ದೇಶದಲ್ಲಿ ಅಕ್ರಮ ನುಸುಳುಕೋರರ ಹಾವಳಿ ತಡೆಯಲು ಬಂದರೂ, ಈ ಕಾನೂನಿನಲ್ಲಿ ಬದಲಾವಣೆ ಆಗಿಲ್ಲ, ಇದರಿಂದ ಎಲ್ಲೆಡೆ ಅಕ್ರಮ ಬಾಂಗ್ಲಾ ನುಸುಳುಕೋರರು ಹೆಚ್ಚಿದ್ದು, ನಕಲಿ ದಾಖಲೆ ಇಟ್ಟುಕೊಂಡಿದ್ದಾರೆ. ಹೀಗಾಗಿ, ಗ್ರಾಮ ಪಂಚಾಯಿತಿ ಮಟ್ಟದಿಂದಲೇ ಕೂಂಬಿಂಗ್ ಶುರುವಾಗಬೇಕು ಎಂದು ಮಾಜಿ ಸಚಿವರಾದ ಅರವಿಂದ ಲಿಂಬಾವಳಿ ಹಾಗೂ ಕುಮಾರ್ ಬಂಗಾರಪ್ಪ ಆಗ್ರಹಿಸಿದ್ದಾರೆ.ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧದ ಜಾಗೃತಿ ಅಭಿಯಾನದ ಅಂಗವಾಗಿ ಗುರುವಾರ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಕುಂಬ್ರಳ್ಳಿ, ಕೆಂಚಮ್ಮನ ಹೊಸಕೋಟೆ ಹೋಬಳಿಯ ವಾಟೆಪುರ ಕಾಫಿ ಎಸ್ಟೇಟ್ ಗಳಿಗೆ ಭೇಟಿ ನೀಡಿ, ತೋಟದ ಕಾರ್ಮಿಕರೊಂದಿಗೆ ಅವರು ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಮಿಕರು ಹಲವು ಸಮಸ್ಯೆಗಳನ್ನು ತಂಡದ ಮುಂದೆ ತೆರೆದಿಟ್ಟರು.ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದ ಲಿಂಬಾವಳಿ, ಈ ಮೊದಲು ತಮಗೆ ವಾರಪೂರ್ತಿ ಕೆಲಸ ಸಿಗುತ್ತಿತ್ತು. ಬಾಂಗ್ಲಾ ವಲಸಿಗರಿಂದ ತೊಂದರೆಯಾಗುತ್ತಿದೆ ಎಂದು ಸ್ಥಳೀಯ ಕಾರ್ಮಿಕರು ನಮ್ಮ ಬಳಿ ಅಳಲು ತೋಡಿಕೊಂಡಿದ್ದಾರೆ ಎಂದರು.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ಹೌದು, ನಿಮ್ಮ ಊರಿನಲ್ಲಿ ಜಾತ್ರೆ, ಸಭೆ, ಸಮಾರಂಭಗಳು ನಡೆದರೆ ಅದನ್ನು ಬಯಲುಸೀಮೆಟೈಮ್ಸ್.ಕಾಂ ಮೂಲಕ ನಾಡಿಗೆ ತಿಳಿಸಿ. ಅಷ್ಟೇ ಅಲ್ಲ ನಿಮ್ಮೂರಿನ ರಸ್ತೆ, ಚರಂಡಿ, ಆಸ್ಪತ್ರೆ , ಶಾಲೆ ಯಾವುದೇ ಸಮಸ್ಯೆ ಇದ್ದರೂ ಅಧಿಕಾರಿಗಳ ಕಣ್ಣು ತೆರೆಯುವಂತೆ ಸುದ್ದಿ ಮಾಡಿ. ನೀವು ಜಸ್ಟ್ ನಮ್ಮ ವಾಟ್ಸ್ ಆಪ್ ಸಂಖ್ಯೆಗೆ ಸುದ್ದಿ ಕಳುಹಿಸಿ ಉಳಿದದ್ದನ್ನು ಬಯಲುಸೀಮೆಟೈಮ್ಸ್.ಕಾಂ ಮಾಡಲಿದೆ. ನಮ್ಮ ವಾಟ್ಸ್ ಆಪ್ ಸಂಖ್ಯೆ: +91 96201 39796
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.



