ದ್ವಿತೀಯ ಪಿಯು ಫಲಿತಾಂಶ ಪ್ರಕಟಣೆಗೆ ಕೌಂಟ್ ಡೌನ್ ; ಹಲವು ವಿಶೇಷ
ಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ ಕ್ಷಣಕ್ಕೆ ಕೊನೆಗೂ ದಿನಾಂಕ ನಿಗದಿಯಾಗಿದೆ.
2026ನೇ ಸಾಲಿನ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಏ.9 ರ ಮಧ್ಯಾಹ್ನ 3 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಾಗುತ್ತದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಮಹತ್ವದ ಮಾಹಿತಿ ನೀಡಿದೆ.
ಈ ಬಾರಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಫಲಿತಾಂಶವನ್ನು ಹಲವು ಮಾರ್ಗಗಳ ಮೂಲಕ ಪಡೆಯುವ ವ್ಯವಸ್ಥೆ ಮಾಡಲಾಗಿದೆ.
ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ / ಹಾಲ್ ಟಿಕೆಟ್ ಸಂಖ್ಯೆ ಬಳಸಿ ಕೆಳಗಿನ ಮಾರ್ಗಗಳ ಮೂಲಕ ಫಲಿತಾಂಶ ವೀಕ್ಷಿಸಬಹುದು:
ಅಧಿಕೃತ ಜಾಲತಾಣ: karresults.nic.in
ಮೊಬೈಲ್ ಆಪ್: ಕರ್ನಾಟಕ ಒನ್ (Karnataka One)
SMS / WhatsApp: ನೊಂದಾಯಿತ ಮೊಬೈಲ್ ಸಂಖ್ಯೆಗೆ ನೇರ ಸಂದೇಶ
ಕಾಲೇಜುಗಳಲ್ಲಿ ಮಧ್ಯಾಹ್ನ 3 ಗಂಟೆಯಿಂದ ಫಲಿತಾಂಶ ಪಟ್ಟಿ ಲಭ್ಯವಾಗಲಿದೆ.
ಈ ವರ್ಷದ ವಿಶೇಷತೆ ಎಂದರೆ, ಇತಿಹಾಸದಲ್ಲೇ ಮೊದಲ ಬಾರಿಗೆ ವಿದ್ಯಾರ್ಥಿಗಳ ಅಂಕಪಟ್ಟಿ DigiLocker ಮೂಲಕವೂ ಲಭ್ಯವಾಗಲಿದೆ.
ಮಧ್ಯಾಹ್ನ 3 ಗಂಟೆಯಿಂದಲೇ ವಿದ್ಯಾರ್ಥಿಗಳು ತಮ್ಮ ಮಾರ್ಕ್ಸ್ ಕಾರ್ಡ್‌ನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಡಿಜಿಲಾಕರ್ ಜಾಲತಾಣ: www.digilocker.gov.in
ಯಾವುದೇ ಗೊಂದಲಕ್ಕೊಳಗಾಗದೆ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ ಮತ್ತು ಆಪ್‌ಗಳ ಮೂಲಕವೇ ಫಲಿತಾಂಶ ಪರಿಶೀಲಿಸುವಂತೆ ಮಂಡಳಿ ಅಧ್ಯಕ್ಷರು ಮನವಿ ಮಾಡಿದ್ದಾರೆ.
ಫಲಿತಾಂಶ ಪ್ರಕಟಣೆಯ ಸುದ್ದಿ ಹೊರಬಿದ್ದ ತಕ್ಷಣ ರಾಜ್ಯದಾದ್ಯಂತ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಉತ್ಸಾಹ ಹೆಚ್ಚಾಗಿದೆ. ನಾಳೆ ಮಧ್ಯಾಹ್ನ 3 ಗಂಟೆ ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ಮಹತ್ವದ ಕ್ಷಣವಾಗಲಿದೆ.
