ಪುತ್ತೂರು: ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರಿಗಿಂತ ಒಂದು ದಿನವಾದರೂ ಹೆಚ್ಚು ಮುಖ್ಯಮಂತ್ರಿಯಾಗಿ ಆಡಳಿತ ನಡೆಸಬೇಕು ಎಂಬ ಜಿದ್ದಿಗೆ ಬಿದ್ದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ನವೆಂಬರ್ ಒಳಗಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ.ಸಿದ್ದರಾಮಯ್ಯ ರಾಜೀನಾಮೆ ನೀಡದಿದ್ದಲ್ಲಿ ಡಿ.ಕೆ. ಶಿವಕುಮಾರ್, ಮುಖ್ಯಮಂತ್ರಿ ಕುರ್ಚಿಯನ್ನು ಬಲವಂತವಾಗಿ ಎಳೆದುಕೊಳ್ಳುತ್ತಾರೆ. ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಮಾಜಿ ಸಚಿವ ಹಾಗೂ ಗಂಗಾವತಿ ಶಾಸಕ ಗಾಲಿಜನಾರ್ದನ ರೆಡ್ಡಿ ಭವಿಷ್ಯ ನುಡಿದಿದ್ದಾರೆ.ನಳಿನ್ ಕುಮಾರ್ ಕಟೀಲ್ ಅವರ ಪಾಲ್ತಾಡಿಯ ಕುಂಜಾಡಿಯಲ್ಲಿನ ಮನೆಯಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.ಡಿಕೆಶಿ ಮತ್ತು ಸಿದ್ದರಾಮಯ್ಯ ಅವರು ಅಧಿಕಾರ 50-50 ಅಧಿಕಾರ ಹಂಚಿಕೆ ಮಾಡಿಕೊಂಡಿದ್ದಾರೆ ಎಂದು ನಾನು ಸಂಡೂರಿನಲ್ಲಿ ನಡೆದ ಸಂದರ್ಭದಲ್ಲಿಯೇ ಹೇಳಿದ್ದೆ. ಅದೀಗ ನಿಜವಾಗುತ್ತಿದೆ ಎಂದು ಹೇಳಿದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



