ಬೆಂಗಳೂರು ಕಾರ್ಮಿಕ ವಿರೋಧಿ ಕಾನೂನುಗಳ ಜಾರಿ ವಿರೋಧಿಸಿ ಕಾರ್ಮಿಕ ಸಂಘ ಟನೆಗಳು ಬುಧವಾರ ಕರೆ ನೀಡಿರುವ ಭಾರತ್ ಬಂದ್ ಗೆ ಸೋಷಿಯಲಿಸ್ಟ್ ಯೂ ನಿಟಿ ಸೆಂಟರ್ ಆಫ್ ಇಂಡಿ ಯಾ, ಆಲ್ ಇಂಡಿಯಾ ಫಾರ್ವಡ್್ರ ಬ್ಲಾಕ್, ಭಾರತ ಕಮ್ಯುನಿಸ್ಟ್ ಪಕ್ಷ ಸೇರಿದಂತೆ ಹಲವು ಪಕ್ಷಗಳು ಬೆಂಬಲ ವ್ಯಕ್ತಪಡಿಸಿವೆ ಎಂದು ಎಐಎಫ್‌ಬಿ ಕಾರ್ಯದರ್ಶಿ ಜಿ.ಆರ್. ಶಿವಶಂಕರ್ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬಂಡವಾಳ ಶಾಹಿಗಳ ಹಿತಕ್ಕಾಗಿ ಕಾರ್ಮಿಕ ವಿರೋಧಿ ಕಾನೂನುಗಳನ್ನು ಜಾರಿ ಮಾಡುತ್ತಿರುವುದನ್ನು ವಿರೋಧಿಸಿ ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಕಾರ್ಮಿಕರ ಕೆಲಸದ ಅವಧಿ ಹೆಚ್ಚಳಕ್ಕೆ ನಮ್ಮಗೆ ವಿರೋಧವಿದೆ. ಮಹಿಳೆ ಯರನ್ನು ಅಪಾಯಕಾರಿ.. ಕೆಲಸಗಳಲ್ಲಿ ಮತ್ತು ರಾತ್ರಿ ಪಾಳಿಯಲ್ಲಿ ದುಡಿತಕ್ಕೆ ? ತೊಡಗಿಸುವುದು ಸರಿಯಲ್ಲ. ಎಂದು ಟೀಕಿಸಿದರು. ಅಖಿಲ ಭಾರತ ಮಟ್ಟದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ, ರಾಜ್ಯ ಮಟ್ಟದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ವೇದಿಕೆಗಳೂ ಮುಷ್ಕರಕ್ಕೆ ಬೆಂಬಲ ವ್ಯಕ್ತಪ ಡಿಸಿವೆ. ಕಾರ್ಮಿಕ, ರೈತ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯುವವ ರೆಗೂ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



