ಬೆಳಗಾವಿ: ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವಲ್ಲೇ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಹೊಸ ಬಾಂಬ್ ಸ್ಫೋಟಿಸಿದ್ದಾರೆ.ಪರೇಷನ್ ಕಮಲಕ್ಕೆ ಬಿಜೆಪಿ ಹೈಕಮಾಂಡ್ ಯತ್ನ ನಡೆಸುತ್ತಿದ್ದು, 55 ಕಾಂಗ್ರೆಸ್ ಶಾಸಕರ ಪಟ್ಟಿ ಇಟ್ಟುಕೊಂಡು, ದಾಳಿ ನಡೆಸುವ ಬೆದರಿಗೆ ಹಾಕುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿಯ ಈ ಪಟ್ಟಿಯಲ್ಲಿ ನಾನೂ ಕೂಡ ಇರುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
ಕಾಂಗ್ರೆಸ್‌ನಲ್ಲಿ ಡಿಕೆಶಿ ಮತ್ತು ಸಿದ್ದು ಬಣದಿಂದ ಕುದುರೆ ವ್ಯಾಪಾರ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ತಿರುಗೇಟು ಕಾಶಪ್ಪನವರ್ ಅವರು ತಿರುಗೇಟು ನೀಡಿದರು.
ಬಿಜೆಪಿ ಹೈಕಮಾಂಡ್ ಹತ್ತಿರ ಕಾಂಗ್ರೆಸ್‌ನ 55 ಶಾಸಕರ ಟಾರ್ಗೆಟ್ ಲಿಸ್ಟ್ ಇದೆ. ಅದರಲ್ಲಿ ನಾನು ಇದ್ದರೂ ಇರಬಹುದು. ಕಾಂಗ್ರೆಸ್‌ನ 55 ಮಂದಿ ಶಾಸಕರ ಪಟ್ಟಿಯನ್ನು ಬಿಜೆಪಿಗರು ಮಾಡಿದ್ದಾರೆ. ಆ 55 ಶಾಸಕರಿಗೆ ಸಿಬಿಐ, ಇ.ಡಿ.(ಜಾರಿ ನಿರ್ದೇಶನಾಲಯ) ದಾಳಿ ನಡೆಸುವ ಬೆದರಿಕೆ ಹಾಕುತ್ತಿದ್ದಾರೆ. ಈಗಾಗಲೇ ಬಿಜೆಪಿಯವರು ಆ ಶಾಸಕರ ಮನೆಗಳಿಗೆ ತಮ್ಮ ಏಜೆಂಟರನ್ನು ಕಳಿಸಿ, ಬೆದರಿಕೆ ಹಾಕಿದ್ದಾರೆ.ಬಜೆಪಿಗೆ ಬನ್ನಿ, ಬಾರದೆ ಹೋದರೆ ಸಿಬಿಐ, ಇಡಿ ದಾಳಿ ಮಾಡಿಸಿ, ನಿಮ್ಮ ಅಕ್ರಮ ಆಸ್ತಿ ಹೊರಗೆ ಎಳೆಸುತ್ತೇವೆ ಎನ್ನುತ್ತಿದ್ದಾರೆ. ಆ ಲಿಸ್ಟ್‌ನಲ್ಲಿ ನಾನು ಇದ್ದರೂ ಇರಬಹುದು. ಹೀಗಾಗಿ, ನಮ್ಮ ಶಾಸಕರಿಗೆ ಈ ಬಗ್ಗೆ ಭಯ ಇದೆ. ಆದರೆ, ಬಿಜೆಪಿಯವರ ಇಂತಹ ಬೆದರಿಕೆಗೆ ನಾನು ಹೆದರುವವನಲ್ಲ. ಅವರು ನನ್ನನ್ನು ಏನು ಮಾಡಲೂ ಸಾಧ್ಯವಿಲ್ಲ. ನನ್ನ ಮೇಲೆ ಇ.ಡಿ. ಸೇರಿ ಯಾವುದೇ ದಾಳಿ ಮಾಡಿದರೂ ನಾನು ಅದನ್ನು ಎದುರಿಸಲು ಸಜ್ಜಾಗಿದ್ದೇನೆ ಎಂದು ಹೇಳಿದರು.
ಮೊನ್ನೆಯಷ್ಟೇ, ನಮ್ಮ ಬಳ್ಳಾರಿ ಜಿಲ್ಲೆಯ ಶಾಸಕರಾದ ಭರತ್ ರೆಡ್ಡಿ, ತುಕಾರಾಮ್, ನಾಗೇಂದ್ರ ಅವರ ಮನೆಗಳ ಮೇಲೆ ದಾಳಿ ಮಾಡಿಸಿದರು. ಇವೆಲ್ಲ ಉದ್ದೇಶಪೂರ್ವಕ, ದ್ವೇಷದ, ಕುತಂತ್ರ ರಾಜಕಾರಣ. ಬಿಜೆಪಿಗೆ ನಿಜವಾಗಿಯೂ ಶಕ್ತಿ ಇದ್ದರೆ, 220 ಸ್ಥಾನಗಳನ್ನು ಗೆದ್ದು ಸ್ಪಷ್ಟ ಜನಾದೇಶದೊಂದಿಗೆ ಅಧಿಕಾರಕ್ಕೆ ಬರಲಿ ಎಂದು ಸವಾಲು ಹಾಕಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



