Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ನಿತ್ಯ ಭವಿಷ್ಯ – 04/04/2026 (ಶನಿವಾರ)

ನಿಧನ ವಾರ್ತೆ ಐ.ಎಂ.ಚಂದ್ರಶೇಖರಯ್ಯ

ಏಕನಾಥೇಶ್ವರಿ, ಬರಗೇರಮ್ಮ ದೇವಿ ವೈಭವದ ಮೆರವಣಿಗೆ

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ಮುರುಘಾ ಮಠದಲ್ಲಿ ಅಕ್ಕಮಹಾದೇವಿ ಶರಣೋತ್ಸವ; ಸ್ತ್ರೀಕುಲದ ಅಸ್ಮಿತೆ ಅಕ್ಕ
ಚಿತ್ರದುರ್ಗ

ಮುರುಘಾ ಮಠದಲ್ಲಿ ಅಕ್ಕಮಹಾದೇವಿ ಶರಣೋತ್ಸವ; ಸ್ತ್ರೀಕುಲದ ಅಸ್ಮಿತೆ ಅಕ್ಕ

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 3, 2026Updated:April 3, 2026No Comments2 Mins Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ಮುರುಘಾ ಮಠದಲ್ಲಿ ಅಕ್ಕಮಹಾದೇವಿ ಶರಣೋತ್ಸವ; ಸ್ತ್ರೀಕುಲದ ಅಸ್ಮಿತೆ ಅಕ್ಕ

 

ಚಿತ್ರದುರ್ಗ: ಅಕ್ಕ ವಚನಕಾರರ ಉಜ್ವಲ ನಕ್ಷತ್ರ. ಶ್ರೇಷ್ಠ ಅನುಭಾವಿ, ಕನ್ನಡದ ಮೊಟ್ಟಮೊದಲ ಕವಯತ್ರಿ ಅಷ್ಟೇ ಅಲ್ಲದೇ ಸ್ತ್ರೀ ಕುಲಕ್ಕೆ ಗೌರವ ತಂದುಕೊಡುವ ಕೆಲಸ ಆಕೆಯಿಂದ ನಡೆಯಿತು. ಹೆಣ್ಣಿಗೆ ಆ ಕಾಲದಲ್ಲಿ ಯಾವ ಸ್ಥಾನಮಾನ ಇತ್ತು ಎನ್ನುವುದನ್ನು ಊಹಿಸಿಕೊಂಡರೆ ಮೈ ರೋಮಾಂಚನವಾಗುತ್ತದೆ. ಅಂತಹ ಕಠಿಣ ವ್ಯವಸ್ಥೆಯಲ್ಲಿ ಸ್ತ್ರೀಕುಲದ ಅಸ್ಮಿತೆಯನ್ನು ಉಳಿಸಲು ಆದರ್ಶಕ್ಕಾಗಿ ಒಂದು ವ್ಯವಸ್ಥೆಯನ್ನೇ ಧಿಕ್ಕರಿಸಿ ಬಂದಿದ್ದು ಇತಿಹಾಸ ಎಂದು ಸಹಾಯಕ ಪ್ರಾಧ್ಯಾಪಕಿ ಟಿ.ಗಾಯತ್ರಿ

ನಗರದ ಮುರುಘಾ ಮಠದಲ್ಲಿ ಆಯೋಜಿಸಿದ್ದ ಅಕ್ಕಮಹಾದೇವಿ ಶರಣೋತ್ಸವದಲ್ಲಿ ಮಾತನಾಡಿದರು.

 

12ನೇ ಶತಮಾನದಲ್ಲೇ ಬಸವಾದಿ ಶರಣರು ವಚನ ಸಾಹಿತ್ಯದ ಮೂಲಕ ವಿಶ್ವಕ್ಕೆ ಬಹುದೊಡ್ಡ ಕೊಡುಗೆ ನೀಡಿದರು. ಸಾಮಾಜಿಕ, ಆರ್ಥಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಪ್ರಗತಿ ಸಾಧಿಸುವಲ್ಲಿ ಯಶಸ್ಸು ಕಂಡರು ಎಂದರು.

 

ಬಸವಣ್ಣನವರ ನೇತೃತ್ವದಲ್ಲಿ ಅಂದಿನ ಹಿರಿಕಿರಿಯ ಶರಣರೆಲ್ಲ ಸೇರಿಕೊಂಡು ಉಜ್ವಲ ಪರಂಪರೆಗೆ ನಾಂದಿ ಹಾಡಿದರು. ಅದರ ಬಳುವಳಿಯೇ ಅಕ್ಕಮಹಾದೇವಿ’ ಎಂದು ತಿಳಿಸಿದರು.

 

ಸಾಮಾಜಿಕ ಮತ್ತು ರಾಜಪ್ರಭುತ್ವ ಎರಡನ್ನೂ ವಿರೋಧಿಸಿದ ಅಕ್ಕನ ಇಡೀ ಬದುಕೇ ಹೋರಾಟದ ಹಾದಿಯಾಗಿತ್ತು. ಈ ಹೋರಾಟ ಕೇವಲ ತನಗಾಗಿ ಅಲ್ಲ. ಇಡೀ ಹೆಣ್ಣುಸಂಕುಲಕ್ಕಾಗಿಯೇ ಆಕೆಯ ಹೋರಾಟ ಮೀಸಲಿತ್ತು ಎಂದರೆ ತಪ್ಪಿಲ್ಲ ಎಂದರು.

 

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮಹಿಳೆಗೆ ಇನ್ನು ಅನೇಕ ಕ್ಷೇತ್ರಗಳಲ್ಲಿ ಸಮಾನ ಅವಕಾಶಗಳು ದೊರೆಯುತ್ತಿಲ್ಲ. 900ವರ್ಷಗಳ ಇತಿಹಾಸ ಅವಲೋಕಿಸಿದಾಗ ಪುರುಷ ಪ್ರಾಬಲ್ಯದ ಕಾಲದಲ್ಲಿನ ಹೆಣ್ಣಿನ ಸ್ಥಿತಿ ಊಹಿಸಿಕೊಳ್ಳಲು ಅಸಾಧ್ಯ. ಆದರೆ 12ನೇ ಶತಮಾನದಲ್ಲಿ ಅಕ್ಕಮಹಾದೇವಿ ವಿವಾಹವಾದರೂ ಸಹ ಲೌಕಿಕ ಪ್ರಪಂಚದ ಗೊಡವೆ ಬೇಡ ಎಂದು ಧಿಕ್ಕರಿಸಿ ಪತಿ ಚನ್ನಮಲ್ಲಿಕಾರ್ಜುನ ಎನ್ನುವ ಪಾರಮಾರ್ಥಿಕ ಗಂಡನನ್ನು ಹುಡುಕುತ್ತ ಕಲ್ಯಾಣ ಪ್ರವೇಶಿಸಿದರು ಎಂದು ತಿಳಿಸಿದರು.

 

 

ಅನುಭವ ಮಂಟಪದ ಕಣ್ಮಣಿಯಾಗಿ ಶರಣರೊಂದಿಗೆ ನೆಲೆ ನಿಂತು ವಾದ ಪ್ರತಿವಾದಗಳ ಮೂಲಕ ಅನೇಕ ವಚನಗಳನ್ನು ರಚಿಸುತ್ತಾಳೆ. ಅವಿರಳಜ್ಞಾನಿ ಎಂಬ ಬಿರುದಿಗೆ ಭಾಜನರಾದ ಚನ್ನಬಸವಣ್ಣನವರೇ ಅಕ್ಕನ ವಚನಗಳನ್ನು ಮೆಚ್ಚಿದ ಉದಾಹರಣೆ ಇದೆ ಎಂದರು.

 

ಎಸ್‌ಜೆಎಂ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿ, ಅಕ್ಕಮಹಾದೇವಿ ಪ್ರಕೃತಿ ಧರ್ಮಪಾಲಕಿ. ಇಡೀ ಜಗತ್ತು ಅಕ್ಕನ ವ್ಯಕ್ತಿತ್ವಕ್ಕೆ ಗೌರವ ಕೊಡಬೇಕಿದೆ. ಅನುಭವ ಮಂಟಪದಲ್ಲಿ ಎದುರಾದ ಪ್ರಶ್ನೆಗಳಿಗೆ ಧೀರೋದಾತ್ತ ಉತ್ತರ ನೀಡುತ್ತ ಸಾಗಿದ ಪರಿ ಊಹೆಗೆ ನಿಲುಕದ್ದು. ಅಕ್ಕನ ಶ್ರೇಷ್ಠ ವ್ಯಕ್ತಿತ್ವ ಮತ್ತೆ ಮತ್ತೆ ಇಂತಹ ಕಾರ್ಯಕ್ರಮಗಳ ಮೂಲಕ ಅನಾವರಣಗೊಳ್ಳಬೇಕಿದೆ. ಆಕೆಯ ಬಗ್ಗೆ ಹೇಳುತ್ತ ಹೋದರೆ ನಾಲಗೆ ಸೋಲುತ್ತದೆ. ಅಂತಹ ಆಧ್ಯಾತ್ಮಲೋಕದ ಮುಕುಟಮಣಿ’ ಎಂದು ಸ್ಮರಿಸಿದರು.

ರಾವಂದೂರು ಮೋಕ್ಷಪತಿ ಸ್ವಾಮೀಜಿ, ಕಲ್ಕೆರೆಯ ಪೂರ್ಣಾನಂದರು, ಬಸವ ಮುರುಘೇಂದ್ರ ಸ್ವಾಮೀಜಿ, ಬಾಲ್ಯವಿವಾಹ ವಿರೋಧಿ ಸಮಿತಿ ಅಧ್ಯಕ್ಷೆ ಕವಿತಾ ಹನುಮಂತರೆಡ್ಡಿ ಇದ್ದರು.

 

ನಿತ್ಯ ಭವಿಷ್ಯ – 03/04/2026

chitradurga karanataka ಅಕ್ಕಮಹಾದೇವಿ ಕರ್ನಾಟಕ ಚಿತ್ರದುರ್ಗ ಮಠ ಮುರುಘಾ
Follow on Facebook Follow on Instagram
Share. Facebook Twitter WhatsApp Telegram
Previous Article*ಡಾ.ಬಿ.ಆರ್.ಅಂಬೇಡ್ಕರ್ ಬದುಕು ಮತ್ತು ಬರಹ ಕುರಿತು ರಾಜ್ಯ ಮಟ್ಟದ ಮುಕ್ತ ರಸಪ್ರಶ್ನೆ ಸ್ಪರ್ಧೆ*
Next Article ಪೂರ್ಣಗೊಂಡ ಮೌಲ್ಯಮಾಪನ ಕಾರ್ಯ; ಫಲಿತಾಂಶಕ್ಕೆ ದಿನಗಣನೆ ಶುರು
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ನಿತ್ಯ ಭವಿಷ್ಯ – 04/04/2026 (ಶನಿವಾರ)

April 3, 2026

ನಿಧನ ವಾರ್ತೆ ಐ.ಎಂ.ಚಂದ್ರಶೇಖರಯ್ಯ

April 3, 2026

ಏಕನಾಥೇಶ್ವರಿ, ಬರಗೇರಮ್ಮ ದೇವಿ ವೈಭವದ ಮೆರವಣಿಗೆ

April 3, 2026
Add A Comment
Leave A Reply Cancel Reply

Advertisement
Latest Posts

ನಿತ್ಯ ಭವಿಷ್ಯ – 04/04/2026 (ಶನಿವಾರ)

ನಿಧನ ವಾರ್ತೆ ಐ.ಎಂ.ಚಂದ್ರಶೇಖರಯ್ಯ

ಏಕನಾಥೇಶ್ವರಿ, ಬರಗೇರಮ್ಮ ದೇವಿ ವೈಭವದ ಮೆರವಣಿಗೆ

ಶಿವಲಿಂಗಪ್ಪ ಕೊಲೆ ಪ್ರಕರಣ; ಹಂತಕರ ಬಂಧನಕ್ಕೆ ಆಗ್ರಹ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.