Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು: ಸಿಎಂ

ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ; ಆಳವಾದ ಕಂದಕದಲ್ಲಿ ಮೃತದೇಹ

ಗುಣಮಟ್ಟದ ಶಿಕ್ಷಣ ದೊಡ್ಡ ಕಟ್ಟಡಗಳಿಂದ ನಿರ್ಧಾರವಾಗಲ್ಲ; ಕೆ.ಜಿ.ಜಗದೀಶ್

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು: ಸಿಎಂ
ರಾಜ್ಯ

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು: ಸಿಎಂ

Times Of Bayaluseeme StaffBy Times Of Bayaluseeme StaffApril 11, 2026Updated:April 11, 2026No Comments2 Mins Read
Share WhatsApp Facebook Twitter Threads Telegram
Follow Us
Facebook Instagram
ಬೀದರ್‌ನಲ್ಲಿ ನಡೆದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣ ಮಾಡುತ್ತಿರುವುದು ಮತ್ತು ವೇದಿಕೆಯ ಮೇಲಿರುವ ಗಣ್ಯರು
Share
WhatsApp Twitter Facebook Telegram

ಬೀದರ್ ಏ11: ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ನೋಡಿಕೊಳ್ಳಬೇಕು.

ಅಂಬೇಡ್ಕರ್ ಮತ್ತು ಮಹಾತ್ಮಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.

ಬಸವಣ್ಣ ತಿರಸ್ಕರಿದ್ದ ಕರ್ಮಸಿದ್ಧಾಂತವನ್ನು ಪಾಲಿಸುವವರು ಈಗ ಹೆಚ್ಚಾಗಿದ್ದಾರೆ. ಈ ಮೌಡ್ಯ ಆಚರಿಸುವವರೆಲ್ಲಾ ವಿದ್ಯಾವಂತರೇ ಎನ್ನುವುದು ಬೇಸರದ ಸಂಗತಿ ಎಂದರು.

ಆದ್ದರಿಂದ ವೈಚಾರಿಕತೆ ಇರುವ ವೈಜ್ಞಾನಿಕ ಶಿಕ್ಷಣ ಪದ್ಧತಿ ಅಗತ್ಯ. ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು ಎಂದರು.

ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ‌ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದ್ದೇವೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕುಎಂದರು.

ಜಾತಿ ಸಮಾಜ ಚಲನೆ ಇಲ್ಲದ್ದು.‌ ಸಮಾಜವನ್ನು ಚಲನಶೀಲಗೊಳಿಸಲು ವಸ್ತುನಿಷ್ಠವಾದ ವೃತ್ತಿಪರತೆಯನ್ನು ಪತ್ರಕರ್ತರು ಪಾಲಿಸಬೇಕು ಎಂದರು.

ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ‌ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ‌ ಎಂದರು.

ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ ಎಂದರು.

ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಖಂಡ್ರೆ, ಸಚಿವರುಗಳಾದ ರಹೀಂ ಖಾನ್, ಶರಣ ಪ್ರಕಾಶ್ ಪಾಟೀಲ್, ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಜಿಲ್ಲಾಧ್ಯಕ್ಷರಾದ ಆನಂದ್ ದೇವಪ್ಪ, ಸಮ್ಮೇಳನದ ಪ್ರಧಾನ ಭಾಷಣಕಾರರಾಗಿರುವ ಹಿರಿಯ ಸಂಪಾದಕರಾದ ವಿಶ್ವೇಶ್ವರ ಭಟ್, ಸಂಸದರಾದ ಸಾಗರ್ ಖಂಡ್ರೆ, ಮಾಜಿ ಸಚಿವರಾದ ರಾಜಶೇಖರ್ ಪಾಟೀಲ್, ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸೋಮಣ್ಣ ಬೇವಿನಮರದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.‌

ಹಾರಕುಡ ಹಿರೇಮಠ ಸಂಸ್ಥಾನದ ಡಾ.ಚನ್ನವೀರ ಶಿವಾಚಾರ್ಯರು, ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದೇವರು ಇವರ ದಿವ್ಯ ಸಾನ್ನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತರ ಸಂಘದ ರಾಜ್ಯ ಮತ್ತು‌ ಜಿಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.‌

*ಉಚಿತ ಬಸ್ ಪಾಸ್: ನಿಯಮಗಳ ತೊಂದರೆ ನಿವಾರಣೆ: ಸಿಎಂ*

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.

ಈಶ್ವರ್ ಖಂಡ್ರೆ ಊಹಾ ಪತ್ರಿಕೋದ್ಯಮ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಿಕೋದ್ಯಮದ ಸವಾಲುಗಳು ಬೀದರ್ ಪತ್ರಕರ್ತರ ಸಮ್ಮೇಳನ ವಿಶ್ವೇಶ್ವರ ಭಟ್. ಸಮಾಜ ಸುಧಾರಣೆ ಸಂವಿಧಾನದ ಆಶಯಗಳು ಸಿಎಂ ಸಿದ್ದರಾಮಯ್ಯ
Follow on Facebook Follow on Instagram
Share. Facebook Twitter WhatsApp Telegram
Previous Articleನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ; ಆಳವಾದ ಕಂದಕದಲ್ಲಿ ಮೃತದೇಹ
Times Of Bayaluseeme Staff
  • Website

Related Posts

ಪಿಯು ಫಲಿತಾಂಶ ; ಇತಿಹಾಸ ಸೃಷ್ಟಿಸಿದ ವಿದ್ಯಾರ್ಥಿನಿಯರು

April 9, 2026

ಆಸ್ಪತ್ರೆಗೆ ಸಿಎಂ, ಡಿಸಿಎಂ; ಸಚಿವರ ಆರೋಗ್ಯ ವಿಚಾರಿಸಿ ಕುಟುಂಬಕ್ಕೆ ಧೈರ್ಯ ತುಂಬಿದ ನಾಯಕರು

April 9, 2026

ಭವಿಷ್ಯ ನಿರ್ಧಾರಕ್ಕೆ ಕೌಂಟ್ ಡೌನ್; ಶುರುವಾಯ್ತು ಢವಢವ…

April 9, 2026
Add A Comment
Leave A Reply Cancel Reply

Advertisement
Latest Posts

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ: ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು: ಸಿಎಂ

ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ; ಆಳವಾದ ಕಂದಕದಲ್ಲಿ ಮೃತದೇಹ

ಗುಣಮಟ್ಟದ ಶಿಕ್ಷಣ ದೊಡ್ಡ ಕಟ್ಟಡಗಳಿಂದ ನಿರ್ಧಾರವಾಗಲ್ಲ; ಕೆ.ಜಿ.ಜಗದೀಶ್

ಮೇ 1ರಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಹೋರಾಟ: ಭೂಹೀನರಿಗೆ ಭೂಮಿ, ಮನೆರಹಿತರಿಗೆ ವಸತಿ ಒತ್ತಾಯ

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.