ಬೆಂಗಳೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರೇ ನೀವು ನನ್ನ ತಂದೆ ಬಗ್ಗೆ ಟೀಕೆಮಾಡಿದ್ದೀರಿ. ಆದರೆ, ಅವರ ಹೆಸರು ಹೇಳಲು ನನಗೆ ಹೆಮ್ಮೆ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ವೇಳೆ ಪ್ರತಾಪ್ ಸಿಂಹ ತಮ್ಮ ವಿರುದ್ಧ ನೀಡಿರುವ ಹೇಳಿಕೆಗಳ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕೆಲ ಪ್ರಾಡಕ್ ಗಳಿಗೆ ಮಾರುಕಟ್ಟೆಯಲ್ಲಿ ಬೆಲೆ ಕಡಿಮೆಯಾದಾಗ ಪ್ರಚಾರಕ್ಕೆ ಹೀರೋಗಳನ್ನು ಬ್ರಾಂಡ್ ಅಂಬಾಸಿಡರ್ ಮಾಡಿ ಜಾಹೀರಾತು ನೀಡುತ್ತಾರೆ. ಹಾಗೆ ಬಿಜೆಪಿಯ ಕೆಲ ಕಳಪೆ ಪ್ರಾಡಕ್ಟ್‌ಗಳಿಗೆ ಪ್ರಚಾರಕ್ಕಾಗಿ ನಾನು ಅಂಬಾಸಿಡರ್ ಆಗಿದ್ದೇನೆ. ಪ್ರತಾಪ್ ಸಿಂಹ, ಛಲವಾದಿ, ಅಶೋಕ್, ಮಾಜಿ ಶಾಸಕ ರಾಜೀವ್, ಇತರರ ಪ್ರಚಾರಕ್ಕಾಗಿ ನಾನು ಬೇಕಾಗಿದೆ ಎಂದು ವ್ಯಂಗ್ಯವಾಡಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



