ಟಾಲಿವುಡ್ ನಟಿ ಸಮಂತಾ ಮತ್ತು ನಿರ್ದೇಶಕ ರಾಜ್ ನಿಧಿಮೋರು ನಡುವಿನ ಪ್ರೇಮ ಸಂಬಂಧವು ಇತ್ತೀಚೆಗೆ ವೈರಲ್ ಆಗಿರುವ ಫೋಟೋಗಳಿಂದ ಖಚಿತವಾದಂತೆ ಕಾಣುತ್ತಿದೆ. ಅಮೆರಿಕದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದು, ಹತ್ತಿರದಿಂದ ಫೋಟೋಗಳನ್ನು ತೆಗೆಸಿಕೊಂಡಿದ್ದಾರೆ. ಇದು ಅವರ ಸಂಬಂಧವನ್ನು ಸ್ಪಷ್ಟಪಡಿಸಿದೆ. ಆದರೂ ಅಧಿಕೃತ ಘೋಷಣೆ ಇನ್ನೂ ಬಾಕಿ ಇದೆ.
ಸಮಂತಾ ಹಾಗೂ ನಿರ್ದೇಶಕ ರಾಜ್ ನಿಧಿಮೋರು ಮಧ್ಯೆ ಪ್ರೀತಿ ಮೂಡಿದೆ ಎಂಬ ವಿಚಾರ ಈ ಮೊದಲಿನಿಂದಲೂ ಹರಿದಾಡುತ್ತಿದೆ. ಆದರೆ, ಇದನ್ನು ಅವರು ಇಷ್ಟು ದಿನ ಖಚಿತಪಡಿಸಿರಲಿಲ್ಲ. ಆದರೆ, ಈಗ ಇವರು ಇದನ್ನು ಬಹುತೇಕ ಒಪ್ಪಿಕೊಂಡಿದ್ದಾರೆ. ಸಮಂತಾ ಹೆಗಲಮೇಲೆ ಕೈ ಹಾಕಿ ರಾಜ್ ಬರುತ್ತಿದ್ದರೆ, ಅವರನ್ನು ಸಮಂತಾ ತಮ್ಮ ಕೈ ಮೂಲಕ ಹಿಡಿದುಕೊಂಡಿದ್ದಾರೆ. ಈ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ.ಅಮೆರಿಕದ ಮಿಚಿಗನ್ನ ಡೆಟ್ರಾಯ್ಟ್ನಲ್ಲಿರುವ ತೆಲುಗು ಸಂಘಟನೆ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಸಮಂತಾ, ರಾಜ್ ಹಾಗೂ ಇತರರು ತೆರಳಿದ್ದಾರೆ.
ಈ ವೇಳೆ ಖುಷಿಯಿಂದ ಸಮಯ ಕಳೆದಿದ್ದಾರೆ. ಈ ಫೋಟೋಗಳನ್ನು ಸಮಂತಾ ಅವರು ಹಂಚಿಕೊಂಡಿದ್ದಾರೆ. ಹಲವು ಕಡೆಗಳಲ್ಲಿ ನೀವು ರಾಜ್ ನಿಧಿಮೋರು ಅವರನ್ನು ಕಾಣಬಹುದು. ಇದರಿಂದ ಇವರ ಸಂಬಂಧ ಬಹುತೇಕ ಖಚಿತವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



