ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರ ನೀಡಿದ್ದ ಫ್ರೀ ಭಾಗ್ಯಗಳಲ್ಲಿ ಒಂದಾದ ಶಕ್ತಿ ಯೋಜನೆಯಲ್ಲಿ ಇದುವರೆಗೂ 500 ಕೋಟಿ ಮಹಿಳಾ ಪ್ರಯಾಣಿಕರು ಸಂಚಾರ ಮಾಡಿದ ಹಿನ್ನಲೆ ಇಂದು ಸರ್ಕಾರ ಎಲ್ಲಾ ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಆಯಾ ಉಸ್ತುವಾರಿ ಸಚಿವರು ಸಿಹಿ ಹಂಚಿ ಸಂಭ್ರಮಿಸಲೂ ಸರ್ಕಾರ ಸೂಚನೆ ನೀಡಿದೆ. ಅದರಂತೆ ಚಿತ್ರದುರ್ಗ ಜಿಲ್ಲೆಯಲ್ಲಿ ಸಹ ಸಿಹಿ ಹಂಚಿ ಸಂಭ್ರಮಪಟ್ಟಿದ್ದಾರೆ. ಇದೇ ವೇಳೆ ವಿಪಕ್ಷದ ಮುಖಂಡರು ಮೊಳಕಾಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿ ಪ್ರಶ್ನೆ ಮಾಡಿದ್ದಾರೆ. ಶಕ್ತಿ ಯೋಜನೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ನಿಶಕ್ತಿ ಎಂಬ ಹಣೆಬರಹ ಬರೆದಿದ್ದಾರೆ. ಇನ್ನು ಮೊಳಕಾಲ್ಮೂರು ಪಟ್ಟಣದಲ್ಲಿ ಸರ್ಕಾರಿ ಬಸ್ ನಿಲ್ದಾಣ ಹಾಗೂ ಬಸ್ ಡಿಪೋ ಉದ್ಘಾಟನೆ ಯಾವಾಗ…? ನಾಯಕನಹಟ್ಟಿಯಲ್ಲಿ ನಿಲ್ದಾಣಕ್ಕೆ ಜಾಗವೇ ಇಲ್ಲ.. ಜಾಗ ಹುಡುಕಿ ಬಸ್ ನಿಲ್ದಾಣ ಯಾವಾಗ ಮಾಡ್ತೀರಾ ಎಂದು ಪ್ರಶ್ನೆ ಕೇಳಿದ್ದಾರೆ. ಇನ್ನು ಶಕ್ತಿ ಯೋಜನೆ ಯಶಸ್ವಿ ಎಂದು ಮೊಳಕಾಲ್ಮೂರು ಬಸ್ ನಿಲ್ದಾಣದಲ್ಲಿ ಸಿಹಿ ಹಂಚಲು ಬಡವ ಕಾಂಗ್ರೆಸ್ ನಾಯಕರಿಗೆ ಧೈರ್ಯದಿಂದ ಪ್ರಶ್ನೆ ಮಾಡು ಮತದಾರ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಬಿಡುಗಡೆ ಮಾಡಿ ಮೊಳಕಾಲ್ಮೂರು ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಪ್ರಶ್ನೆ ಕೇಳಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



