ಚಿತ್ರದುರ್ಗ: ರಾಜ್ಯ ಸರ್ಕಾರದಲ್ಲಿ ನವೆಂಬರ್ ಬಳಿಕ ಹೊಸ ಕ್ರಾಂತಿ ಆಗಲಿದೆ ಎಂಬ ಸುದ್ದಿ ಸಂಚಲನ ಸೃಷ್ಟಿಸಿದೆ. ಬಿಹಾರ ಚುನಾವಣೆ ನಡೆದ ಬಳಿಕ ರಾಜ್ಯದಲ್ಲಿ ನವೆಂಬರ್ ತಿಂಗಳಲ್ಲಿ ಕೆಲ ಸಚಿವರಿಗೆ ಸಚಿವ ಸ್ಥಾನದಿಂದ ಕೋಕ್ ನೀಡಲಾಗುತ್ತದೆ ಎಂಬ ಚರ್ಚೆ ನಡೆಯುತ್ತಿದೆ. ಈಗಾಗಲೇ ರಾಜ್ಯ ಉಸ್ತುವಾರಿ ಸುರ್ಜೆವಾಲಾ ಶಾಸಕರ ಹಾಗೂ ಸಚಿವರ ಮೌಲ್ಯಮಾಪನಮಾಡುತ್ತಿದ್ದಾರೆ.ಇದರ ಬೆನ್ನಲ್ಲೇ ಕೋಟೆನಾಡು ಚಿತ್ರದುರ್ಗದ ರಾಜಕೀಯದಲ್ಲಿ ಸಹ ಒಳಗೊಳಗೆ ರಾಜಕೀಯ ಬೆಳವಣಿಗೆ ನಡೆಯುತ್ತಿವೆ. ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರಿಗೆ ಸಹ ಸಚಿವ ಸ್ಥಾನದಿಂದ ಕೋಕ್ ನೀಡೋದು ಪಕ್ಕ ಎಂಬ ಸುದ್ದಿ ಹರಿದಾಡುತ್ತಿದೆ.
ಈಗಾಗಲೇ ಡಿ.ಸುಧಾಕರ್ ಬಳಿಕ ಜಿಲ್ಲೆಯಲ್ಲಿ ಯಾರಿಗೆ ಸಚಿವ ಸ್ಥಾನ ಸಿಗಬಹುದು ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ಜಿಲ್ಲೆಯಲ್ಲಿ ಈಗಾಗಲೇ ಮೊಳಕಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣ ಹಾಗೂ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಇಬ್ಬರು ಸಹ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ಅತ್ತ ಎನ್ ವೈ ಗೋಪಾಲಕೃಷ್ಣ ನಾನು ಹಿರಿಯ ಶಾಸಕನಾಗಿದ್ದು, ಸಚಿವ ಸ್ಥಾನ ಸಿಗುತ್ತದೆ ಎಂಬ ಕಾರಣಕ್ಕೆ ಬಿಜೆಪಿ ತೊರೆದು ಕಾಂಗ್ರೆಸ್ ಗೆ ಬಂದಿದ್ದೇನೆ. ಜೊತೆಗೆ ಇದು ಕೊನೆ ಚುನಾವಣೆ ಆಗಬಹುದು ಎಂಬುದಾಗಿ ಕಾರಣ ನೀಡಿದ್ದಾರೆ ಅನ್ನೋದು ಸದ್ಯದ ಮಾಹಿತಿ ಆದ್ರೆ, ಇತ್ತ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ನಾನು ಇದುವರೆಗೂ ಸಚಿವ ಸ್ಥಾನವನ್ನು ಕೇಳಿಲ್ಲ. ಪಕ್ಷದಲ್ಲಿ ನಿಷ್ಠೆಯಿಂದ ಕೆಲಸ ಮಾಡಿದ್ದೇನೆ. ಮೂರು ಬಾರಿ ಶಾಸಕನಾಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಈಗಲಾದರೂ ಸಚಿವ ಸ್ಥಾನವನ್ನು ನೀಡಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ.
ಇಬ್ಬರು ಸಚಿವ ಸ್ಥಾನಕ್ಕೆ ಪಟ್ಟು ಹಿಡಿದಿದ್ದು, ಅದರಲ್ಲಿ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿಗೆ ಸಚಿವ ಸ್ಥಾನ ನೀಡಲು ನಾಯಕರು ಮನಸ್ಸು ಮಾಡಬಹುದು ಎಂದು ಹೇಳಲಾಗುತ್ತಿದೆ. ಕಾರಣ ಮೊಳಕಾಲ್ಮೂರು ಶಾಸಕ ಎನ್ ವೈ ಗೋಪಾಲಕೃಷ್ಣ ಬಿಜೆಪಿ ಪಕ್ಷದಿಂದ ವಲಸೆ ಬಂದಿದ್ದಾರೆ, ಕ್ಷೇತ್ರದಲ್ಲಿ ಸರಿಯಾದ ಅಭಿವೃದ್ಧಿ ಕೆಲಸಗಳು ಆಗಿಲ್ಲ ಜೊತೆಗೆ ವಯಸ್ಸಾಗಿರುವುದು ಸಹ ಸಚಿವ ಸ್ಥಾನ ನೀಡಿರುವುದಕ್ಕೆ ಕಾರಣ ಎನ್ನಲಾಗುತ್ತಿದೆ. ಆದ್ರೆ ಶಾಸಕ ಟಿ. ರಘುಮೂರ್ತಿ ಅವರು ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರಿಂದ ಮೂರು ಬಾರಿ ಶಾಸಕನಾಗಿ ಆಯ್ಕೆ ಆಗಿದ್ದಾರೆ. ಕೊಟ್ಟ ಮಾತಿನಂತೆಯೇ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಚೆಕ್ ಡ್ಯಾಮ್ ಹಾಗೂ ಬ್ಯಾರೇಜ್ ನಿರ್ಮಾಣ ಮಾಡುವ ಮೂಲಕ ನೀರಾವರಿ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದಾರೆ. ಪಕ್ಷ ಸಂಘಟನೆಯಲ್ಲಿ ನಿಷ್ಠೆಯಿಂದ ಕೆಲಸ ಮಾಡುತ್ತಿದ್ದಾರೆ. ಯಾವುದೇ ವಿವಾದಗಳಲ್ಲಿ ಸಿಲುಕಿಲ್ಲ. ಜೊತೆಗೆ ಸಚಿವ ಸತೀಶ್ ಜಾರಕಿಹೊಳಿ ಆಪ್ತರಾಗಿದ್ದು ರಘುಮೂರ್ತಿಗೆ ಸಚಿವ ಸ್ಥಾನ ಕೊಡಿಸುವಲ್ಲಿ ಸತೀಶ್ ಜಾರಕಿಹೊಳಿ ಸಹ ಸಾಥ್ ನೀಡುತ್ತಾರೆ ಇದರ ಜೊತೆಗೆ ಜಿಲ್ಲೆಯ ಶಾಸಕರಾದ ವೀರೇಂದ್ರ ಪಪ್ಪಿ, ಸ್ವತಃ ಸುಧಾಕರ್, ಗೋವಿಂದಪ್ಪ ಸೇರಿದಂತೆ ಕೆಲ ಶಾಸಕರನ್ನು ಸಹ ಆತ್ಮವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುವ ಶಕ್ತಿ ಅವರಲ್ಲಿದೆ ಎಂಬ ಕಾರಣಗಳಿಂದ ಟಿ. ರಘುಮೂರ್ತಿ ಅವರಿಗೆ ಸಚಿವ ಸ್ಥಾನ ಸಿಗೋದು ಪಕ್ಕ ಅನ್ನೋದು ಸದ್ಯದ ಮಾಹಿತಿ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



