ಉಪನ್ಯಾಸಕರು ತಮ್ಮ ಕಾಲೇಜಿನ ವಿದ್ಯಾರ್ಥಿಗಳನ್ನು ಸ್ವಂತ ಮಕ್ಕಳಂತೆ ಪರಿಭಾವಿಸಿ ಬೋಧನೆ ಮಾಡಿದಾಗ ಮಾತ್ರ ನಿರೀಕ್ಷಿತ ಫಲಿತಾಂಶ ಪಡೆಯಲು ಸಾಧ್ಯವಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ತಿಮ್ಮಯ್ಯ ತಿಳಿಸಿದರು.ಹೊಳಲ್ಕೆರೆ ನಗರದ ವಾಗ್ದೇವಿ ಕಾಲೇಜಿನಲ್ಲಿ ಆಯೋಜಿಸಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣಾ ಚಿಂತನ ಮಂಥನ ಸಮಾಲೋಚನಾ ಸಭೆಯನ್ನು ಉದ್ಘಾಟಿಸಿ ಮಾತಾನಾಡಿ,ಉಪನ್ಯಾಸಕರು ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರ್ತಿಸಿ ಅವರಿಗೆ ವಿಶೇಷ ಪರಿಹಾರ ಬೋಧನೆ ಮಾಡುವ ಮೂಲಕ ಕಲಿಕಾಸಕ್ತಿ ಮೂಡಿಸಬೇಕು.
ತರಗತಿಯಲ್ಲಿರುವ ಒಟ್ಟು ವಿದ್ಯಾರ್ಥಿಗಳನ್ನು ಆರು ಗುಂಪುಗಳನ್ನಾಗಿ ವಿಂಗಡಿಸಿ ಪ್ರತಿ ಗುಂಪಿನ ಮೇಲುಸ್ತುವಾರಿಯನ್ನು ಒಬ್ಬ ಉಪನ್ಯಾಸಕನಿಗೆ ನೀಡುವ ಮೂಲಕ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳ ಮೇಲೆ ಗಮನ ಹರಿಸುವಂತೆ ಸೂಚನೆ ನೀಡಿದರು.
ಚಿತ್ರದುರ್ಗ ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಬಿ.ಆರ್.ಮಲ್ಲೇಶ್ ಮಾತನಾಡಿಫಲಿತಾಂಶ ಸುಧಾರಣೆಗಾಗಿ ಇಲಾಖಾ ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರುವಲ್ಲಿ ಈ ರೀತಿಯ ತಾಲ್ಲೂಕುವಾರು ಸಭೆಗಳು ಪ್ರಮುಖ ಪಾತ್ರ ವಹಿಸುತ್ತವೆ. ಕಾರ್ಯಭಾರ ಕಡಿಮೆ ಇರುವ ಉಪನ್ಯಾಸಕರನ್ನು ಖಾಲಿ ಹುದ್ದೆ ಇರುವ ಕಾಲೇಜಿಗಳಿಗೆ ನಿಯೋಜಿಸಿ ವಿದ್ಯಾರ್ಥಿಗಳ ಪಾಠ ಪ್ರವಚನಕ್ಕೆ ಯಾವುದೇ ತೊಂದರೆಯಾಗದಂತೆ ಶೈಕ್ಷಣಿಕ ವರ್ಷದ ಆರಂಭದಲ್ಲಿ ಮಾನ್ಯ ಉಪನಿರ್ದೆಶಕರು ನಿಗವಹಿಸಿರುವುದು ಉತ್ತಮ ಬೆಳವಣಿಗೆಯಾಗಿದೆ.ಪ್ರತಿ ಉಪನ್ಯಾಸಕರು ತಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ತರಗತಿಗಳಲ್ಲಿ ಪರಿಣಾಮಕಾರಿಯಾಗಿ ಬೋಧನೆ ಮಾಡುವ ಮೂಲಕ ಈ ವರ್ಷದ ಫಲಿತಾಂಶ ವೃದ್ದಿಗಾಗಿ ಶ್ರಮಿಸೋಣ ಎಂದು ಕರೆ ನೀಡಿದರು.ಸಭೆಯಲ್ಲಿ ಪ್ರಾಂಶುಪಾಲರಾದ ಅಶೋಕ, ವಾಗ್ದೇವಿ ವಿದ್ಯಾಸಂಸ್ಥೆ ಕಾರ್ಯದರ್ಶಿ ಸಿದ್ದಲಿಂಗಸ್ವಾಮಿ, ಸರ್ಕಾರಿ ನೌಕರ ಸಂಘದ ನಿರ್ದೇಶಕ ಆರ್.ಚಂದ್ರಶೇಖರ್, ಎಸ್.ದೇವೇಂದ್ರಪ್ಪ,ರಂಗಸ್ವಾಮಿ,ಅಬ್ದುಲ್ ಖದ್ದೂಸ್ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



