ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಕೇವಲ ಮಾಧ್ಯಮದಲ್ಲಿ ಚರ್ಚೆ ಆಗುತ್ತಿದೆಯೇ ಹೊರತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಎಐಸಿಸಿ ವರಿಷ್ಠ ಸುರ್ಜೇವಾಲಾ ಈ ಬಗ್ಗೆ ಚರ್ಚೆ ಮಾಡುತ್ತಿಲ್ಲ, ಹೀಗಾಗಿ, ಸಿಎಂ ಬದಲಾವಣೆ ಚರ್ಚೆ ಅಪ್ರಸ್ತುತ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಮೊನ್ನೆ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಬದಲಾವಣೆ ಮಾಡುವವರು ಹಾಗೂ ಬದಲಾವಣೆ ಆಗುವವರು ಮಾಡುತ್ತಿಲ್ಲ. ಮಾಧ್ಯಮದಲ್ಲಿ ಮಾತ್ರ ಈ ಬಗ್ಗೆ ಚರ್ಚೆ ಆಗುತ್ತಿದೆ ಎಂದರು.ಸಿದ್ದು, ಡಿಕೆಶಿ ಭೇಟಿಗೆ ರಾಹುಲ್ ಗಾಂಧಿ ಅವಕಾಶ ನೀಡಿಲ್ಲ ಎಂಬುದಕ್ಕೆ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿಯವರು ಬಿಹಾರ ಚುನಾವಣೆ ಚರ್ಚೆಯಲ್ಲಿ ಭಾಗಿಯಾಗಿದ್ದರು. ಹೀಗಾಗಿ, ಭೇಟಿಯಾಗಿಲ್ಲ. ಬೇರೆ ಅರ್ಥ ಕಲ್ಪಿಸಬೇಡಿ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



