ಚಿತ್ರದುರ್ಗ: ಸಿಗಂದೂರು ಬ್ರಿಡ್ಜ್ ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಲೇಟಾಗಿ ಮಾಹಿತಿ ಹೇಳಿದ್ದಾರೆ. ಈಮೊದಲೇ ಇಂಡಿ ಕ್ಷೇತ್ರದಲ್ಲಿ ಕಾರ್ಯಕ್ರಮ ನಿಗದಿಯಾಗಿದೆ. ಅವರ ಪರವಾಗಿ ನಾನು ಕಾರ್ಯಕ್ರಮಕ್ಕೆ ಹಾಜರ್ ಆಗುವೆ.ಸಿ.ಎಂರನ್ನು ಕರೆದಿದ್ದಾರೋ, ಬಿಟ್ಟಿದ್ದಾರೋ ಅದು ಬೇರೆ ಪ್ರಶ್ನೆ. ನಮ್ಮ ರಾಜ್ಯದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಕೇಂದ್ರ ಸಚಿವರುಬರುತ್ತಿದ್ದಾರೆ. ಅವರಿಗೆ ಗೌರವ ನೀಡಲು ಭಾಗಿಯಾಗುತ್ತೇವೆ. ಮುಖ್ಯಮಂತ್ರಿ ಸಿದ್ದರಾಮಯ್ಯರವರು ನಾಳಿನ ಕಾರ್ಯಕ್ರಮಕ್ಕೆಹೋಗಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಶಿವಮೊಗ್ಗದ ಕಾರ್ಯಕ್ರಮನಿಗದಿ ಆಗುವ ನಾಲ್ಕೈದು ದಿನಗಳ ಮುಂಚೆ ಪಿಕ್ಸ್ ಆಗಿದೆ. ಮುಖ್ಯಮಂತ್ರಿಗಳು ಹಾಗೂ ಮಂತ್ರಿಗಳು ಹೋಗಲು ಅನುಕೂಲ ಆಗುತ್ತದೆ ಎಂದು ತಿಳಿಸಿದ್ದೇವೆಎಂದ ಸಚಿವರು. ಬಿಎಸ್ ವೈ ಪುತ್ರರಿಂದ ಏಕಚಕ್ರಾಧಿಪತ್ಯ ಎಂದು ಸಚಿವ ಮಧು ಬಂಗಾರಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ನಾನುಅಲ್ಲಿಗೆ ಹೋದಮೇಲೆ ಗೊತ್ತಾಗುತ್ತದೆ. ಈಗ ಹೇಗೆ ಗೊತ್ತಾಗುತ್ತದೆ. ಅದು ಖಾಸಗಿ ಕಾರ್ಯಕ್ರಮ ಅಲ್ಲ. ಕೇಂದ್ರ ಸರ್ಕಾರದ ಕಾರ್ಯಕ್ರಮ. ರಾಜ್ಯ ಸರ್ಕಾರದ ಪರ ನಾವು ಸಹಕರಿಸಬೇಕಾಗುತ್ತದೆ ಎಂದರು.
55 ಕಾಂಗ್ರೆಸ್ ಶಾಸಕರ ಟಾರ್ಗೆಟ್ ಎಂದು ವಿಜಯಾನಂದ ಕಾಶಪ್ಪನವರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ ನನಗೆ ಆ ಬಗ್ಗೆ
ಗೊತ್ತಿಲ್ಲ. ಸಂಪೂರ್ಣ ಮಾಹಿತಿ ಇಲ್ಲ. ವಿಜಯಾನಂದ ಕಾಶಪ್ಪನವರ್ ಸಂಪೂರ್ಣ ಮಾಹಿತಿ ನೀಡಿದರೆ ಒಳ್ಳೆಯದು ಎಂದರು. ಇನ್ನುಚಿತ್ರದುರ್ಗದ ಬಳಿ ನಿರ್ಮಾಣ ಆಗುತ್ತಿರುವ ಕಟ್ಟಡ ಜಿಲ್ಲಾಡಳಿತ ಭವನ ಕಟ್ಟಡ ಕಾಮಗಾರಿ ವೀಕ್ಷಿಸಿ ಸತೀಶ್ ಜಾರಕಿಹೊಳಿಹಿಂದಿನ ಅವಧಿಯಲ್ಲಿ ಕಾಮಗಾರಿ ಆರಂಭಿಸಲಾಗಿದೆ ಜಿಲ್ಲಾಧಿಕಾರಿಗಳ ಕಛೇರಿಯನ್ನು ಆದಷ್ಟು ಬೇಗ
ಮುಗಿಸುತ್ತೇವೆ.ಆ ನಿಟ್ಟಿನಲ್ಲಿ ಪ್ರಯತ್ನ ಮಾಡುತ್ತೇವೆ.
ಜಿಲ್ಲಾಧಿಕಾರಿಗಳ ಕಛೇರಿ ಅವೈಜ್ಞಾನಿಕವಾಗಿದೆ ಎಂದು ಜಿಲ್ಲೆಯ ಶಾಸಕರಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಅದಕ್ಕೆ ಈಗ ಏನು ಮಾಡಲಿಕ್ಕೆ ಆಗುವುದಿಲ್ಲ. ಒಂದು ಸಾರಿ ಹಾಕಿದ ಮೇಲೆ
ಬದಲಾವಣೆ ಮಾಡುವುದಕ್ಕೆ ಬರುವುದಿಲ್ಲ. ಈಗ ಏನಾಗಿದೆ ಅದನ್ನು ಸರ್ಕಾರ ಸರಿಪಡಿಸುವ ಕೆಲಸ ಮಾಡುತ್ತದೆ.ಈ ಹಿಂದಿನ
ಅವಧಿಯಲ್ಲಿ ಕಾಮಗಾರಿ ಆರಂಭಿಸಲಾಗಿದೆ ಈಗಾಗಲೇ ಐವತ್ತು ಕೋಟಿ ರೂ. ಖರ್ಚು ಮಾಡಲಾಗಿದೆ ಈಗೇನು ಮಾಡಲಾಗದು,ಸರಿಪಡಿಸುವ ಕೆಲಸ ಮಾಡುತ್ತೇವೆ. ನೀರು ರಸ್ತೆ ಸೇರಿ ಮೂಲ ಸೌಕರ್ಯ, ಸಿಟಿ ಬಸ್ ವ್ಯವಸ್ಥೆ ಮಾಡುತ್ತೇವೆ. ಜನವರಿ 1ಕ್ಕೆಜಿಲ್ಲಾಡಳಿತ ಭವನ ಲೋಕಾರ್ಪಣೆ ಮಾಡುತ್ತೇವೆ ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್,ಚಳ್ಳಕೆರೆ ಶಾಸಕ ಟಿ ರಘುಮೂರ್ತಿ, ಚಿತ್ರದುರ್ಗ ಶಾಸಕ ಕೆ.ಸಿ.ವಿರೇಂದ್ರ(ಪಪ್ಪಿ) ಜಿಲ್ಲಾಧಿಕಾರಿ ವೆಂಕಟೇಶ್, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ತಾಜ್ ಪೀರ್, ಸಂಪತ್ ಕುಮಾರ್ ಇದ್ದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



