯೇ ಸಿದ್ಧಪಡಿಸಬೇಕು ಎಂದು ಸ್ಪಷ್ಟವಾಗಿ ತಿಳಿಸಿದೆ.
ಯಾವ ಕಾರಣಕ್ಕೂ ಕೈಯಲ್ಲಿ ಬರೆಯುವ ಮೂಲಕ ಸಿದ್ಧಪಡಿಸುವಂತಿಲ್ಲ. ಪೋರ್ಟ ಲ್‌ನಲ್ಲಿಯೇ ಸಿದ್ಧಪಡಿಸಿ ಅಪ್ಲೋಡ್ ಮಾಡಬೇಕು. ನೆಟ್ವರ್ಕ್, ಪೋರ್ಟಲ್ ಸಮಸ್ಯೆ ಯಿದ್ದರೆ ಕಂಪ್ಯೂಟರ್‌ನಲ್ಲಿ ಟೈಪ್ ಮಾಡಿ 24 ಗಂಟೆಯೊಳಗೆ ಪೋರ್ಟಲ್‌ನಲ್ಲಿ ಅಪ್ಲೋಡ್ ಮಾಡಬೇಕು. ರಾಜ್ಯ ಆರೋಗ್ಯ ಇಲಾಖೆ ವ್ಯಾಪ್ತಿಯ ಸಂಬಂಧಪಟ್ಟ ಆಸ್ಪತ್ರೆ ಗಳ ವೈದ್ಯಾಧಿಕಾರಿಗಳು ಹಾಗೂ ವೈದ್ಯರು ಪೋರ್ಟಲ್‌ಗೆ ಲಾಗಿನ್ ಆಗಬೇಕು. ನೋಡಲ್ ಅಧಿಕಾರಿಗಳು ಪರಿಶೀಲಿಸಿ 2 ದಿನ ಒಳಗಾಗಿ ಅಪ್ರೊ ವಲ್ ನೀಡಬೇಕು. ಬಳಿಕ ವೈದ್ಯರು ತಮ್ಮ ಲಾಗಿನ್‌ನಲ್ಲಿಯೇ ವರದಿ ಸಿದ್ಧಪಡಿಸಬೇಕು ಎಂದು ಸೂಚಿಸಲಾಗಿದೆ.ಯಾರು ಮರಣೋತ್ತರ ಪರೀಕ್ಷೆ ನಡೆಸಿದರು? ಯಾವ ಆಸ್ಪತ್ರೆ? ವ್ಯಕ್ತಿಯ ವಿವರ ಸೇರಿ ಎಲ್ಲವೂ ಆನ್‌ಲೈನ್‌ನಲ್ಲಿ ಸಿಗಲಿದೆ. ಎಂಎಲ್‌ಸಿ ಪ್ರಕರಣದಲ್ಲಿ ಗಾಯಾಳು ಹೇಳಿಕೆಯಿಂದ ಹಿಡಿದು ಎಲ್ಲಾ ವರದಿಯೂ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



