ಚಿತ್ರದುರ್ಗ: ರಾಷ್ಟ್ರೀಯ ಯೋಗ ಶಿಕ್ಷಣ, ಕ್ರೀಡಾ ಮತ್ತು ಸಾಂಸ್ಕೃತಿಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇದೆ ತಿಂಗಳ 12ರಂದು ಬೆಳಿಗ್ಗೆ 6 ಗಂಟೆಗೆ ನಗರದ ಮುರುಘಾಮಠದ ಅನುಭವ ಮಂಟಪದಲ್ಲಿ ಗುರುಪೂರ್ಣಿಮ ಕಾರ್ಯಕ್ರಮ
ಆಯೋಜಿಸಲಾಗಿದೆ ಎಂದು ಸಂಸ್ಥೆ ಉಪಾಧ್ಯಕ್ಷ ಮಂಜುನಾಥ್ ಮತ್ತು ಕಾರ್ಯದರ್ಶಿ ಎಲ್.ಎಸ್ ಬಸವರಾಜ್ ಮಾಹಿತಿ ನೀಡಿದ್ದಾರೆ.ಮುರುಘಾಮಠದ ಶ್ರೀ ಬಸವಕುಮಾರ ಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯವನ್ನು ವಹಿಸಲಿದ್ದು,
ಆಯುಷ್ ಇಲಾಖೆ ಹಿರಿಯ ವೈದ್ಯಾಧಿಕಾರಿ ಡಾ. ಶಿವಕುಮಾರ್ ಉದ್ಘಾಟನೆ ಮಾಡಲಿದ್ದಾರೆ. ಇನ್ನು ರಾಷ್ಟ್ರೀಯ
ಯೋಗ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಿ.ಆರ್. ಪ್ರಸನ್ನ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಯೋಗ ಗುರುಗಳಾದಎಲ್.ಎಸ್. ಚಿನ್ಮಯನಂದ, ಹಿರಿಯ ವೈದ್ಯಾಧಿಕಾರಿ ಡಾ. ಚಂದ್ರಕಾಂತ ನಾಗಸಮುದ್ರ ಆಯುಷ್ ಇಲಾಖೆ ಡಾ.ದೇವರಾಜ್ ಭಾಗವಹಿಸಲಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



