ಚಿತ್ರದುರ್ಗ: ಇಲ್ಲಿನ ನಗರಸಭೆ ಉಪಾಧ್ಯಕ್ಷರಾಗಿದ್ದ ಜಿ.ಎಸ್.ಶ್ರೀದೇವಿ ಜಿಲ್ಲಾಧಿಕಾರಿಗಳಿಗೆರಾಜೀನಾಮೆ ಪತ್ರ ಸಲ್ಲಿಸುವ ಮೂಲಕ ಉಪಾಧ್ಯಕ್ಷೆ ಸ್ಥಾನವನ್ನು ತ್ಯಜಿಸಿದ್ದಾರೆ.ಚಿತ್ರದುರ್ಗ ನಗರಸಭೆ ವ್ಯಾಪ್ತಿಯ ವಾರ್ಡ್ ನಂ.33 ಸದಸ್ಯರಾಗಿ ಆಯ್ಕೆಯಾಗಿದ್ದ ಜಿ.ಎಸ್.ಶ್ರೀದೇವಿ ಕಳೆದ 2024 ರ ಆಗಸ್ಟ್ತಿಂಗಳಲ್ಲಿ ನಗರಸಭೆಯ ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ 11 ತಿಂಗಳುಗಳ ಕಾಲ ಕಾರ್ಯನಿರ್ವಹಿಸಿದ್ದರು. ಅವರು ತಮ್ಮವೈಯಕ್ತಿಕ ಕಾರಣಗಳಿಂದಾಗಿ ಉಪಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಯಲು ಸಾಧ್ಯವಾಗದೇ ಇರುವುದರಿಂದ ಉಪಾಧ್ಯಕ್ಷ ಸ್ಥಾನಕ್ಕೆ ಸ್ವ-ಇಚ್ಚೆಯಿಂದ ರಾಜೀನಾಮೆ ನೀಡಿರುವುದಾಗಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



