Close Menu
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
What's Hot

ಎಸ್ ಎಸ್ ಎಲ್ ಸಿ ಫಲಿತಾಂಶ; ನಿಮ್ಮ ಜಿಲ್ಲೆಗೆ ಯಾವ ಸ್ಥಾನ? ಇಲ್ಲಿದೆ ಮಾಹಿತಿ

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಶೇ 94.1 ಪಾಸ್, 7 ಮಂದಿಗೆ ಪೂರ್ಣ ಅಂಕ

ಬೇಸಿಗೆಯ ಬಿಸಿಲಿಗೆ ‘ಕರ್ಬೂಜ’ ಹಣ್ಣಿನ ಅದ್ಭುತ ಆರೋಗ್ಯ ಪ್ರಯೋಜನಗಳು!

Facebook X (Twitter) Instagram
  • ಕ್ರೀಡೆ
  • ಕ್ರೈಂ
  • ಭವಿಷ್ಯ
  • ದೇಶ-ವಿದೇಶ
  • ವ್ಯಾಪಾರ
  • ಸಿನಿಮಾ
Facebook X (Twitter) Instagram
Times Of Bayaluseeme
  • ಮುಖಪುಟ
  • ಕ್ರೀಡೆ
  • ಕ್ರೈಂ
  • ಜಿಲ್ಲಾ ಸುದ್ದಿ
  • ರಾಜಕೀಯ
  • ರಾಜ್ಯ
  • ಸಿನಿಮಾ
Subscribe
Times Of Bayaluseeme
Home»ರಾಜ್ಯ»ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಶೇ 94.1 ಪಾಸ್, 7 ಮಂದಿಗೆ ಪೂರ್ಣ ಅಂಕ
ರಾಜ್ಯ

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಶೇ 94.1 ಪಾಸ್, 7 ಮಂದಿಗೆ ಪೂರ್ಣ ಅಂಕ

Times Of Bayaluseeme StaffBy Times Of Bayaluseeme StaffApril 23, 2026No Comments1 Min Read
Share WhatsApp Facebook Twitter Threads Telegram
Follow Us
Facebook Instagram
ಪರೀಕ್ಷೆಯಲ್ಲಿ ತೇರ್ಗಡೆಯಾದ ನಂತರ ಸಂಭ್ರಮಿಸುತ್ತಿರುವ ವಿದ್ಯಾರ್ಥಿಗಳು ಮತ್ತು ಕರ್ನಾಟಕ ಶಿಕ್ಷಣ ಇಲಾಖೆಯ ಲೋಗೋ.
Share
WhatsApp Twitter Facebook Telegram

ಬೆಂಗಳೂರು: 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ರಾಜ್ಯದಲ್ಲಿ ಹೊಸ ಇತಿಹಾಸ ಬರೆದಿದೆ. ಈ ಬಾರಿ ಶೇ 94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿ ದಾಖಲೆಯ ಸಾಧನೆ ಮಾಡಿದ್ದಾರೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಿ ವಿವರಗಳನ್ನು ಹಂಚಿಕೊಂಡರು.
ಒಟ್ಟು 7,70,209 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅವರಲ್ಲಿ 7,24,794 ಮಂದಿ ಯಶಸ್ಸು ಸಾಧಿಸಿದ್ದಾರೆ. ಈ ಬಾರಿ ಏಳು ಮಂದಿ ವಿದ್ಯಾರ್ಥಿಗಳು 625ರಲ್ಲಿ 625 ಅಂಕಗಳನ್ನು ಪಡೆದು ಅಗ್ರ ಸ್ಥಾನ ಹಂಚಿಕೊಂಡಿದ್ದಾರೆ.

ದಾವಣಗೆರೆಯ ಭರತ್, ಚಿಕ್ಕಮಗಳೂರಿನ ಬೃಂದಾ, ಬೆಂಗಳೂರು ಉತ್ತರದ ಧನುಷ್, ಉಡುಪಿಯ ಪ್ರೀತಂ, ಚಿಕ್ಕೋಡಿಯ ಪ್ರಾರ್ಥನಾ, ವಿಜಯಪುರದ ಸೌಜನ್ಯಾ ಹಾಗೂ ರಾಯಚೂರಿನ ಸುಖದೇವ್ ಪೂರ್ಣ ಅಂಕ ಪಡೆದ ಸಾಧಕರಾಗಿದ್ದಾರೆ.

ಹಾಗೆಯೇ ಈ ವರ್ಷವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಶೇ 96.18ರಷ್ಟು ಬಾಲಕಿಯರು ತೇರ್ಗಡೆಯಾಗಿದ್ದು, ಬಾಲಕರ ಪಾಸ್ ಪ್ರಮಾಣ ಶೇ 91.94ರಷ್ಟಿದೆ. 3,92,922 ಬಾಲಕಿಯರ ಪೈಕಿ 3,77,922 ಮಂದಿ ಹಾಗೂ 3,77,287 ಬಾಲಕರ ಪೈಕಿ 3,46,872 ಮಂದಿ ತೇರ್ಗಡೆಯಾಗಿದ್ದಾರೆ.

ಉತ್ತಮ ಫಲಿತಾಂಶ ಹಿನ್ನೆಲೆ ಈ ಬಾರಿ ಮೂರನೇ ಪರೀಕ್ಷೆ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ. ಮೇ 18ರಿಂದ 25ರವರೆಗೆ ಎರಡನೇ ಪರೀಕ್ಷೆ ನಡೆಯಲಿದೆ.

ಶಾಲಾವಾರು ಫಲಿತಾಂಶದಲ್ಲಿ ಖಾಸಗಿ ಶಾಲೆಗಳು ಶೇ 95.4ರಷ್ಟು ಪಾಸ್ ಪ್ರಮಾಣದೊಂದಿಗೆ ಮುಂಚೂಣಿಯಲ್ಲಿದ್ದು, ಸರ್ಕಾರಿ ಶಾಲೆಗಳು ಶೇ 93.97 ಮತ್ತು ಅನುದಾನಿತ ಶಾಲೆಗಳು ಶೇ 92.44ರಷ್ಟು ಫಲಿತಾಂಶ ದಾಖಲಿಸಿವೆ. ಇದೇ ವೇಳೆ ಸಾವಿರಾರು ಶಾಲೆಗಳು ಶೇ 100 ಫಲಿತಾಂಶ ಸಾಧಿಸಿರುವುದು ಗಮನಾರ್ಹವಾಗಿದ್ದು, ಕೆಲವೇ ಶಾಲೆಗಳಲ್ಲಿ ಶೂನ್ಯ ಫಲಿತಾಂಶವೂ ಕಂಡುಬಂದಿದೆ.

ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು karresults.nic.in ವೆಬ್‌ಸೈಟ್ ಹಾಗೂ ‘KarnatakaOne’ ಮೊಬೈಲ್ ಆ್ಯಪ್ ಮೂಲಕ ವೀಕ್ಷಿಸಬಹುದು. ಜೊತೆಗೆ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್‌ಎಂಎಸ್ ಅಥವಾ ವಾಟ್ಸಾಪ್ ಮೂಲಕವೂ ಫಲಿತಾಂಶದ ಮಾಹಿತಿ ರವಾನೆಯಾಗುತ್ತಿದೆ.

ಒಟ್ಟಾರೆ, ಈ ಎಸ್‌ಎಸ್‌ಎಲ್‌ಸಿ ಫಲಿತಾಂಶ ರಾಜ್ಯದ ಶಿಕ್ಷಣ ವ್ಯವಸ್ಥೆಯ ಸಾಧನೆಯನ್ನು ಪ್ರತಿಬಿಂಬಿಸುವಂತಿದ್ದು, ವಿದ್ಯಾರ್ಥಿಗಳ ಪರಿಶ್ರಮಕ್ಕೆ ಘನತೆಯ ಮುದ್ರೆ ಒತ್ತಿದೆ.

625 ಅಂಕ ಪಡೆದ ವಿದ್ಯಾರ್ಥಿಗಳು SSLC Exam 2 Results date. SSLC Result link ಎಸ್‌ಎಸ್‌ಎಲ್‌ಸಿ ಫಲಿತಾಂಶ 2026 ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮಧು ಬಂಗಾರಪ್ಪ
Follow on Facebook Follow on Instagram
Share. Facebook Twitter WhatsApp Telegram
Previous Articleಬೇಸಿಗೆಯ ಬಿಸಿಲಿಗೆ ‘ಕರ್ಬೂಜ’ ಹಣ್ಣಿನ ಅದ್ಭುತ ಆರೋಗ್ಯ ಪ್ರಯೋಜನಗಳು!
Next Article ಎಸ್ ಎಸ್ ಎಲ್ ಸಿ ಫಲಿತಾಂಶ; ನಿಮ್ಮ ಜಿಲ್ಲೆಗೆ ಯಾವ ಸ್ಥಾನ? ಇಲ್ಲಿದೆ ಮಾಹಿತಿ
Times Of Bayaluseeme Staff
  • Website

Related Posts

ಎಸ್ ಎಸ್ ಎಲ್ ಸಿ ಫಲಿತಾಂಶ; ನಿಮ್ಮ ಜಿಲ್ಲೆಗೆ ಯಾವ ಸ್ಥಾನ? ಇಲ್ಲಿದೆ ಮಾಹಿತಿ

April 23, 2026

ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ತೀರ್ಪು: ವಿನಯ್ ಕುಲಕರ್ಣಿಗೆ ಜೀವಾವಧಿ

April 17, 2026

ಕರ್ನಾಟಕ ಲೋಕಾಯುಕ್ತದ ನಾಲ್ಕು ದಶಕಗಳ ಸಾರ್ಥಕ ಪಯಣ: ಏಪ್ರಿಲ್ 18 ರಂದು ವಿಶೇಷ ಕಾರ್ಯಕ್ರಮ

April 17, 2026
Add A Comment
Leave A Reply Cancel Reply

Advertisement
Latest Posts

ಎಸ್ ಎಸ್ ಎಲ್ ಸಿ ಫಲಿತಾಂಶ; ನಿಮ್ಮ ಜಿಲ್ಲೆಗೆ ಯಾವ ಸ್ಥಾನ? ಇಲ್ಲಿದೆ ಮಾಹಿತಿ

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಶೇ 94.1 ಪಾಸ್, 7 ಮಂದಿಗೆ ಪೂರ್ಣ ಅಂಕ

ಬೇಸಿಗೆಯ ಬಿಸಿಲಿಗೆ ‘ಕರ್ಬೂಜ’ ಹಣ್ಣಿನ ಅದ್ಭುತ ಆರೋಗ್ಯ ಪ್ರಯೋಜನಗಳು!

ನಿತ್ಯ ಭವಿಷ್ಯ – 23/04/2026 🔮

Trending Posts

Subscribe to News

Get the latest sports news from NewsSite about world, sports and politics.

Facebook X (Twitter) Pinterest Vimeo WhatsApp TikTok Instagram

News

  • World
  • US Politics
  • EU Politics
  • Business
  • Opinions
  • Connections
  • Science

Company

  • Information
  • Advertising
  • Classified Ads
  • Contact Info
  • Do Not Sell Data
  • GDPR Policy
  • Media Kits

Services

  • Subscriptions
  • Customer Support
  • Bulk Packages
  • Newsletters
  • Sponsored News
  • Work With Us

Subscribe to Updates

Get the latest creative news from FooBar about art, design and business.

© 2026 ThemeSphere. Designed by ThemeSphere.
  • Privacy Policy
  • Terms
  • Accessibility

Type above and press Enter to search. Press Esc to cancel.