ಬಳ್ಳಾರಿ: ರಾಜಕೀಯ ಮುತ್ಸದ್ದಿ, ಪರಿಷತ್ತಿನ ಮಾಜಿ ಸಭಾಪತಿ, ಅಖಿಲ ಭಾರತ -ವೀರಶೈವ ಮಹಾಸಭಾದ ಮಾಜಿ ರಾಜ್ಯಾಧ್ಯಕ್ಷ, ಹಿರಿಯ ವಕೀಲರಾಗಿದ್ದ ಎನ್ .ತಿಪ್ಪಣ್ಣ (97) ವಯೋಸಹಜ ಕಾಯಿಲೆಯಿಂದ ಬಳ್ಳಾರಿಯಲ್ಲಿಶುಕ್ರವಾರ ನಿಧನರಾದರು. ಮೃತರಿಗೆ ಓರ್ವ ಪುತ್ರ ಇದ್ದಾರೆ. ಹುಟ್ಟೂರು ಚಿತ್ರದುರ್ಗದ ತುರವ ನೂರು ಗ್ರಾಮದಲ್ಲಿ ಶನಿವಾರ ಅಂತ್ಯಸಂಸ್ಕಾರ ನೆರವೇರಲಿದೆ. ವಕೀಲ ವೃತ್ತಿಗೆ ಮುಡುಪಾಗಿಟ್ಟಿದ್ದರು. ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಅವರೊಂದಿಗೆ ಗುರುತಿಸಿಕೊಂಡಿ ದ್ದರು. ಜನತಾದಳದ ರಾಜ್ಯಾಧ್ಯಕ್ಷರಾಗಿ, 4 ಬಾರಿ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದು, ಒಂದು ಬಾರಿ ವಿಧಾನಪರಿಷತ್ ಸಭಾಪತಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಸಂಯುಕ್ತ ಜನತಾದಳ, ಜೆಡಿಎಸ್, ಅನಂತರದಲ್ಲಿ ಬಿಜೆಪಿಗೆ ಸೇರಿಕೊಂಡಿದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



