ರಾಜ್ಯದಲ್ಲಿ ಹೃದಯಾಘಾತದ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಬುಧವಾರ ಕೂಡ ನಾಲ್ವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಈ ಮಧ್ಯೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆಯಲ್ಲಿ ನವಜಾತ ಶಿಶುವಿಗೆ ಹೃದಯಾಘಾತವಾಗಿದ್ದು, ಝೀರೋ ಟ್ರಾಫಿಕ್ನಲ್ಲಿ ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಶು ಆರೋಗ್ಯವಾಗಿದೆ ತಿಳಿದುಬಂದಿದೆ. ಎಂದು ಮೂಡಿಗೆರೆಯ ರಘು-ಸುಷ್ಮಾ ದಂಪ ತಿಯ ಮಗು ಹೃದಯಾಘಾತಕ್ಕೆ ಒಳ ಗಾಗಿದೆ. ಸುಷ್ಮಾ, ಹಾಸನದ ಆಸ್ಪತ್ರೆ ಯೊಂದಕ್ಕೆ ದಾಖಲಾಗಿದ್ದರು. ಶಿಶು ಹುಟ್ಟಿದ ಕೆಲ : ತಾಸುಗಳ ಬಳಿಕಹೃದಯಾಘಾತವಾಗಿದೆ. ಮಗುವನ್ನು 3 ತಾಸಲ್ಲಿ ಬೆಂಗಳೂರಿನ ಜಯದೇವ ಆಸ್ಪ ತ್ರೆಗೆ ಕರೆತರಲಾಯಿತು. ಅಲ್ಲಿ ತಜ್ಞ ವೈದ್ಯರ ತಂಡವು ತಕ್ಷಣವೇ ಚಿಕಿತ್ಸೆ ಆರಂ ಭಿಸಿ, ಮಗುವಿನ ಪ್ರಾಣ ಉಳಿಸಿದ್ದಾರೆಬುಧವಾರ ಈ ಮಧ್ಯೆ, ಕೊಪ್ಪಳದ 26 ವರ್ಷ ದ ಮಹಿಳೆ ಮಂಜುಳಾ ಹೂಗಾರ’ (25) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ವಿಜಯನಗರ ಜಿಲ್ಲೆ ಕೊಟ್ಟೂರಿನ ಎಚ್.ಕೆ.ರೇಖಾ (3), ಮಂಡ್ಯದ ಪಾಂಡವಪುರ ತಾಲೂನ ಗುಮ್ಮನಹಳ್ಳಿಯಲ್ಲಿ ಮಂಜುನಾಥ್ (44), ಬಾಗಲಕೋಟೆಯ ಜಮಖಂಡಿಯಲ್ಲಿ ಸಿದ್ದು ಮೀಸಿ (63) ಎಂಬುವರು ಬಲಿಯಾಗಿದ್ದಾರೆ. ಹೃದಯಾಘಾತಕ್ಕೆ
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



