Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ನಿತ್ಯ ಭವಿಷ್ಯ – 10/04/2026 (ಶುಕ್ರವಾರ)

ಪಿಯು ಫಲಿತಾಂಶ ; ಇತಿಹಾಸ ಸೃಷ್ಟಿಸಿದ ವಿದ್ಯಾರ್ಥಿನಿಯರು

ದ್ವಿತೀಯ ಪಿಯುಸಿ ದಾಖಲೆ ಫಲಿತಾಂಶ; ಶೇ. 86 ವಿದ್ಯಾರ್ಥಿಗಳು ಪಾಸ್ 

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ಜಿಲ್ಲಾ ಸುದ್ದಿ»ಚಿತ್ರದುರ್ಗ»ರಣಬಿಸಿಲಿನಲ್ಲಿ 3 ಗಂಟೆ ಬಂದೂಕು ಹಿಡಿದು ನಿಂತ ಖಾಕಿ !
ಚಿತ್ರದುರ್ಗ

ರಣಬಿಸಿಲಿನಲ್ಲಿ 3 ಗಂಟೆ ಬಂದೂಕು ಹಿಡಿದು ನಿಂತ ಖಾಕಿ !

ಮೃತ್ಯುಂಜಯಾಚಾರ್ ಬಿBy ಮೃತ್ಯುಂಜಯಾಚಾರ್ ಬಿApril 8, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
Share
WhatsApp Twitter Facebook Telegram

ರಣಬಿಸಿಲಿನಲ್ಲಿ 3 ಗಂಟೆ ಬಂದೂಕು ಹಿಡಿದು ನಿಂತ ಖಾಕಿ !

ಚಿತ್ರದುರ್ಗ: ಶಿಸ್ತಿನ ಪ್ರತೀಕವೆಂದು ಕರೆಯಲ್ಪಡುವ ಪೊಲೀಸ್ ಇಲಾಖೆಯಲ್ಲೇ ಬೆಚ್ಚಿಬೀಳಿಸುವಂತಹ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರು ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ನೇತ್ರಾವತಿ ವಿರುದ್ಧ ಗಂಭೀರ ಆರೋಪ ಕೇಳಿಬಂದಿದ್ದು, 12 ಮಂದಿ ಪೊಲೀಸ್ ಕಾನ್ಸ್‌ಟೇಬಲ್‌ಗಳನ್ನು ರಣಬಿಸಿಲಿನಲ್ಲಿ ಸತತ ಮೂರು ಗಂಟೆಗಳ ಕಾಲ ಬಂದೂಕು ಹಿಡಿಸಿ ನಿಲ್ಲಿಸಿ ಶಿಕ್ಷೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಮೂರು ದಿನಗಳ ಹಿಂದೆ ನಡೆದಿದ್ದ ಈ ಘಟನೆ ತಡವಾಗಿ ಬಹಿರಂಗವಾಗಿದ್ದು, ಪ್ರಕರಣ ಈಗ ಪೊಲೀಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಶಿಕ್ಷೆಗೆ ಒಳಗಾದ ಸಿಬ್ಬಂದಿಯಲ್ಲಿ ಮೂವರು ಪೊಲೀಸರ ಆರೋಗ್ಯ ಹದಗೆಟ್ಟಿದ್ದು, ಹೊಳಲ್ಕೆರೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ ಎನ್ನಲಾಗಿದೆ.

ಯುಗಾದಿ ಹಬ್ಬದ ಸಂದರ್ಭದಲ್ಲಿ ನಡೆದ ಇಸ್ಪೀಟ್ ದಾಳಿಯಲ್ಲಿ ಲಕ್ಷಾಂತರ ರೂಪಾಯಿ ಹಣ ಸಿಕ್ಕಿತ್ತು ಎಂಬ ವಿಷಯ ಪೊಲೀಸ್ ಸಿಬ್ಬಂದಿ ನಡುವೆ ಗುಸು ಗುಸು ಚರ್ಚೆಗೆ ಕಾರಣವಾಗಿತ್ತು. ಇದೇ ವಿಚಾರದ ಹಿನ್ನೆಲೆ ಪಿಎಸ್‌ಐ ಅವರು ದ್ವೇಷದಿಂದ ಸಿಬ್ಬಂದಿಗೆ ಈ ರೀತಿಯ ಕಠಿಣ ಶಿಕ್ಷೆ ನೀಡಿದರಾ ಎಂಬ ಪ್ರಶ್ನೆಗಳು ಮೂಡಿವೆ.

ಘಟನೆಯ ಸಂಪೂರ್ಣ ದೃಶ್ಯ ಠಾಣೆಯ ಸಿಸಿಟಿವಿಯಲ್ಲಿ ಸೆರೆಯಾಗಿರುವ ಮಾಹಿತಿ ಲಭ್ಯವಾಗಿದ್ದು, ಪಿನ್ ಟು ಪಿನ್ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಚಿತ್ರದುರ್ಗ ಎಸ್‌ಪಿ ರಂಜಿತ್ ಕುಮಾರ್ ಬಂಡಾರು ಅವರು ಡಿವೈಎಸ್‌ಪಿ ಅರುಣ್ ಗೌಡ ಅವರಿಗೆ ಸೂಚನೆ ನೀಡಿದ್ದಾರೆ.

ಪೊಲೀಸ್ ಇಲಾಖೆಯೊಳಗಿನ ಈ ಅಮಾನವೀಯ ವರ್ತನೆ ಸಾರ್ವಜನಿಕರಲ್ಲಿ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದ್ದು, ತನಿಖಾ ವರದಿ ಬಳಿಕ ಸತ್ಯಾಸತ್ಯತೆ ಹೊರಬೀಳುವ ನಿರೀಕ್ಷೆಯಿದೆ.

chitradurga Police Summer ಖಾಕಿ ಚಿತ್ರದುರ್ಗ ಪೊಲೀಸ್ ರಣಬಿಸಿಲಿ
Follow on Facebook Follow on Instagram
Share. Facebook Twitter WhatsApp Telegram
Previous Articleನಿತ್ಯ ಭವಿಷ್ಯ – 08/04/2026 (ಬುಧವಾರ)
Next Article ಮೆಡಿಕಲ್ ಕಾಲೇಜು ಊಹಾಪೋಹಕ್ಕೆ ಬಿತ್ತು ತೆರೆ; ಯಾವುದೇ ಗೊಂದಲ, ಬದಲಾವಣೆಯಿಲ್ಲ
ಮೃತ್ಯುಂಜಯಾಚಾರ್ ಬಿ
  • Website

ಮೃತ್ಯುಂಜಯಾಚಾರ್ ಬಿ ಉಪ ಸಂಪಾದಕರು, ಟೈಮ್ಸ್ ಆಫ್ ಬಯಲುಸೀಮೆ ಮೃತ್ಯುಂಜಯಾಚಾರ್ ಬಿ ಅವರು 'ಟೈಮ್ಸ್ ಆಫ್ ಬಯಲುಸೀಮೆ' (timesofbayaluseeme.com) ಕನ್ನಡ ಸುದ್ದಿ ಪೋರ್ಟಲ್‌ನಲ್ಲಿ ಉಪ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಆಳವಾದ ಆಸಕ್ತಿ ಹೊಂದಿರುವ ಇವರು, ನಿಖರವಾದ ಸುದ್ದಿ ವಿಶ್ಲೇಷಣೆ ಮತ್ತು ಜನಪರ ವರದಿಗಳನ್ನು ನೀಡುವಲ್ಲಿ ಸದಾ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರಚಲಿತ ವಿದ್ಯಮಾನಗಳು ಹಾಗೂ ಪ್ರಾದೇಶಿಕ ಸುದ್ದಿಗಳ ಬಗ್ಗೆ ಇವರು ವಿಶೇಷ ಗಮನಹರಿಸುತ್ತಾರೆ.

Related Posts

ನಿತ್ಯ ಭವಿಷ್ಯ – 10/04/2026 (ಶುಕ್ರವಾರ)

April 9, 2026

ಸಿಬ್ಬಂದಿಗೆ ಬಿಸಿಲ ಶಿಕ್ಷೆ ಪ್ರಕರಣ;  ಕಂಟ್ರೋಲ್ ರೂಂಗೆ ಪಿಎಸ್ಐ ನೇತ್ರಾವತಿ 

April 9, 2026

ಅಧ್ಯಾತ್ಮ ರಶ್ಮಿ – 2   ಶ್ವೇತವಸ್ತ್ರದ ಸಂತ ಬೆಳಗೆರೆಯ  ಕೃಷ್ಣಶಾಸ್ತ್ರಿಗಳು

April 9, 2026
Add A Comment
Leave A Reply Cancel Reply

Advertisement
Latest Posts

ನಿತ್ಯ ಭವಿಷ್ಯ – 10/04/2026 (ಶುಕ್ರವಾರ)

ಪಿಯು ಫಲಿತಾಂಶ ; ಇತಿಹಾಸ ಸೃಷ್ಟಿಸಿದ ವಿದ್ಯಾರ್ಥಿನಿಯರು

ದ್ವಿತೀಯ ಪಿಯುಸಿ ದಾಖಲೆ ಫಲಿತಾಂಶ; ಶೇ. 86 ವಿದ್ಯಾರ್ಥಿಗಳು ಪಾಸ್ 

ಆಭರಣ ಪ್ರಿಯರಿಗೆ ಸಿಹಿಸುದ್ದಿ!! ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ 

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.