ಕನ್ನಡದ ಖ್ಯಾತ ನಿರೂಪಕಿ/ನಟಿ ಅನುಶ್ರೀ ಮದುವೆಯ ವದಂತಿ ಕಳೆದ ಕೆಲ ತಿಂಗಳಿಂದ ಜೋರಾಗಿತ್ತು. ಇದೀಗ ಮದುವೆಗೆ ದಿನಾಂಕ ಫಿಕ್ಸ್ ಆಗಿದೆ ಅನ್ನೋ ಮಾಹಿತಿ ಬಹುತೇಕ ಖಚಿತವಾಗಿದ್ದು ಆಗಸ್ಟ್ 28ಕ್ಕೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಕುಟುಂಬಸ್ಥರು ನೋಡಿದ ಹುಡುಗನ ಜೊತೆಯೇ ಅನುಶ್ರೀ ಮದುವೆಯಾಗುತ್ತಿದ್ದು ಮಂಗಳೂರು ಮೂಲದ ಬೆಂಗಳೂರಿನಲ್ಲಿ ನೆಲೆಸಿರುವ ಟೆಕ್ಕಿ ಜೊತೆ ಅನುಶ್ರೀ ಕಲ್ಯಾಣ ಎನ್ನಲಾಗುತ್ತಿದೆ. ಮದುವೆ ನಿಶ್ಚಯವಾಗಿರುವ ಹುಡುಗ ಹಾಗೂ ಇನ್ನಿತರ ಮಾಹಿತಿಯನ್ನು ಅನುಶ್ರೀ ಗೌಪ್ಯವಾಗಿರಿಸಿದ್ದಾರೆ. ಆಗಸ್ಟ್ 28 ರಂದು ಬೆಂಗಳೂರಿನಲ್ಲೇ ಅದ್ದೂರಿ ಆರತಕ್ಷತೆಗೆ ಸ್ಥಳ ನಿಗದಿಯಾಗಿರುವ ಸುದ್ದಿ ಬಂದಿದೆ.
ಅನುಶ್ರೀ ಮದುವೆ ವಿಚಾರವಾಗಿ ಹಲವು ತಮಾಷೆಯ ಸಂಭಾಷಣೆಗಳು ನಡೆಯುತ್ತಲೇ ಇತ್ತು. ಮದುವೆ ಸುದ್ದಿ ಕೇಳ್ದಾಗೆಲ್ಲಾ ಈ ವರ್ಷವೇ ಮದುವೆ ಎಂದಿದ್ದರು ಅನುಶ್ರೀ. ಇದೀಗ ಮದುವೆಗೆ ಕಾಲ ಕೂಡಿಬಂದಿದ್ದು ಆಗಸ್ಟ್ 28ಕ್ಕೆ ಕಲ್ಯಾಣ ಎನ್ನಲಾಗುತ್ತಿದೆ. ಸರಳ ಶಾಸ್ತ್ರೋಕ್ತವಾಗಿ ಮದುವೆಯಾಗಿ ಬಳಿಕ ಆಗಸ್ಟ್ 28ಕ್ಕೆ ಸಿನಿಮಾ ಇಂಡಿಸ್ಟ್ರಿಯವರನ್ನ ಆಮಂತ್ರಿಸಿ ಅದ್ದೂರಿಯಾಗಿ ಆರತಕ್ಷತೆ ಮಾಡಿಕೊಳ್ಳವ ಸಾಧ್ಯತೆ ಇದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



