ಚಿಕ್ಕಮಗಳೂರು: ತಮ್ಮೂರಿಗೆ ರಸ್ತೆ ಮಾಡಿಸಿಕೊಡುವಂತೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಮಲಗಾರು ಗ್ರಾಮದ 8ನೇ ತರಗತಿ ವಿದ್ಯಾರ್ಥಿನಿ ಸಿಂಧೂರ ಪತ್ರ ಬರೆದಿದ್ದಾಳೆ. ಮನೆಯಿಂದ ಶಾಲೆ 3-4ಕಿ.ಮೀ. ದೂರವಿದ್ದು, ಓಡಾಡಲು ತುಂಬಾ ಕಷ್ಟವಾಗಿದೆ. ಮಳೆಗಾಲದಲ್ಲಿ ರಸ್ತೆ ತುಂಬಾ ಹಾಳಾಗಿ ಕೆಸರು ಮಯವಾಗಿರುತ್ತದೆ. ವಾರದಲ್ಲಿ ಮೂರ್ನಾಲ್ಕು ದಿನವೂ ಶಾಲೆಗೆ ಹೋಗುವುದು ಕಷ್ಟವಾಗಿದೆ. ನಮ್ಮೂರಿನ ಜನರೆಲ್ಲರೂ ಪ್ರತಿಯೊಂದಕ್ಕೂ ಇದೇ ರಸ್ತೆ ಅವಲಂಬಿಸಿ ದ್ದಾರೆ. ನಮಗೆ ಓಡಾಡಲು ಬೇರೆ ರಸ್ತೆ ಇಲ್ಲ. ಊರಿನ ಮಹಿಳೆಯರು, ಮಕ್ಕಳ ಆರೋಗ್ಯದ ದೃಷ್ಟಿಯಿಂದ ನಮಗಿರುವ ಒಂದೇ ರಸ್ತೆಯನ್ನು ದುರಸ್ತಿ ಮಾಡಿಸಿಕೊಡಿ ಎಂದು ಸಿಂಧೂರ, ಪ್ರಧಾನಿ ಮೋದಿಗೆ ಕನ್ನಡ-ಇಂಗ್ಲೀಷ್ ಎರಡರಲ್ಲೂ ಪತ್ರ ಬರೆದಿದ್ದಾಳೆ. ಆ ಪತ್ರ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



