ಹುಬ್ಬಳ್ಳಿ: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ಅವರು ಕುರ್ಚಿ ಕಿತ್ತಾಟದಲ್ಲಿ ತೊಡಗಿದ್ದು, ರಾಜ್ಯದ ಜನರ ಹಿತಾಸಕ್ತಿ ಮತ್ತು ರಾಜ್ಯದ ಅಭಿವೃದ್ಧಿಯನ್ನು ಮರೆತಿದ್ದಾರೆ. ಈ ಸರ್ಕಾರವನ್ನು ಅಧಿಕಾರಕ್ಕೆ ತಂದಿದ್ದಕ್ಕಾಗಿ ಜನ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಟೀಕಿಸಿದ್ದಾರೆ. ನಗರದಲ್ಲಿ ಮಂಗಳಮರೆ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಹೃದಯಾ ಘಾತದ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಎಲ್ಲಾ ಇಲಾಖೆಯಲ್ಲಿ ಅವ್ಯವಸ್ಥೆ ಇದೆ. ಆದರೂ, ಸರ್ಕಾರ ಕ ) ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸಿಎಂ, ಡಿಸಿಎಂ ಅವರು ಕುರ್ಚಿ ಕಿತ್ತಾಟದಲ್ಲಿ ತೊಡಗಿದ್ದಾರೆ. ಜನರು ಮತ್ತು ರಾಜ್ಯವನ್ನು ಮರೆತಿದ್ದಾರೆ ಎಂದು ಆರೋಪಿಸಿದರು. ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಟೀಕಿಸಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



